ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ನೀಡಿ
Team Udayavani, Aug 22, 2020, 12:10 PM IST
ಆನೇಕಲ್: ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಸಂಘದ ಅಧ್ಯಕ್ಷ ರಂಗನಾಥ್ ನೇತೃತ್ವದಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಆನೇಕಲ್ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸುದ್ದಿಗಾರರೊಂದಿಗೆ ಶಿಕ್ಷಕರ ಮತ್ತು ಆಡಳಿತ ಮಂಡಳಿ ಪೋರಂ ಸಂಘದ ಅಧ್ಯಕ್ಷ ರಂಗನಾಥ್ ಮಾತನಾಡಿ, ಖಾಸಗಿ ಶಾಲೆಯ ಶಿಕ್ಷಕರು ಉದ್ಯೋಗಲ್ಲವಿದೇ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದು, ಕೂಡಲೇ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಶಾಲೆಯ ಶಿಕ್ಷಕರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಸಂಬಳ ನೀಡುತ್ತಿದೆ. ಸೌಲಭ್ಯಗಳನ್ನು ನೀಡುತ್ತಿದೆ.ಆದರೆ ಖಾಸಗಿ ಶಾಲೆ ಶಿಕ್ಷಕರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಬಿಡಿಗಾಸು ನೀಡಿಲ್ಲ. ಶಿಕ್ಷಕರ ಕುಟುಂಬಗಳು ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಪ್ರಜ್ವಲ್ ರೇವಣ್ಣ ಬ್ರಿಗೇಡ್ ಕರ್ನಾಟಕ ರಾಜ್ಯಾಧ್ಯಕ್ಷ ಬಿದರಗುಪ್ಪೆ ನರೇಂದ್ರ ಬಾಬು, ಶಿಕ್ಷಕರ ಮತ್ತುಆಡಳಿತ ಮಂಡಳಿ ಪೋರಂ ಸಂಘದ ಮುಕುಂದರಾಜ್, ಸೂಡಿ ಸುರೇಶ್, ನರಸೇಗೌಡ ಮತ್ತು ಖಾಸಗಿ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.