28ರಂದು ಅಂಗಡಿ ಮುಗ್ಗಟ್ಟು ಬಂದ್‌

Team Udayavani, Feb 26, 2020, 4:36 PM IST

br-tdy-1

ದೊಡ್ಡಬಳ್ಳಾಪುರ:ನಗರದಲ್ಲಿ ತಲೆ ಎತ್ತುತ್ತಿರುವ ಮಾಲ್‌ಗ‌ಳು, ಆನ್‌ಲೈನ್‌ ಕಂಪನಿಗಳಿಂದ ವ್ಯಾಪಾರಸ್ಥರಿಗೆ ಹೊಡೆತ ಬೀಳುತ್ತಿದೆ. ಇದಕ್ಕೆ ಪೂರಕವಾದ ಸರ್ಕಾರದ ನೀತಿಗಳ ವಿರುದ್ಧ ಹಾಗೂ ವ್ಯಾಪಾರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 28ರಂದು ತಾಲೂಕಿನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದಿನಸಿ ವರ್ತಕರ ಸಂಘದ ಅಧ್ಯಕ್ಷ ಜಿ.ಎಸ್‌.ಸೋಮರುದ್ರ ಶರ್ಮಾ ತಿಳಿಸಿದರು.

ದಿನಸಿ ವರ್ತಕರ ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದುಬಾರಿ ಬಾಡಿಗೆ, ಜೀವನ ವೆಚ್ಚಗಳಿಂದ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ರಿಯಾಯಿತಿ ಎಂಬ ಹೆಸರಿನಲ್ಲಿ ದೊಡ್ಡ ಮಾಲ್‌ಗ‌ಳ ಸೆಳೆತ ಕಾರಣವಾಗಿದೆ. ಆದರೆ, ರಿಯಾಯಿತಿ ದರದಲ್ಲಿ ನೀಡುವ ದಿನಸಿ, ಇತರೆ ಸಾಮಾನು ಕಳಪೆ ಗುಣಮಟ್ಟದ್ದಾಗಿರುತ್ತದೆ ಎನ್ನುವುದನ್ನು ಗ್ರಾಹಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ರಿಯಾಯಿತಿ ಮೋಸದ ಜಾಲ ನಿಯಂತ್ರಣಕ್ಕೆ ಕ್ರಮ, ವ್ಯಾಪಾರಸ್ಥರ ಉಳಿವು ಹಿತ ಕಾಪಾಡಲು ಸರ್ಕಾರ ನಿಗಮ ಮಂಡಳಿ ಅಸ್ತಿತ್ವಕ್ಕೆ ತರಬೇಕು, ವ್ಯಾಪಾರಿಗಳ ಪ್ರತಿನಿಧಿಗಳಿಗೆ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ದಿನಸಿ ವರ್ತಕರ ಸಂಘದ ಕಾರ್ಯದರ್ಶಿ ಎಂ.ಸಿ.ರಘುನಾಥ್‌ ಮಾತನಾಡಿ, ನಗರ ಪ್ರದೇಶಗಳಲ್ಲಿದ್ದ ಮಾಲ್‌ಗ‌ಳು ಇಂದು ತಾಲೂಕು ಮಟ್ಟಕ್ಕೂ ವ್ಯಾಪಿಸಿದ್ದು, ವ್ಯಾಪಾರವನ್ನು ನೆಮ್ಮದಿ ಹದಗೆಡಿಸುತ್ತಿವೆ. ಇತ್ತೀಚಿನ ವರದಿಯಂತೆ ಮಾಲ್‌ ಗಳಲ್ಲಿನ ವಹಿವಾಟಿನಲ್ಲಿ ಸಹಸ್ರಾರು ರೂ.ನಷ್ಟ ತೋರಿಸುತ್ತಿವೆ. ಕೊಂಡ ಬೆಲೆಗಿಂತಲೂ ಕಡಿಮೆ ಮಾರಾಟ ಮಾಡಿ, ಗ್ರಾಹಕರನ್ನು ಸೆಳೆದು ನಂತರ ಇಡೀ ಮಾರುಕಟ್ಟೆಯನ್ನು ಆಕ್ರಮಿಸುವ ಹುನ್ನಾರ ಇದಾಗಿದೆ.

ತೆರಿಗೆಯೂ ವಂಚಿಸಲಾಗುತ್ತಿದೆ. ಇದರಿಂದ ಸಣ್ಣ ಹಾಗೂ ಮಧ್ಯಮ ವರ್ಗದ ಜನ ಬೀದಿಪಾಲಾಗುತ್ತಿದ್ದು, ವ್ಯಾಪಾರಿಗಳ ಹಾಗೂ ಗ್ರಾಹಕರ ನಡುವಿನ ಬಾಂಧವ್ಯ ಮರೆಯಾಗಲಿದೆ. 28ರಂದು ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ತಾಲೂಕು ವಿತರಕರ ಸಂಘ, ಔಷಧಿ ವ್ಯಾಪಾರಿಗಳ ಸಂಘ, ಬಟ್ಟೆ ವ್ಯಾಪಾರಿಗಳ ಸಂಘ, ಫ್ಯಾನ್ಸಿ ಸ್ಟೋರ್ ಮೊದಲಾದ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದರು.

ಹಿರಿಯ ವರ್ತಕ ಎಂ.ಜೆ. ರಾಜಶೇಖರ ಶೆಡ್ಡಿ ಮಾತನಾಡಿ, ಮಾಲ್‌ನಲ್ಲಿ ಇತ್ತೀಚೆಗೆ ಖರೀದಿಸಿದ್ದ ಜನಪ್ರಿಯ ಬ್ಯಾಂಡ್‌ನ‌ ಸೋಪಿನ ಗುಣಮಟ್ಟ ತೀರಾ ಕಳಪೆಯಾಗಿದ್ದ ಆರೋಪ ಕೇಳಿ ಬಂದಿದೆ. ಮಾಲ್‌ಗ‌ಳ ಉತ್ಪನ್ನಗಳ ಗುಣಮಟ್ಟದ ಸರಿಯಾದ ತನಿಖೆಯಾಗಬೇಕು. ವರ್ತಕರು ತೆರಿಗೆ ಕಟ್ಟುವ ಮೂಲಕ ಸರ್ಕಾರಕ್ಕೆ ಆಸರೆಯಾಗಿದೆ. ಆದರೆ ಮಾರ್ಟ್ ಗಳು ತೆರಿಗೆ ಕೂಡ ವಂಚಿಸುತ್ತಿದ್ದು, ವ್ಯಾಪಾರಸ್ತರ ಹಿತ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದರು.

ಸಭೆಯಲ್ಲಿ ದಿನಸಿ ವರ್ತಕರ ಸಂಘದ ಖ ಜಾಂಚಿ ಡಿ.  ಎ ನ್‌. ರಾ ಮಯ್ಯ ಶೆಟ್ಟಿ,ನಿರ್ದೇಶಕರಾದ ಸಿ . ಎ .ರವಿ ಪ್ರಸಾದ್ , ವಿ . ಎಸ್ . ರಾಜೇಶ್,  ಕೆ.ಜಿ.ನಂಜುಂಡಯ್ಯ, ಮಾಜಿ ಅಧ್ಯಕ್ಷ ಆರ್‌.ವಿ.ಶಿವಣ್ಣ, ವಿತರಕರ ಸಂಘದ ಅಧ್ಯಕ್ಷ ಕೆ.ಎನ್‌.ಪ್ರಭಾಕರ್‌, ಕಾರ್ಯದರ್ಶಿ ಪ್ರಕಾಶ್‌, ನಿರ್ದೇಶಕರಾದ ಸಿ.ಎನ್‌. ಗಿರೀಶ್‌, ಮಹೇಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.