ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸಿ


Team Udayavani, Dec 13, 2022, 12:14 PM IST

ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸಿ

ದೇವನಹಳ್ಳಿ: ನಿತ್ಯ ಜೀವನದಲ್ಲಿ ಕಷ್ಟ ಪಡುವ ವಿದ್ಯಾರ್ಥಿಗಳಿಗೆ ಸೇವಾ ದೃಷ್ಟಿಯಿಂದ ಸರ್ಕಾರ ಸೂಕ್ತ ಸಾರಿಗೆಯ ವ್ಯವಸ್ಥೆ ಕಲ್ಪಿಸಬೇಕು, ವಿದ್ಯಾರ್ಥಿ ವೇತನ, ಉನ್ನತ ವ್ಯಾಸಂಗ ಹಾಗೂ ಉದ್ಯೋಗಾವಕಾಶಗಳಿಗಾಗಿ ಪರೀಕ್ಷಾ ಫ‌ಲಿತಾಂಶ ಶೀಘ್ರವೇ ಪ್ರಕಟಿಸಬೇಕು ಎಂದು ಮಾಜಿ ಶಾಸಕ ಮುನಿನರಸಿಂಹಯ್ಯ ಒತ್ತಾಯಿಸಿದರು.

ವಿಶ್ವವಿದ್ಯಾಲಯಗಳು, ಸಂಯೋಜಿತ ಕಾಲೇಜು ವಿದ್ಯಾರ್ಥಿಗಳ ಹಲವು ಸಮಸ್ಯೆಗಳ ಈಡೇರಿಸುವಂತೆ, ರಾಜ್ಯಾದ್ಯಂತ ಕಾಲೇಜುಗಳ ಬಂದ್‌ ಮಾಡಿ, ಇಂದಿನ ಶಿಕ್ಷಣ ವ್ಯವಸ್ಥೆಯ ವಿರುದ್ಧ ಪ್ರತಿಭಟಿಸಲು ಡಿ.7ರಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಹಮ್ಮಿಕೊಂಡಿರುವ ಹೋರಾಟದ ಬಗ್ಗೆ ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಮಾತನಾಡಿದರು.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಕಾಲಹರಣ ಮಾಡುತ್ತಿದೆ. ಅನುದಾನ ಕೇಳಿದರೆ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಹೇಳಲಾಗುತ್ತಿದೆ. ಇಂತಹ ಸರ್ಕಾರದಿಂದ ರಾಜ್ಯ ಅಭಿವೃದ್ಧಿ ಸಾಧ್ಯವಿಲ್ಲ. ದೇವನಹಳ್ಳಿ ತಾಲೂಕಿನಲ್ಲಿ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿದ್ದು, ಹಲವು ಮಂದಿ ಬಿದ್ದು, ಗಾಯಮಾಡಿಕೊಂಡು ಅಪಾಯದಿಂದ ಪಾರಾಗುತ್ತಿದ್ದಾರೆ. ತಾಲೂಕಿನಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಸರ್ಕಾರ ಬಿಜೆಪಿ ಸರ್ಕಾರ ಇದೆ. ಅನುದಾನ ಸಮರ್ಪಕವಾಗಿ ನೀಡದೆ ಇರುವುದರಿಂದ ತಾಲೂಕನ್ನು ಸಾಕಷ್ಟು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

17ರಂದು ಬಂದ್‌: ಬಸ್‌ಪಾಸ್‌ ವಿತರಣೆ ಸಮಸ್ಯೆ, ವಿದ್ಯಾರ್ಥಿ ವೇತನ ವಿಳಂಬ ಮುಂತಾದ ಸಮಸ್ಯೆಗಳಿಗೆ ಸರ್ಕಾರ ಸರಿಯಾಗಿ ಸ್ಪಂದಿಸದ ಕಾರಣ, ಡಿ.17ರಂದು ಕಾಲೇಜುಗಳನ್ನು ಬಂದ್‌ ಮಾಡಿಸುವುದಾಗಿ ತಿಳಿಸಿದರು. ಇಂದಿನ ಸರ್ಕಾರ ಸುಳ್ಳು ಹೇಳಿಕೆ ನೀಡುತ್ತ, ಅಭಿವೃದ್ಧಿ ಕಡೆ ಗಮನ ನೀಡದೆ, ಎಲ್ಲಾ ಕಡೆ ರಸ್ತೆಗಳು ಹಾಳಾಗಿದ್ದು, ಯಾವುದೇ ಯೋಜನೆಗಳಿಗೆ ಕಾರ್ಯರೂಪ ನೀಡುತ್ತಿಲ್ಲ, ಪದೇ ಪದೆ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದ್ದು, ರೈತರಿಗೂ ತೊಂದರೆಯಾಗುತ್ತಿದೆ. ಎಸ್ಸಿ -ಎಸ್ಟಿ ವಿದ್ಯಾರ್ಥಿಗಳ ಅನುದಾನ ಸಹ ಕಡಿಮೆ ಮಾಡಲಾಗಿದೆ. ನಮ್ಮ ಪಕ್ಷ 70 ವರ್ಷದಲ್ಲಿ ಅಭಿವೃದ್ಧಿ ಮಾಡದೇ ಇರುವುದನ್ನು ಇಂದಿನ ಸರ್ಕಾರ ಅಭಿವೃದ್ಧಿಪಡಿಸುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕಾಲೇಜುಗಳ ಬಂದ್‌: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಮುಖೇಶ್‌ ಬಾಬು ಮಾತನಾಡಿ, ವಿದ್ಯಾರ್ಥಿಗಳು ಬರೆದ ಪರೀಕ್ಷೆಯ ಫ‌ಲಿತಾಂಶಗಳ ವಿಳಂಬ, ವಿದ್ಯಾರ್ಥಿ ವೇತನ, ಸಾರಿಗೆ ಬಸ್‌, ಸರ್ಕಾರಿ ಕಾಲೇಜು ಶುಲ್ಕ ಏಕಾಏಕಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಎಲ್ಲಾ ವರ್ಗದ ವಿದ್ಯಾ ರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡಬೇಕು, ಸರ್ಕಾರಿ ಕಾಲೇಜಿನಲ್ಲಿ ಶುಲ್ಕ ಕಡಿಮೆ ಮಾಡಬೇಕು, ವಿದ್ಯಾರ್ಥಿ ವೇತನ ತಕ್ಷಣವೇ ಬಿಡುಗಡೆ ಮಾಡಬೇ ಕೆಂದು ಒತ್ತಾಯಿಸಿ, ಡಿ.17 ರಂದು ಕಾಲೇಜುಗಳನ್ನು ಬಂದ್‌ ಮಾಡಿಸುವುದಾಗಿ ತಿಳಿಸಿದರು.

ಬಿಜೆಪಿ ಸರ್ಕಾರ ಕಿತ್ತು ಹಾಕಬೇಕು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಇದ್ದಾಗ ವಿದ್ಯಾರ್ಥಿಗಳಿಗೆ ಸಾಕಷ್ಟು ಕಾನೂನು ಮತ್ತು ಯೋಜನೆಗಳನ್ನು ತಂದಿತ್ತು. ಈಗಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಹಕ್ಕನ್ನು ಕಸಿಯುತ್ತಿದೆ. ರಾಜ್ಯ ದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತದೆ. ಇಂತ ಬಿಜೆಪಿ ಸರ್ಕಾರವನ್ನು ಕಿತ್ತೂಗೆಯಬೇಕು ಎಂದು ಹೇಳಿದರು. ಈ ವೇಳೆಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ಕಯ್ಯಮ್ಮ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಮುರಳಿ, ಜಿಲ್ಲಾ ಉಪಾಧ್ಯಕ್ಷ ಹರ್ಷ, ವಿಜಯ್‌ ಕುಮಾರ್‌, ತಾಲೂಕು ಉಪಾಧ್ಯಕ್ಷ ಹರೀಶ್‌, ಜಿಲ್ಲಾ ಐಟಿ ವಿಂಗ್‌ ಅಧ್ಯಕ್ಷ ಸಂದೀಪ್‌ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.