ಸದಾಶಿವ ಆಯೋಗ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Oct 6, 2020, 12:11 PM IST
ದೇವನಹಳ್ಳಿ: ನ್ಯಾ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಜಿಲ್ಲಾ ಮತ್ತು ತಾಲೂಕು ಕರ್ನಾಟಕ ಮಾದಿಗ ದಂಡೋರ ಸಮುದಾಯ ವತಿಯಿಂದ ತಾಲೂಕಿನ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಮಾದಿಗ ದಂಡೋರ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಮಾತನಾಡಿ, ಮಾದಿಗರಿಗೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದೆ. ಅವರಿಗೆ ಸಾಮಾಜಿಕ ನ್ಯಾಯ ಕೊಡಬೇಕು ಎಂಬುವುದು ಮನಸ್ಸಿನಲ್ಲಿದೆ. ಆದರೆ ಕಾಣದ ಕೈಗಳು ವರದಿ ಜಾರಿ ಮಾಡಲು ಬೀಡುತ್ತಿಲ್ಲ ಎಂದು ಆರೋಪಿಸಿದರು.
ನಿಜವಾದ ಪರಿಶಿಷ್ಟ ಜಾತಿ ಅಸೃಷ್ಯರಿಗೆ ಅನ್ಯಾಯವಾಗುತ್ತಿದೆ. ವರದಿ ಜಾರಿಗೆ ವಿರೋಧ ಮಾಡಿದರೆ, ಪರಿಶಿಷ್ಟ ಪಟ್ಟಿಯಿಂದ ನಿಮ್ಮನ್ನು ತೆಗೆದು ಹೊರಹಾಕ ಬೇಕು ಎಂದು ಮುಂದಿನ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ದೊಡ್ಡ ಸಂಖ್ಯೆಯಲ್ಲಿರುವ ಮಾದಿಗ ಜಾತಿಗೆ ಮೀಸಲಾತಿಯಲ್ಲಿ ಎ,ಬಿ,ಸಿ,ಡಿ ವರ್ಗೀಕರಣ ಮಾಡಿಸಾಮಾಜಿಕ ನ್ಯಾಯ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ ಎಂದರು.
ಪ್ರಜಾ ವಿಮೋಚನಾ ಬಹುಜನ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿಜ್ಜ ವಾರ ನಾಗರಾಜ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಮಾದಿಗ ಸಂಘಟನೆ ವತಿಯಿಂದ ಸದಾಶಿವ ಆಯೋಗವನ್ನು ಎಥಾವತ್ತಾಗಿ ಜಾರಿಗೊಳಿಸಲು ಪ್ರತಿಭಟನೆ ಹಮ್ಮಿಕೊಳ್ಳುವುದರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದರು.
ಬೆರಳೆಣಿಕೆಯಷ್ಟು ಇರುವ ಸ್ಪರ್ಶ ಜಾತಿಯ ಕೆಲವರು ಈ ಪರಿಶಿಷ್ಟ ಜಾತಿಗೆ ಬರುವ ಎಲ್ಲಾ ಅನುದಾನ ಪಡೆಯುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಬಹು ಸಂಖ್ಯಾತವಾಗಿರುವ ಮಾದಿಗ ಜನಾಂಗ ಹಿಂದುಳಿದಿದೆ ಎಂದರು.
ಬಿಕೆಎಸ್ ಪ್ರತಿಷ್ಠಾನದ ಅಧ್ಯಕ್ಷ ಬಿ.ಕೆ. ಶಿವಪ್ಪ ಮಾತನಾಡಿ, ನಾಮಕಾವಸ್ಥೆಗೆ ಆದಿಜಾಂಭವ ನಿಗಮ ಸ್ಥಾಪಿಸಿ ಇದುವರೆಗೂ ಅಧ್ಯಕ್ಷ, ನಿರ್ದೇಶಕರನ್ನು ನೇಮಿಸಿಲ್ಲ. ಹಾಗೂ ಅನುದಾನ ಬಿಡುಗಡೆಗೊಳಿಸಿ ಎಂದು ಹೇಳಿದರು. ಈ ವೇಳೆ ಆದಿ ಜಾಂಭವ ಸೇವಾ ಟ್ರಸ್ಟ್ ಕೃಷ್ಣಮೂರ್ತಿ, ಅರುಂಧತಿ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಮಾತಂಗಾ ಮಹರ್ಷಿ ಸೇವಾ ಟ್ರಸ್ಟ್ ಪದಾಧಿಕಾರಿಗಳು, ದಲಿತ ಸ್ವಾಭಿಮಾನಿ ಸಮಿತಿ ಪದಾಧಿಕಾರಿಗಳು, ಕರ್ನಾಟಕ ದಲಿತ ಜನಸೇನೆ ಪದಾಧಿಕಾರಿಗಳು, ಸಫಾಯಿ ಕರ್ಮಚಾರಿಕಾವಲುಸಮಿತಿಸಂಚಾಲಕ ಮ್ಯಾಥ್ಯು ಮುನಿಯಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.