ಸಾಲ ಸೌಲಭ್ಯದಲ್ಲಿ ಬ್ಯಾಂಕ್‌ಗಳ ನಿಯಮ ಸರಳೀಕರಿಸಿ

ಡಿಜಿಟಲ್‌ ಬ್ಯಾಂಕಿಂಗ್‌ನ ಮೋಸಗಳ ಕುರಿತು ಜಾಗೃತರಾಗಿ.

Team Udayavani, Jun 10, 2022, 1:40 PM IST

ಸಾಲ ಸೌಲಭ್ಯದಲ್ಲಿ ಬ್ಯಾಂಕ್‌ಗಳ ನಿಯಮ ಸರಳೀಕರಿಸಿ

ದೇವನಹಳ್ಳಿ: ನಮ್ಮ ದೇಶ ಆರ್ಥಿಕವಾಗಿ ಸದೃಢರಾಗಬೇಕಾದರೆ, ಪ್ರತಿಯೊಬ್ಬರ ಆರ್ಥಿಕತೆ ಬಲಗೊಳ್ಳ ಬೇಕು. ಸಾಲ ಸೌಲಭ್ಯ ವಿತರಿಸುವ ರಾಷ್ಟ್ರೀಕೃತ ಬ್ಯಾಂಕುಗಳು ನಿಯಮಾವಳಿ ಮತ್ತಷ್ಟು ಸರಳೀಕರಣಗೊಳ್ಳಬೇಕು ಎಂದು ಜಿಪಂ ಸಿಇಒ ರೇವಣಪ್ಪ ತಿಳಿಸಿದರು.

ಪಟ್ಟಣದ ಗಿರಿಯಮ್ಮ ವೃತ್ತದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ “ಸಾಲ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆರ್ಥಿಕತೆ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದಾಗಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಹಣಕಾಸು ಸೇವೆಗಳನ್ನು ದೊರಕಿಸುವ ಮೂಲಕ ದೇಶದ ಆರ್ಥಿಕ ಸ್ಥಿತಿ ವೃದ್ಧಿ ಆಗುತ್ತದೆ.

ಬ್ಯಾಂಕುಗಳು ಗ್ರಾಹಕರೊಡನೆ ಸಂಪರ್ಕ ಹೆಚ್ಚಿಸಿಕೊಂಡು ಹಣಕಾಸು ಸೇರ್ಪಡೆ ಯೋಜನೆಗಳ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಜೀವನೋಪಾಯ ಮಾರ್ಗಕ್ಕಾಗಿ ಹಾಗೂ ಕೌಶಲ್ಯಾಭಿವೃದ್ಧಿಗೆ ಹಣಕಾಸು ಸೌಲಭ್ಯ ನೀಡಬೇಕು. ಇದರಿಂದ ಬ್ಯಾಂಕಿನ ಸರಪಳಿ ವ್ಯವಸ್ಥೆ ಬಲವಾಗಿ ಆದಾಯ ಹೆಚ್ಚಾಗಲಿದೆ ಎಂದರು.

ಗ್ರಾಹಕರೊಂದಿಗೆ ಸಮಾಲೋಚನೆ ಮಾಡಿ: ಸರ್ಕಾರದ ಜನರ ಆರ್ಥಿಕ ಜೀವನ ಸುಧಾರಣೆಯ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದು, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಣೆ ಮಾಡುವ ಅಧಿಕಾರಿಗಳ ನಕಾರಾತ್ಮಕ ಧೋರಣೆಯಿಂದ ಅದರ ಸಮಪರ್ಕ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಉದ್ಯೋ ಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯುವಕರಿಗೆ ಸ್ವಯಂ ಉದ್ಯೋಗ, ಕಿರು ಉದ್ದಿಮೆ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ಸಹಾಯ ಮಾಡುವತ್ತಾ ಚಿಂತಿಸಬೇಕು. ಪ್ರತಿ ವಾರಕೊಮ್ಮೆ ಗ್ರಾಹಕರೊಂದಿಗೆ ಸಮಾಲೋಚನೆ ಮಾಡಿ ಸಾಲ ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಆರ್‌ಬಿಐನ ಅಧಿಕಾರಿ ಜೀವಿತಾ ಮಾತನಾಡಿ, ಡಿಜಿಟಲ್‌ ಬ್ಯಾಂಕಿಂಗ್‌ನ ಮೋಸಗಳ ಕುರಿತು ಜಾಗೃತರಾಗಿ. ಗ್ರಾಹಕರಿಗೆ ಉಂಟಾಗುವ ತೊಂದರೆ ಗಳ ಕುರಿತು ಆರ್‌ ಬಿಐಗೆ ದೂರು ಸಹ ನೀಡಬಹುದಾಗಿದ್ದು, ಪ್ರತಿಯೊಂದು ಬ್ಯಾಂಕ್‌ಗಳ ಕಾರ್ಯನಿರ್ವಹಣೆಯನ್ನು ನಾವು ಗಮನಿಸುತ್ತೇವೆ. ಗ್ರಾಹಕರ ರಕ್ಷಣೆಗಾಗಿ ಆರ್‌ಬಿಐ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಸಾಕ್ಷರತೆಗೆ ಕೈಜೋಡಿಸಿ: ಕೆನರಾ ಬ್ಯಾಂಕಿನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕಿ ಪಿ.ಮಾಲಿನಿ ಮಾತನಾಡಿ, “ದೇಶದ ಆರ್ಥಿಕತೆ ವೃದ್ಧಿಗೆ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆಗಳಲ್ಲಿಯೂ ಸಾರ್ವಜನಿಕರು ಭಾಗಿಯಾಗಿ ಅದರ ಪ್ರಯೋಜನ ಪಡೆದುಕೊಳ್ಳಿ. ನಿಮಗೆ ತಿಳಿದಿರುವ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಂಡು ಬ್ಯಾಂಕಿಂಗ್‌ ಸಾಕ್ಷರತೆಗೆ ಕೈಜೋಡಿಸಿ ಎಂದರು.

ಕನ್ನಡದಲ್ಲಿ ಮಾಹಿತಿ ನೀಡಿ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಹಕರು, ಸ್ಥಳೀಯರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಬ್ಯಾಂಕಿನ ಅಧಿಕಾರಿಗಳು ಕನ್ನಡದಲ್ಲಿ ಮಾಹಿತಿ ನೀಡಬೇಕು. ನಿಮ್ಮ ಮಾತುಗಳು ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾವು ಜೀವಿಸುತ್ತಿರುವುದು ಕರ್ನಾಟಕದಲ್ಲಿ, ಕನ್ನಡ ಭಾಷೆಯಲ್ಲಿ ನಮಗೆ ಸೇವೆ ನೀಡಿ, ಹಿಂದಿ, ಇಂಗ್ಲಿಷ್‌ ಭಾಷೆಯಲ್ಲಿ ಭಾಷಣ ಮಾಡಿದರೇ ಈ ಕಾರ್ಯಕ್ರಮ ವಿಫ‌ಲವಾಗುತ್ತದೆ ಎಂದು ಗದ್ದಲ ಸೃಷ್ಟಿಸಿದರು. ನಂತರ ಕನ್ನಡದಲ್ಲಿ ಅನುವಾದ ಮಾಡಿದರು. ಜಿಲ್ಲಾ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಬ್ಯಾಂಕ್‌ ಅಧಿಕಾರಿ ಲತಾ ಕುರೂಪ್‌, ರಾಜಣ್ಣ, ಶೈಲಜಾ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.