ಆರ್.ಎಲ್.ಜಾಲಪ್ಪ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
Team Udayavani, Dec 13, 2021, 12:22 PM IST
ದೊಡ್ಡಬಳ್ಳಾಪುರ: ಕೇಂದ್ರದ ಮಾಜಿ ಸಚಿವ ಹಾಗೂ ತಾಲೂಕಿನ ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಅವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು , ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಆರ್.ಎಲ್. ಜಾಲಪ್ಪ ಅವರನ್ನು ಭೇಟಿಯಾದ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯವನ್ನು ವಿಚಾರಿಸಿದರು. ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಾಯಕರಾದ ಜಾಲಪ್ಪ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿ ದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:- ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ
ಈ ವೇಳೆ ಶಾಸಕ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಮುಖಂಡರಾದ ಖಯ್ಯೂಂ, ಅನಿಲ್ ಕುಮಾರ್, ದೇವರಾಜ ಅರಸು ವಿದ್ಯಾಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ ಮತ್ತಿತರರು ಹಾಜರಿದ್ದರು. ಆರ್.ಎಲ್. ಜಾಲಪ್ಪ ಅವರು ಶೀಘ್ರ ಗುಣಮುಖರಾಗುವಂತೆ ತಾಲೂಕಿನ ರಾಜಕೀಯ ಮುಖಂಡರು, ಗಣ್ಯರು ಹಾಗೂ ದೇವರಾಜ ಅರಸು, ಆರ್.ಎಲ್. ಜಾಲಪ್ಪ ವಿದ್ಯಾಸಂಸ್ಥೆಯ ಸಿಬ್ಬಂದಿ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.