ಭೂಗಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹ


Team Udayavani, Feb 11, 2020, 4:13 PM IST

br-tdy-1

ಆನೇಕಲ್‌ : ತಾಲೂಕಿನಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾದ ದಲಿತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಪ್ರಜಾವಿಮೋಚನ ಚಳವಳಿಯಿಂದ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಆನೇಕಲ್‌ ಕೃಷ್ಣಪ್ಪ , ತಾಲೂಕಿನಲ್ಲಿ ಭೂಮಿ ಬೆಲೆ ದಿನದಿಂದಿ ದಿನಕ್ಕೆ ಗಗನಕ್ಕೆ ಏರುತ್ತಿದೆ. ಮತ್ತೂಂದೆಡೆ ಭೂ ಕಬಳಿಕೆ ಪ್ರಕರಣಗಳೂ ಹೆಚ್ಚುತ್ತಿವೆ. ಇದರ ನಡುವೆ ಕೆಲ ಭೂಗಳ್ಳರು ಅಮಾಯಕ, ಅನಕ್ಷರಸ್ಥ ದಲಿತರ ಭೂಮಿಗಳನ್ನು ಕಬಳಿಸುವ ದಂಧೆಯಲ್ಲಿ ತೊಡಗಿದ್ದಾರೆ. ಅದರಲ್ಲಿ ಜಿಗಣಿ ಹೋಬಳಿಯ ಸುಮಾರು ಹತ್ತುಕೋಟಿ ಬೆಲೆ ಬಾಳುವ ದಲಿತರ ಭೂಮಿಯನ್ನು ಆಂಧ್ರ ಮೂಲದವರು ಕಬಳಿಸುವ ಹುನ್ನಾರ ನಡೆಸಿದ್ದಾರೆ ಎಂದು ದೂರಿದರು.

ದಲಿತರ ಭೂಮಿಯನ್ನು ಭೂಗಳ್ಳರಿಂದ ವಾಪಸ್‌ ಕೊಡಿಸ ಬೇಕು. ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಜಿಗಣಿ ಹೋಬಳಿಯ ಹುಲಿಮಂಗಲ, ಹರಪನಹಳ್ಳಿ ಗ್ರಾಮಗಳಲ್ಲಿನ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಸುಮಾರು 6 ಎಕರೆ ಭೂಮಿಯನ್ನು ಮೂಲ ವಾರಸುದಾರರನ್ನು ವಂಚಿಸಿ ನಕಲಿ ದಾಖಲೆ ಸೃಷ್ಟಿಸಿ ಕೊಂಡು ಆಂಧ್ರ ಮೂಲದ ಲ್ಯಾಂಡ್‌ ಡೆವಲಪರ್‌ಗಳು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿದರು.

ಈ ಸಂಬಂಧ ಈಗಾಗಲೇ, ಜಿಲ್ಲಾದಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಸಿವಿಲ್‌ ನ್ಯಾಯಾಲಯದಲ್ಲೂ, ಪ್ರಕರಣ ದಾಖಲಾಗಿದೆ. ಯಥಾಸ್ಥಿತಿಕಾಪಾಡಿಕೊಳ್ಳಬೇಕೆಂಬ ಆದೇಶ ಇದ್ದರೂ, ನ್ಯಾಯಲಯದ ಆದೇಶ ಧಿಕ್ಕರಿಸಿ ನೊಂದಣಿ ಮಾಡಿರುವುದು ದಾಖೆಲಗಳಿಂದ ಸ್ಪಷ್ಟವಾಗಿ ತಿಳಿದು ಬಂದಿದೆ. ಹಾಗಾಗಿ ನಕಲಿ ದಾಖಲೆ ಸೃಷ್ಟಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ದಲಿತರಿಗೆ ನ್ಯಾಯ ದೊರಕಿಸಿಕೊಡ ಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆನೇಕಲ್‌ ಉಪ ವಿಭಾಗದ ಡಿವೈಎಸ್ಪಿ ಸಕ್ರಿ ಅವರು ಬೇಟಿ ನೀಡಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ನ್ಯಾಯ ಕೊಡಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಭಾಗೀಯ ಅಧ್ಯಕ್ಷ ಯಡವನಳ್ಳಿ ಕೃಷ್ಣಪ್ಪ, ಗ್ರಾಪಂ ಸದಸ್ಯ ಚನ್ನೇನ ಹಳ್ಳಿ ವೆಂಕಟೇಶ್‌, ಸಂಪಿಗೆಹಳ್ಳಿ ದೊರೆ, ಅರೇಹಳ್ಳಿ ಅಶ್ವಥ್‌, ಆರ್‌.ವೆಂಕಟೇಶ್‌, ಎ.ಲವಾ, ಕೊಪ್ಪರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.