ಜಿಲ್ಲಾ ಕೇಂದ್ರ ಘೋಷಣೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Sep 7, 2022, 2:56 PM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರವನ್ನು ಬೆಂಗಳೂರು ಗ್ರಾಮಾಂತರ ಜಿÇÉಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ, ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಹಂತಗಳಲ್ಲಿ ನಡೆಸುತ್ತಿರುವ ಹೋರಾಟದ ಅಂಗವಾಗಿ ನಗರದ ಡಿ. ಕ್ರಾಸ್ ವೃತ್ತದಲ್ಲಿ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಹೆದ್ದಾರಿ ತಡೆಯಿಂದಾಗಿ 30 ನಿಮಿಷ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಪ್ರತಿಭಟನೆ ವೇಳೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು, ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಆಗ್ರಹಿಸಿದರು.
ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡ ಸಂಜೀವ್ ನಾಯಕ್ ಮಾತನಾಡಿ, ಜಿಲ್ಲಾ ಉಸ್ತುವಾರಿಸಚಿವ ಸಚಿವ ಡಾ. ಕೆ.ಸುಧಾಕರ್ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿಸುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ ತಾಲೂಕಿನಲ್ಲಿ ಹೋರಾಟ ನಡೆಸಲಾಗುತ್ತಿದ್ದು, ಈ ಕುರಿತಂತೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಯಿತು. ಆ ವೇಳೆ ವರದಿ ತರಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ಮುಖ್ಯಮಂತ್ರಿಗಳು ನೀಡಿದ್ದರು. ಆದಾಗ್ಯೂ ಸುಧಾಕರ್ ವರು ಪದೇ ಪದೆ ಹೇಳಿಕೆ ನೀಡಿ ದೇವನಹಳ್ಳಿ-ದೊಡ್ಡಬಳ್ಳಾಪುರ ತಾಲೂಕಿನ ಜನರ ನಡುವೆ ಕಂದಕ ಸೃಷ್ಟಿಸಲು ಮುಂದಾಗುತ್ತಿದ್ದಾರೆ ಎಂದರು.
ದೊಡ್ಡಬಳ್ಳಾಪುರಕ್ಕೆ ಅನ್ಯಾಯ: ನಗರಸಭಾ ಸದಸ್ಯ ಟಿ.ಎನ್. ಪ್ರಭುದೇವ್ ಮಾತನಾಡಿ, ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಕಾರಣ ಜಿ ಕೇಂದ್ರವಾಗಲು ಎಲ್ಲಾ ಅರ್ಹತೆಗಳಿದ್ದರೂ, ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯ ಮಾಡಲಾಗುತ್ತಿದೆ. ಜನರ ಭಾವನೆಗಳಿಗೆ ಮನ್ನಣೆ ನೀಡದೆ ಏಕಾಏಕಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಿದರೆ, ಅದರ ಪರಿಣಾಮವನ್ನು ರಾಜ್ಯ ಸರ್ಕಾರ ಎದುರಿಸಬೇಕಾಗುತ್ತದೆ ಎಂದರು.
ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಸಂಚಾಲಕ ರಾಜ ಘಟ್ಟ ರವಿ ಮಾತನಾಡಿ, ಬಿಜೆಪಿ ನಾಯಕರು ದೊಡ್ಡಬಳ್ಳಾಪುರ ತಾಲೂಕಿನ ಜನರ ಆಶೋತ್ತರಗಳಿಗೆ ಸ್ಪಂದಿಸದೆ, ಜನೋತ್ಸವಕ್ಕೆ ತೆರಳಿ ಹೇಗೆ ವೇದಿಕೆ ಹತ್ತಿವಿರೋ ನೋಡುತ್ತೇವೆ. ಜನೋತ್ಸವ ಮಾಡಲು ಮುಂದಾದರೆ ಅದರ ವಿರುದ್ಧವಾಗಿ ದೊಡ್ಡಬಳ್ಳಾಪುರದಲ್ಲಿ ಕರಾಳ್ಳೋತ್ಸವ ಮಾಡಲಾಗುವುದು ಎಂದರು.
ಜನೋತ್ಸವಕ್ಕೆ ವಿರೋಧ: ಜನೋತ್ಸವ ಕಾರ್ಯಕ್ರಮಕ್ಕೆ ನಮ್ಮ ತಕರಾರು ಇಲ್ಲ. ಆದರೆ, ಜನೋತ್ಸವ ಯಶಸ್ವಿಯಾಗಬೇಕಾದಲ್ಲಿ ಅದಕ್ಕೂ ಮುನ್ನಾ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕಿದೆ. ಇಲ್ಲ ವಾದಲ್ಲಿ ಜನೋತ್ಸವ ಎಂಬ ಭ್ರಷ್ಟೋತ್ಸವವನ್ನು ತಡೆಯಲು ತಾಲೂಕಿನ ಜನತೆ ಒಗ್ಗಟ್ಟಾಗಿದ್ದೇವೆ ಎಂದರು.
ಕರಾಳ್ಳೋತ್ಸವ ಆಗಲಿದೆ: ಬಿಜೆಪಿ ಮುಖಂಡರು ಜನೋತ್ಸವಕ್ಕೆ ಮುಂಚೆ ಸಚಿವ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಕರೆಸಿ, ದೊಡ್ಡಬಳ್ಳಾಪುರ ಜನತೆ, ಸಂಘಟನೆಗಳ ಮುಖಂಡರ ಜೊತೆ ಚರ್ಚೆ ಮಾಡಿಸಬೇಕಿದೆ. ಇಲ್ಲವಾದಲ್ಲಿ ನಿಮ್ಮ ಜನೋತ್ಸವ ಕರಾಳ್ಳೋತ್ಸವ ಆಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಹೋರಾಟ ಸಮಿತಿ ಮುಖಂಡ ಡಿ.ಪಿ. ಆಂಜನೇಯ, ಕೆ.ಎಂ. ಕೃಷ್ಣಮೂರ್ತಿ, ಜಿ.ಸತ್ಯನಾರಾಯಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.