ಬೆಳೆ ತಂತ್ರಾಂಶ ಸರಿಪಡಿಸಲು ಆಗ್ರಹ
Team Udayavani, Jun 20, 2020, 7:13 AM IST
ದೊಡ್ಡಬಳ್ಳಾಪುರ: ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿನ ದೋಷದಿಂದಾಗಿ ರೈತರಿಗೆ ಸರ್ಕಾರದ ಪರಿಹಾರ ಹಾಗೂ ಸೌಲಭ್ಯಗಳು ದೊರೆಯುತ್ತಿಲ್ಲ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ಧರಣಿ ನಡೆಸಲಾಯಿತು.
ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಹಸಿರು ಮನೆ ಹೂವು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಡಿ. ಶ್ಯಾಮಸುಂದರ್ ಮಾತನಾಡಿ, ಪ್ರತಿಯೊಬ್ಬ ರೈತರ ಜಮೀನಿಗೆ ಭೇಟಿ ನೀಡಿ ಜಿಪಿಆರ್‌ಎಸ್ ಮೂಲಕ ಜಮೀನಿನಲ್ಲಿರುವ ಬೆಳೆ ಪೋಟೋ ಸಮೇತ ಪಹಣಿಯಲ್ಲಿ ಬೆಳೆ ದಾಖಲಿಸಬೇಕು.
ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಬೆಳೆ ಸಮೀಕ್ಷೆ ದಾಖಲಾತಿಯನ್ನು ಕಚೇರಿಯಲ್ಲೇ ಕುಳಿತು ಪೋಟೋ ಹಾಕಿ ಪಹಣಿಯಲ್ಲಿ ಬೆಳೆ ದಾಖಲು ಮಾಡಲಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಹೀಗಾಗಿ ತಂತ್ರಾಂಶ ಸರಿಪಡಿಸಬೇಕು ಎಂದು ಆಗ್ರಹಿಸಿದರು. ಧರಣಿ ನಿರತ ರೈತರನ್ನು ಭೇಟಿ ಮಾಡಿದ ತಹಶೀಲ್ದಾರ್ ಟಿ.ಎಸ್. ಶಿವರಾಜ್ ಮಾತನಾಡಿದರು.
ಪಹಣಿಯಲ್ಲಿ ಬೆಳೆ ಸಮೀಕ್ಷೆ ವರದಿ ದಾಖಲಾಗಿರುವ ದೋಷ ಸರಿಪಡಿಸುವ ಬಗ್ಗೆ ಡೀಸಿಯೊಂದಿಗೆ ಚರ್ಚಿಸಿ, ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲೂಕು ಅಧ್ಯಕ್ಷ ಹನುಮೇಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಹನುಮಂತರಾಯಪ್ಪ, ಹೂವು ಬೆಳೆಗಾರರ ಸಂಘದ ಮುಖಂಡ ಮಲ್ಲೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.