ಸೋಂಕು ನಿಯಂತ್ರಣ ಜಾಗೃತಿ ಮೂಡಿಸಿ
Team Udayavani, Oct 11, 2020, 1:33 PM IST
ದೇವನಹಳ್ಳಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆಕೊರೊನಾ ಹರಡುವಿಕೆ ಹಾಗೂ ಅದರ ನಿಯಂತ್ರಿಸುವಿಕೆ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ವೈರಸ್ ನಿಯಂತ್ರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಇಲಾಖೆ ಅಧಿಕಾರಿಗಳು 3-4 ದಿನಗಳಲ್ಲಿ ಕ್ರಿಯಾಯೋಜನೆ ರೂಪಿಸಬೇಕೆಂದರಲ್ಲದೆ, ಕೋವಿಡ್ ಸೋಂಕಿನಜಾಗೃತಿಮೂಡಿಸುವ ನಿಟ್ಟಿನಲ್ಲಿಇಲಾಖೆಗಳು ಬಳಸುವ ಲೆಟರ್‌ಹೆಡ್‌ಗಳಲ್ಲಿ ಮಾಸ್ಕ್ ಬಳಕೆ,ಸಾಮಾಜಿಕ ಅಂತರ ಕಾಪಾಡುವುದು, ಶುಚಿತ್ವ ಕಾಪಾಡುವುದು ಇಂತಹ ಜಾಗೃತಿ ಬರಹ ಬಳಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು.
ಪ್ರಸ್ತುತ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಂತಿಲ್ಲ, ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಹೇಳಿದರು.
ಕೋವಿಡ್ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಲು ತಹಶೀಲ್ದಾರ್‌ಗಳಿಗೆ ಆದೇಶಿದರಲ್ಲದೆ, ಕೋವಿಡ್ ಪರೀಕ್ಷೆಗೆ ಒಳಗಾಗಲು ನಿರಾಕರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದರು. ಸಾರ್ವಜನಿಕರು ಸಣ್ಣ ಪ್ರಮಾಣದ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡ ಕೂಡಲೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಬೇಕೆಂದರಲ್ಲದೆ, ವೈಯಕ್ತಿಕ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಪರೀಕ್ಷೆಗೆ ಒಳಗಾಗಿ: ಕೆಮ್ಮುವಾಗ, ಸೀನುವಾಗ ಕೈವಸ್ತ್ರ ಬಳಸಬೇಕು. ಒಂದು ವೇಳೆ ಕೋವಿಡ್ ವೈರಸ್ ಸಂಬಂಧಿತ ಸೋಂಕು ಎಂದು ಅನುಮಾನ ಬಂದರೆ ಸ್ವಯಂ ಚಿಕಿತ್ಸೆಗೆ ಮುಂದಾಗಿ, ಕೂಡಲೇ ತಮ್ಮ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ, ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್. ಕೆ.ನಾಯಕ್, ಜಿಪಂ ಸಿಇಒ ಎನ್.ಎಂ.ನಾಗರಾಜ,ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ವಾರ್ತಾಮತ್ತುಸಾರ್ವಜನಿಕಸಂಪರ್ಕಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.