Road accident: ಹೆದ್ದಾರಿಯಲ್ಲಿ ದಟ್ಟ ಮಂಜು: ಸರಣಿ ಅಪಘಾತ
Team Udayavani, Dec 28, 2023, 1:50 PM IST
ಬೆಂಗಳೂರು/ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದಟ್ಟ ಮಂಜು ಆವರಿಸುತ್ತಿದ್ದು, ವಾಹನ ಓಡಾಟಕ್ಕೆ ತೀವ್ರ ತೊಂದರೆ ಆಗಿದೆ. ಬುಧವಾರ ಬೆಳಗಿನ ಜಾವ ದಟ್ಟ ಮಂಜಿನಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಕ್ಯಾಂಟರ್‌ಗೆ ಬಸ್‌ಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಇದರಿಂದ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತುಮಕೂರು ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕ್ಯಾಂಟರ್ ಹಾಗೂ ಟಿ.ಬೇಗೂರು ಸಮೀಪದ ತೋಣಚಿನಕುಪ್ಪೆ ಬಳಿ ನಿಧಾನವಾಗಿ ಚಲಿಸುತ್ತಿದ್ದವು. ಈ ವೇಳೆ, ವೇಗವಾಗಿ ಬಂದ ಬಸ್‌ಗಳು ದಟ್ಟ ಮಂಜಿನಲ್ಲಿ ಕ್ಯಾಂಟರ್ ನೋಡದೆ ಡಿಕ್ಕಿ ಹೊಡೆದಿವೆ. ಬಸ್ ಹಿಂದೆಯೇ ಬರುತ್ತಿದ್ದ ಬಸ್‌ಗಳೂ ಡಿಕ್ಕಿ ಹೊಡೆದುಕೊಂಡಿವೆ. ಬೆಳಗಿನ ಜಾವ ನಿದ್ದೆಯಲ್ಲಿದ್ದ ಬೆಂಗಳೂರಿಗೆ ಬರುತ್ತಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಗಾಯವಾಗಿ ಆಸ್ಪತ್ರೆ ಸೇರಿದರೆ, ಮತ್ತೆ ಕೆಲವರು ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗದೆ ಮನೆ ಸೇರಿದ್ದಾರೆ.
ಒಟ್ಟಾರೆ 3 ಬಸ್, 1ಕ್ಯಾಂಟರ್ ಡಿಕ್ಕಿಯಾಗಿದ್ದು, ಬೆಳಗಿನ ಜಾವ ಸರಣಿ ಅಪಘಾತಕ್ಕೆ ಕಾರಣವಾಗಿದೆ.
ಟ್ರಾಫಿಕ್ ಜಾಮ್: ಮುಂಜಾನೆಯೇ ದಟ್ಟ ಮಂಜಿನಲ್ಲಿ ಅಪಘಾತವಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ಜಾಮ್ ಉಂಟಾಯಿತು. ಟ್ರಾಫಿಕ್ ಪೊಲೀಸರು ಬರಲು ಸ್ವಲ್ಪ ತಡವಾದ ಪರಿಣಾಮ ಕೆಲಗಂಟೆ ಕಾಲ 5-6 ಕಿ.ಮೀ. ಸಂಚಾರ ವ್ಯತ್ಯಯವಾಯಿತು. ಪೊಲೀಸರು ಸಂಚಾರ ನಿಯಂತ್ರಣಕ್ಕೆ ಹರ ಸಾಹಸಪಟ್ಟರು.
ಬೆಳಗ್ಗೆ 9 ಗಂಟೆಯಾದ್ರೂ ಕರಗದ ಮಂಜು: ನಗರ ಹೊರವಲಯದಲ್ಲಿ ಚಳಿಯ ಜೊತೆಗೆ ದಟ್ಟ ಮಂಜು ಆವರಿಸುತ್ತಿದ್ದು, ಬೆಳಗ್ಗೆ 9 ಗಂಟೆ ಯಾದ್ರೂ ಮಂಜು ಕರುತ್ತಿಲ್ಲ, ಇದರಿಂದ ರೈತರು, ಜನ ಸಾಮಾನ್ಯರು ತತ್ತರಿಸಿದ್ದಾರೆ.
ಹೊಸಕೋಟೆ ಬಳಿ ಸರಣಿ ಅಪಘಾತ: ನಗರದ ವ್ಯಕ್ತಿ ಸಾವು
ಹೊಸಕೋಟೆ: ಹೊಸಕೋಟೆ ತಾಲೂಕಿನ ನಂದಗುಡಿಯ ರಾಜ್ಯ ಹೆದ್ದಾರಿ ಶಿವನಾಪುರ ಕ್ರಾಸ್ ಬಳಿ ನಡೆದ ಸರಣಿ ಅಪಘಾತದಲ್ಲಿ ಬೆಂಗಳೂರಿನ ಗೋವಿಂದಪುರ ನಿವಾಸಿ ನಯಾಜ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಕಿರಣ್(23), ಪ್ರತಾಪ್ (26), ಆಟೋದಲ್ಲಿದ್ದ ನಯಾಜ್ (47) ಮೃತರು.
ಚಿಂತಾಮಣಿ-ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹೊಸಕೋಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಆಟೋ ಡಿಕ್ಕಿ ಹೊಡೆದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ 3 ಬೈಕ್‌ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಬೈಕ್ ಸವಾರ ಕಿರಣ್ (23) ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದ ಪ್ರತಾಪ್ (26), ಆಟೋದಲ್ಲಿದ್ದ ನಯಾಜ್ (47) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.