ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ
ಜಲಶಕ್ತಿ ಅಭಿಯಾನ ಜನಜಾಗೃತಿ ಜಾಥಾ | ಡೀಸಿ ಕರೀಗೌಡ ಸೂಚನೆ
Team Udayavani, Aug 10, 2019, 11:31 AM IST
ದೇವನಹಳ್ಳಿ ನಗರದ ಗಿರಿಯಮ್ಮ ವೃತ್ತದಲ್ಲಿರುವ ಡಾ.ಅಂಬೇಡ್ಕರ್‌ಭವನದಿಂದ ಆರಂಭವಾದ 'ಜಲಶಕ್ತಿ ಅಭಿಯಾನ' ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎಸ್ ಕರೀಗೌಡ ಚಾಲನೆ ನೀಡಿದರು.
ದೇವನಹಳ್ಳಿ: ಬಯಲು ಸೀಮೆಯಲ್ಲಿ ನೀರಿನ ಅಭಾವ ಹೆಚ್ಚಿದೆ. ಮಳೆಯ ನೀರನ್ನು ಸಂರಕ್ಷಿಸುವ ಅಗತ್ಯವಿದ್ದು, ಪ್ರತಿಯೊಬ್ಬರು ಮಳೆ ಕೊಯ್ಲು ಪದ್ಧತಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಹೀಗೆ ಮಾಡಿದರೆ ಮಾತ್ರ ಮುಂದಿನ ದಿನಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ಜಿಲ್ಲಾಧಿಕಾರಿ ಕರೀಗೌಡ ಹೇಳಿದರು.
ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್. ಅಂಬೇಡ್ಕರ್‌ಭವನದ ಹತ್ತಿರದಿಂದ ಹಳೆ ಬಸ್ ನಿಲ್ದಾಣ ಸೇರಿದಂತೆ ನಗರದ ರಾಜ ಬೀದಿಗಳಲ್ಲಿ ಜಿಲ್ಲಾಡಳಿತ ಹಾಗೂ ಬೆಂಗಳೂರು ಕೇಂದ್ರೀಯ ವಿವಿಯ ಎನ್‌ಎಸ್‌ಎಸ್ ಘಟಕದಿಂದ ‘ಜಲಶಕ್ತಿ ಅಭಿಯಾನ’ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಳೆ ಕೊಯ್ಲು ಕಡ್ಡಾಯ: ನೀರಿನ ಸಮಸ್ಯೆ ನೀಗಿಸಲು ಪ್ರತಿಯೊಂದು ಕೈಗಾರಿಕೆ ಕಟ್ಟಡ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು. ಜಲಶಕ್ತಿ ಹಾಗೂ ಜಲಾಮೃತ ಯೋಜನೆಯಡಿ ಜಿಲ್ಲೆಯಾದ್ಯಂತ ಚೆಕ್‌ಡ್ಯಾಂ ನಿರ್ಮಾಣ, ಕೆರೆ-ಕಲ್ಯಾಣಿಗಳ ಅಭಿವೃದ್ಧಿ, ಕೃಷಿಹೊಂಡ ನಿರ್ಮಾಣ ಹಾಗೂ ಗಿಡ ನೆಟ್ಟು ಜಲ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಮೊದಲು ತಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು. ಅಧಿಕಾರಿಗಳು ಶೀಘ್ರ ಮಳೆ ಕೊಯ್ಲು ಪದ್ಧತಿ ಅಳವಡಿಸಿರುವ ಫೋಟೋ ಸಮೇತವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
22ಕ್ಕೂ ಹೆಚ್ಚು ಕೆರೆ ಸ್ವಚ್ಛತೆ: ರಾಷ್ಟ್ರೀಯ ಸೇವಾದಳ ಸಹಾಯಕ ಸಂಯೋಜಕ ಡಾ.ಗೋವಿಂದ ಗೌಡ ಮಾತನಾಡಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮಗಳಲ್ಲೂ ಅಂತರ್ಜಲ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಜಲಾಮೃತ ಯೋಜನೆಯಡಿ 22 ಕ್ಕೂ ಹೆಚ್ಚು ಕೆರೆ ದತ್ತು ಪಡೆದು, ಹೂಳು ಹಾಗೂ ಕಲ್ಯಾಣಿ ಗಳ ಸ್ವಚ್ಛತೆ ಕಾರ್ಯಕ್ರಮ ಹಾಗೂ 3600 ಹೆಚ್ಚು ಗಿಡಗಳನ್ನು ನೆಡಲಾಗಿದೆ. ಬೆಂಗಳೂರು ಕೇಂದ್ರೀಯ ವಿವಿಯಿಂದ 3 ಚೆಕ್‌ಡ್ಯಾಂಗಳ ನಿರ್ಮಾಣ, ನಗರಗಳಲ್ಲಿ 1000 ಅಡಿ ಮೇಲ್ಪ ಟ್ಟು ಛಾವಣಿ ಮನೆಗಳಲ್ಲಿ ಕಡ್ಡಾಯವಾಗಿ ಮಳೆ ನೀರಿನ ಕೊಯ್ಲು ಅಳವಡಿಸಬೇಕು ಎಂದು ಮಾಹಿತಿ ನೀಡಿದರು.
ನೀರಿನ ಮಹತ್ವದ ತಿಳಿಸುವ ಜಾಗೃತಿ: ನಗರದ ವಿವಿಧ ಕಾಲೇಜುಗಳಿಂದ 800 ವಿದ್ಯಾರ್ಥಿಗಳು ಕಾಲ್ನಡಿಗೆ ಜಾಥಾದಲ್ಲಿ ‘ಜಲಶಕ್ತಿ ಹಾಗೂ ಜಲಾಮೃತ’ ಮಹತ್ವ ಸಾರಿದರು. ಜತೆಗೆ ಜಲಮೂಲ ನಿರ್ಮಿಸಿ- ಗಿಡ ಮರ ರಕ್ಷಿಸಿ ಎಂಬ ಘೋಷ ವಾಕ್ಯಗಳನ್ನು ಕೂಗಿದರು. ಜೀವಜಲ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿ ಗಳು ಪಾಲ್ಗೊಂಡರು.
ಜಿಪಂ ಉಪಕಾರ್ಯದರ್ಶಿ ಕೆ.ಕರಿಯಪ್ಪ, ಪ್ರಭಾರ ತಹಶೀಲ್ದಾರ್ ಬಾಲಕೃಷ್ಣ, ತಾಪಂ ಇಒ ಮುರುಡಯ್ಯ, ಜಿಪಂ ಉಪವಿಭಾಗದ ಅಭಿಯಂತರ ಮಂಜುನಾಥ್, ನೀರಿನ ಯೋಜನಾಧಿಕಾರಿ ಸೋಮಶೇಖರ್, ಎಸ್‌ಐ ಸಿದ್ಧರಾಜು, ತಾಪಂ ಮಾಜಿ ಅಧ್ಯಕ್ಷ ಬಿ.ಕೆ ಶಿವಪ್ಪ, ಎನ್‌ಎಸ್‌ಎಸ್ ಘಟಕದ ಸಜ್ಜದ್ ಪಾಷ, ರವಿಚಂದ್ರನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.