Ram mandir: ಶ್ರೀರಾಮ ವನವಾಸಕ್ಕೆ ಹಾದುಹೋಗಿದ್ದ ಸ್ಥಳ ನಮ್ಮೂರು ಆಗಿರುವುದೇ ಹೆಮ್ಮೆ
Team Udayavani, Jan 23, 2024, 1:04 PM IST
ನೆಲಮಂಗಲ: ಮರ್ಯಾದ ಪುರುಷೋತ್ತಮ ಶ್ರೀರಾಮ ವನವಾಸಕ್ಕೆ ತೆರಳಿದ್ದು ನಮ್ಮ ಗ್ರಾಮಗಳ ಮುಖಾಂತರ ಎಂಬ ಕಥೆಯನ್ನು ಹಿರಿಯರು ನಮಗೆ ತಿಳಿಸಿದ್ದಾರೆ. ಈ ವಿಚಾರ ನಮಗೆಲ್ಲಾ ಹೆಮ್ಮೆ ಎಂದು ಶ್ರೀಆಂಜನೇಯ ಸ್ವಾಮಿ ಸೇವಾ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಹನುಮಂತರಾಯಪ್ಪ ಸಂತಸ ವ್ಯಕ್ತಪಡಿಸಿದರು.
ಅಯೋಧ್ಯೆಯಲ್ಲಿ ಶ್ರೀ ರಾಮನ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆ ತಾಲೂಕಿನ ಕುಂಟಬೊಮ್ಮನಹಳ್ಳಿಯಲ್ಲಿ ಗ್ರಾಮದ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿತರಣೆ ಇನ್ನಿತರ ಧಾರ್ಮಿಕ ಕಾರ್ಯಕ್ರಮದಲ್ಲಿ ನೇತೃತ್ವ ವಹಿಸಿ ಮಾತನಾಡಿದರು.
ಶ್ರೀ ರಾಮ, ಲಕ್ಷ್ಮಣ, ಸೀತಾ ಮಾತೆ ಸಮೇತ ವನವಾಸಕ್ಕೆ ತೆರಳುವಾಗ, ತುಮಕೂರಿನ ದೇವರಾಯನದುರ್ಗ ಬಳಿಯ ನಾಮದ ಚಿಲುಮೆಯಲ್ಲಿ, ಜಲಪಾನ ಮಾಡಿದ್ದರು. ಇಂದು ಗ್ರಾಮದ ಎಲ್ಲರೂ ಸೇರಿ ಶ್ರೀರಾಮನ ಧ್ಯಾನ ಮಾಡಿದ್ದೇವೆ. ನಮ್ಮ ಗ್ರಾಮದ ಆಂಜನೇಯ ಸ್ವಾಮಿ ರಾಮನ ಭಂಟ, ಆದ್ದರಿಂದ ಪೂಜೆ ಸಲ್ಲಿಸಿದ್ದೇವೆ, ಕಳೆದ 4 ವರ್ಷಗಳ ಹಿಂದೆ ದೇವಾಲಯ ಜೀರ್ಣೋದ್ಧಾರಗೊಂಡಿತು, ಮೇ 29 ರಂದು 5ನೇ ವರ್ಷದ ವಾರ್ಷಿಕೋತ್ಸವ ನಡೆಸುತ್ತೇವೆ ಎಂದರು.ವಿಜ್ಞಾನಿ ಕೆ.ಎನ್ .ತಿಮ್ಮಯ್ಯ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹನುಮಂತರಾಜು, ಕಾರ್ಯದರ್ಶಿ ಟಿ. ಹನುಮಂತರಾಜು, ನಿವೃತ್ತ ಶಿಕ್ಷಕ ರೇಣುಕಾರಾಧ್ಯ, ಶಿವಕುಮಾರಯ್ಯ, ನಿವೃತ್ತ ಪ್ರಾಂಶುಪಾಲ ಚೌಡಯ್ಯ, ಗ್ರಾಪಂ ಸದಸ್ಯ ಹಾಗೂ ಮಾಜಿ ಉಪಾಧ್ಯಕ್ಷ ನರಸಿಂಹಮೂರ್ತಿ, ಎಸ್‌ಎಲ್‌ಆರ್ ಶಾಲೆ ಮುಖ್ಯಸ್ಥ ನರಸಿಂಹಯ್ಯ, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.