ವಿವಿಧ ದೇವಾಲಯಗಳಲ್ಲಿ ಶಿವನ ಧ್ಯಾನ
Team Udayavani, Feb 14, 2018, 3:19 PM IST
ದೇವನಹಳ್ಳಿ: ತಾಲೂಕು ಮತ್ತು ನಗರದ ಎಲ್ಲ ಶಿವಾಲಯಗಳಲ್ಲಿ ಶಿವರಾತ್ರಿಯ ಅಂಗವಾಗಿ ಪೂಜೆಗಳು ನಡೆದವು. ಹಬ್ಬದ ಪ್ರಯುಕ್ತ ಬೆಳಗ್ಗೆಯಿಂದ ದೇವಾಲಯಗಳಲ್ಲಿ ಹೋಮ ಹವನ, 108 ಬಿಲ್ವಾರ್ಚನೆ, ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.
ತಾಲೂಕಿನ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಗಂಗವಾರ ಗ್ರಾಮದ ಪ್ರಸನ್ನ ಪಾರ್ವತಿ ಸಮೇತ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಹಾಗೂ ಮೊದಲನೇ ವರ್ಷದ ರಥೋತ್ಸವ ನಡೆಯಿತು.
ರಥಾರೋಹಣವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಚಿಕ್ಕಬಳ್ಳಾಪುರ ಶಾಖೆಯ ಮಂಗಳಾನಂದ ಸ್ವಾಮೀಜಿ ಪೂಜೆ ಮಾಡಿ ಚಾಲನೆ ನೀಡಿದರು. ಜೆಡಿಎಸ್ ಮುಖಂಡ ನಿಸರ್ಗ ಎಲ್.ಎನ್. ನಾರಾಯಣಸ್ವಾಮಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಸಿ.ಎಸ್.ರಾಜಣ್ಣ, ಉಪಾಧ್ಯಕ್ಷೆ ಸುಜಾತಾ, ಗ್ರಾಪಂ ಮಾಜಿ ಅಧ್ಯಕ್ಷ ಜಯರಾಮೇಗೌಡ ಗ್ರಾಪಂ ಸದಸ್ಯ ಎಂ.ರಾಜಣ್ಣ, ತಾಲೂಕು ಸೊಸೈಟಿ ನಿರ್ದೇಶಕ ಜಿ.ಕೆ.ಮನೋಹರ್, ಮುಖಂಡ ಮುನೇಗೌಡ, ಚಿಕ್ಕಣ್ಣ, ಅಶ್ವತ್ಥಪ್ಪ, ಕೃಷ್ಣಪ್ಪ, ಶ್ರೀನಿವಾಸ್ ಮತ್ತಿತರರಿದ್ದರು.
ವಿಶೇಷ ಪೂಜೆ: ತಾಲೂಕಿನ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಗಂಗವಾರ ಚೌಡಪ್ಪನಹಳ್ಳಿ ಗ್ರಾಮದ ತಬ್ಬಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜಾಕಾರ್ಯಗಳು ಜರುಗಿದವು.
ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ತಬ್ಬಲಿಂಗೇಶ್ವರ ಸ್ವಾಮಿ ದೇವರಿಗೆ ರುದ್ರಾಭಿಶೇಕ, ಸ್ವಾಹಾಕಾರ ಹೋಮ ಮತ್ತು 108 ಬಿಲ್ವಾರ್ಚನೆ, ಪಾರ್ವತಿ ಅಮ್ಮನವರಿಗೆ ಕುಂಕುಮಾರ್ಚನೆ, ವಿಶೇಷ ಪೂಜೆ ನಡೆಯಿತು.
ರವಿದಾಸರು ತಂಡದವರಿಂದ ಹರಿಕಥೆ ನಡೆಸಿಕೊಡಲಿದ್ದಾರೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ಪೂಜೆಗಳು ನಡೆಯಲಿವೆ. ಪೂಜೆಯಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಬೈರೇಗೌಡ, ಗೌರವಾಧ್ಯಕ್ಷ ಜಯರಾಜ್, ಉಪಾಧ್ಯಕ್ಷ ಟಿ.ಶಂಕರಪ್ಪ, ಪ್ರಧಾನ ಅರ್ಚಕ ಲೋಕೇಶ್ ಮತ್ತಿತರರಿದ್ದರು. ತಾಲೂಕಿನ ಅರದೇಶನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದ ಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ಶಿವನ ಮೂರ್ತಿಗೆ ವಿಶೇಷ ಪೂಜೆ ಜರುಗಿತು.
ಅರದೇಶನಹಳ್ಳಿ ಗ್ರಾಮದಲ್ಲಿರುವ ಪುರಾತನ ಶಿವನ ದೇವಾಲಯದಲ್ಲಿ ಭಕ್ತರು ಪೂಜೆಗಾಗಿ ಕುಳಿತು ದೇವರ ದರ್ಶನ ಪಡೆದರು.
ಈ ವೇಳೆ ಮಾಜಿ ಶಾಸಕ ಮುನಿನರಸಿಂಹಯ್ಯ, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್, ದೇವಾಲಯದ ಅರ್ಚಕ ನಾಗರಾಜ್ ದೀಕ್ಷಿತ್, ಅರದೇಶನಹಳ್ಳಿ ಗ್ರಾಪಂ ಉಪಾಧ್ಯಕ್ಷ ಸುಬ್ಬಣ್ಣ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ನಿರ್ದೇಶಕ ಕೆಂಪರಾಜು, ಗ್ರಾಪಂ ಮಾಜಿ ನಿರ್ದೇಶಕ ರಾಜಣ್ಣ, ಗ್ರಾಪಂ ಸದಸ್ಯ ಆನಂದ್, ಅರದೇಶನಹಳ್ಳಿ ಗ್ರಾಮಸ್ಥ ಕೆಂಪಣ್ಣ, ಕೆ.ರಾಮಯ್ಯ, ಮಹಿಳೆಯರು, ಭಕ್ತರು ಇದ್ದರು.
ದೇವರ ದರ್ಶನ: ದೇವನಹಳ್ಳಿ ನಗರದ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಸ್ವಾಮಿಯವರಿಗೆ ವಿಶೇಷ ಪೂಜೆ ನಡೆಯಿತು. ನಗರದ ಕೋಟೆಯಲ್ಲಿರುವ ಚಂದ್ರಮೌಳೇಶ್ವರ ಹಾಗೂ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.
ತಾಲೂಕಿನ ಬೊಮ್ಮವಾರ ಗ್ರಾಮದ ಸುಂದರೇಶ್ವರ ಸ್ವಾಮಿಯವರಿಗೆ ವಿಶೇಷ ಹೂವಿನ ಅಲಂಕಾರ ಏರ್ಪಡಿಸಲಾಗಿತ್ತು. ತಾಲೂಕಿನ ಹೊಸನಲ್ಲೂರು ಗ್ರಾಮದ ಗಂಗಾಧರನಾಥೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ, ಹೂವಿನ ಅಲಂಕಾರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.