ವಿದೇಶದಿಂದ ಬಂದ 681 ಮಂದಿಗೆ ಕ್ವಾರಂಟೈನ್‌

Team Udayavani, May 25, 2020, 7:44 AM IST

videsha-281

ದೇವನಹಳ್ಳಿ: ಕೋವಿಡ್‌ 19 ಲಾಕ್‌ಡೌನ್‌ ಪರಿ ಸ್ಥಿತಿಯಲ್ಲಿ ವಿವಿಧ ದೇಶಗಳಿಂದ ಒಟ್ಟು 681 ಪ್ರಯಾಣಿಕರು ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾನು ವಾರ ಬಂದಿಳಿದಿದ್ದಾರೆ. ಸಿಂಗಾಪೂರ್‌ನಿಂದ 180   ಮಂದಿ, ಮೆಲ್ಬೋರ್ನ್ ನಿಂದ 207, ದುಬೈ 180, ಟೊರೆಂಟೋದಿಂದ 146 ಪ್ರಯಾಣಿಕರು ಬಂದಿದ್ದಾರೆ. ಸಿಂಗಾಪೂರ್‌ನಿಂದ 14ನೇ ಏರ್‌ ಇಂಡಿಯಾ ವಿಮಾನದಲ್ಲಿ 180 ಅನಿವಾಸಿ ಭಾರತೀಯರು ಆಗಮಿಸಿದ್ದು ಅದರಲ್ಲಿ 03 ಮಕ್ಕಳು, 101  ಪುರುಷರು, 71 ಮಹಿಳೆ ಯರು ಇದ್ದಾರೆ.

15ನೇ ಏರ್‌ ಇಂಡಿಯಾ ವಿಮಾನದಲ್ಲಿ ಆಸ್ಟ್ರೇಲಿ ಯಾದ ಮೆಲ್ಬೋರ್ನ್ ನಿಂದ 207 ಪ್ರಯಾಣಿಕರು ಆಗಮಿ ಸಿದ್ದು ಅದರಲ್ಲಿ ಒಂದು ಮಗು, 99 ಪುರುಷ, 107 ಮಹಿಳೆ ಯರು ಇದ್ದಾರೆ. 16ನೇ  ಏರ್‌ ಇಂಡಿಯಾ ವಿಮಾನದಲ್ಲಿ ಟೊರೆಂ ಟೋದಿಂದ 146 ಪ್ರಯಾಣಿಕರು ಬಂದಿದ್ದು ಅದ ರಲ್ಲಿ 11 ಮಕ್ಕಳು ಸೇರಿ 84 ಪುರುಷರು, 62 ಮಹಿಳೆಯರು ಇದ್ದಾರೆ. 17ನೇ ಏರ್‌ ಇಂಡಿಯಾ ವಿಮಾನದಲ್ಲಿ ದುಬೈನಿಂದ 180 ಪ್ರಯಾಣಿಕರು  ಆಗಮಿ ಸಿದ್ದು ಅದರಲ್ಲಿ 3 ಮಕ್ಕಳು ಸೇರಿ 101 ಪುರುಷ, 76 ಮಹಿಳೆ ಯರು ಇದ್ದಾರೆ.

ದುಬೈನಿಂದ ಬಂದ ಏರ್‌ ಇಂಡಿಯಾ ವಿಮಾನ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗ ಳೂರು ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿತು. ತಜ್ಞ ವೈದ್ಯರು ಹಾಗೂ ಸಿಬ್ಬಂದಿ ವರ್ಗ 681 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು ಯಾವುದೇ ಪ್ರಯಾಣಿಕರಲ್ಲಿ ಕೋವಿಡ್‌ 19 ವೈರಸ್‌ನ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಎಲ್ಲಾ ಪ್ರಯಾಣಿಕರನ್ನು 14 ದಿನ  ಕ್ವಾರಂಟೈನ್‌ಗಾಗಿ ಹೋಟೆಲ್‌ಗ‌ಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ಈ ವೇಳೆ ಅಪರ ಜಿಲ್ಲಾಧಿ ಕಾರಿ ಡಾ.ಜಗದೀಶ್‌ ಕೆ. ನಾಯಕ್‌, ತಹಶೀಲ್ದಾರ್‌ ಅಜಿತ್‌ ಕುಮಾರ್‌, ಪುರಸಭಾ ಮುಖ್ಯಾಧಿಕಾರಿ  ಎ.ಎಚ್‌.ನಾಗರಾಜ್‌, ಅಧಿಕಾರಿಗಳು ಇದ್ದರು.

ಕೋವಿಡ್‌ 19 ಕರ್ಫ್ಯೂಗೆ ಸ್ತಬ್ಧ: ರಾಜ್ಯ ಸರ್ಕಾರ ಕೋವಿಡ್‌ 19 ತಡೆಗಟ್ಟುವ ನಿಟ್ಟಿ ನಲ್ಲಿ ರಾಜ್ಯಾದ್ಯಂತ ಕೋವಿಡ್‌ 19 ಕರ್ಫ್ಯೂ ಜಾರಿಗೊಳಿ ಸಿದ್ದು ಭಾನುವಾರ ತಾಲೂಕು ಸ್ತಬ್ಧವಾಗಿತ್ತು. ಎಂದಿನಂತೆ ಹಾಲು, ತರಕಾರಿ, ಮೆಡಿಕಲ್‌ ಸ್ಟೋರ್, ದಿನಸಿ  ಅಂಗಡಿ, ಆಸ್ಪತ್ರೆ ತೆರೆದಿ ದ್ದವು. ಹೋಟೆಲ್‌ಗ‌ಳಲ್ಲಿ ಪಾರ್ಸಲ್‌ ಗಳಿಗೆ ಅವಕಾಶ ಕಲ್ಪಿಸ ಲಾಗಿತ್ತು. ಜಿಲ್ಲಾಡಳಿತ ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 11 ಗಂಟೆವರೆಗೆ ಮಾಂಸದ ಮಾರಾಟಕ್ಕೆ ಅವ ಕಾಶ ನೀಡಿತ್ತು.

ಬೆಳಗ್ಗೆ ಕೆಲ ವಾಹನಗಳು  ಸಂಚರಿಸುತ್ತಿದ್ದವು. ನಂತರ 11 ಗಂಟೆ ವೇಳೆ ವಾಹನ ಸಂಚಾರ ಸ್ಥಗಿತವಾಗಿತ್ತು. ಪೊಲೀಸರು ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದರು. ತಾಲೂಕಿನ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ಬಿಎಂಟಿಸಿ, ಕೆಎಸ್‌ಆರ್‌ಟಿಸಿ  ಬಸ್‌ ಸ್ಥಗಿತವಾ ಗಿತ್ತು. ಪೋಲಿಸರು ವಾಹನದ ಮೂಲಕ ಬರುವ ಜನರಿಗೆ ಮಾಸ್ಕ್ ಧರಿಸಿ, ಪದೇ ಪದೆ ಓಡಾಡಬೇಡಿ ಎಂಬ ಸಂದೇಶ ಸಾರಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.