ಗುಣಮಟ್ಟದ ಆಹಾರ ಪೂರೈಕೆ ಕರ್ತವ್ಯ: ಕೃಷ್ಣಮೂರ್ತಿ

Team Udayavani, Apr 8, 2020, 3:05 PM IST

ಗುಣಮಟ್ಟದ ಆಹಾರ ಪೂರೈಕೆ ಕರ್ತವ್ಯ: ಕೃಷ್ಣಮೂರ್ತಿ

ನೆಲಮಂಗಲ: ಆಹಾರ ಭದ್ರತೆ ಕಾಯ್ದೆ ಪ್ರಕಾರ ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕರ್ನಾಟಕ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್‌. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ತಾಲೂಕಿನ ನ್ಯಾಯಬೆಲೆ ಅಂಗಡಿ ಆಹಾರ ಪದಾರ್ಥ ಪರಿಶೀಲನೆ ನಡೆಸಿ ಮಾತನಾಡಿ, ಲಾಕ್‌ಡೌನ್‌ನಿಂದಾಗಿ ಬಡವರು ಕೂಲಿಕಾರ್ಮಿಕರಿಗೆ ಆಹಾರದ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಸರಕಾರ ಎರಡು ತಿಂಗಳ ಮುಂಗಡ ಪಡಿತರ ವಿತರಣೆಗೆ ಆದೇಶ ನೀಡಿದೆ. ಹೀಗಾಗಿ ವಿತರಣೆ ಸಮರ್ಪಕವಾಗಿ ತರಿಸಲಾಗುತ್ತಿದೆಯೇ? ಎಂಬುದನ್ನು ಪರಿಶೀಲಿಸಲಾಗಿದೆ. ಆದರೆ, ತಾಲೂಕಿನಲ್ಲಿ ಸಮಸ್ಯೆ ಕೇಳಿ ಬಂದಿಲ್ಲ ಎಂದು ತಿಳಿಸಿದರು.

ಗೋಧಿ ಕೆಟ್ಟಿಲ್ಲ: ಕಳೆದ 3 ದಿನಗಳ ಹಿಂದೆ ಪಟ್ಟಣದ ತಲಕಾಡು ಸುಬ್ಬರಾಯರ ಬೀದಿಯಲ್ಲಿ ನ್ಯಾಯ ಬೆಲೆ ಅಂಗಡಿಯಲ್ಲಿ ಗೋಧಿಗೆ ಹುಳು ಬಿದ್ದಿ ರುವ ಪ್ರಕರಣ ವರದಿಯಾಗಿತ್ತು. ಅದನ್ನು ಪರಿಶೀಲಿ ಸಲಾಗಿದ್ದು, ಗೋಧಿ ಕೆಟ್ಟಿಲ್ಲ, ಹುಳು ಬಿದ್ದಿಲ್ಲ. ಗೋಧಿ ಚೀಲಗಳು ವಿವಿಧ ಬಗೆಯ ಹಿಟ್ಟಿರುವ ಚೀಲಗಳ ಮಧ್ಯೆ ಇದ್ದಿದ್ದರಿಂದ ಹಿಟ್ಟಿನ ಮಿಶ್ರಣವಾಗಿತ್ತು. ಹೀಗಾಗಿ ಗೋಧಿ ಕಳಪೆಯಂತೆ ಕಂಡಿದೆ. ತಾಲೂಕಿಗೆ ಸರಬರಾ ಜಾಗಿದ್ದ 922 ಚೀಲ ಗೋಧಿ ಸರಿಪಡಿಸಿ ವಿತರಿಸಲು ಸೂಚನೆ ನೀಡಲಾಗಿದೆ ಎಂದರು.

ತಾಲೂಕಿನ ಜಯನಗರ, ಟಿಎಪಿಸಿಎಂಎಸ್‌, .ಕೆ. ಅಗ್ರಹಾರ, ಕುಲುವನಹಳ್ಳಿ, ಅರೆಬೊಮ್ಮನಹಳ್ಳಿ ನ್ಯಾಯಬೆಲೆ ಅಂಗಡಿಗಳಿಗೆ ಆಯೋಗ ಭೇಟಿನೀಡಿ ಪರಿಶೀಲಿಸಿ ಪಡಿತರದಾರರ ಸಮಸ್ಯೆ ಆಲಿಸಿ, ಮಾಲಿಕರು ಪಡಿತರ ವಿತರಣೆಯಲ್ಲಿ ಸಮಯಪಾಲನೆ ಮಾಡುತಿಲ್ಲ ಎಂಬ ದೂರುಗಳು ಕೇಳಿ ಬಂದವು.

ಪಟ್ಟಣದ ತಲಕಾಡು ಸುಬ್ಬರಾಯರ ಬೀದಿಯಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಕಳಪೆ ಗೋದಿ ವಿತರಣೆ ಕುರಿತಾಗಿ ಏ.6ರಂದು ಉದಯವಾಣಿ ಪತ್ರಿಕೆಯಲ್ಲಿ “ಹುಳುತಿಂದ ಗೋಧಿ ವಿತರಣೆ’ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೆ ಎಚ್ಚೆತ್ತ ಇಲಾಖೆ ಮತ್ತು ನಿಗಮದ ಅಧಿಕಾರಿ ಗಳು ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ರಾಜ್ಯ ಆಹಾರ ನಿಗಮದ ಸದಸ್ಯ ಎಚ್‌.ವಿ. ಶಿವಶಂಕರ್‌, ನೋಡೆಲ್‌ ಅಧಿಕಾರಿ ಗೌತಮ್‌ರಾಜು, ಆಹಾರ ನಿರೀಕ್ಷಕ ಅಮಾನುಲ್ಲಾ, ಟಿಎ ಪಿಸಿಎಂಎಸ್‌ ಕಾರ್ಯದರ್ಶಿ ರಮೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.