ಜಿಲ್ಲಾಡಳಿತದಿಂದ ವೃದ್ಧರ ಮತದಾನಕ್ಕೆ ವಿಶೇಷ ಆದ್ಯತೆ

Team Udayavani, Apr 15, 2023, 3:53 PM IST

tdy-16

ದೇವನಹಳ್ಳಿ: ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಜಿಲ್ಲೆಯಲ್ಲಿ ಚುನಾವಣೆ ರಂಗು ಏರುತ್ತಿದ್ದು ಈ ಬಾರಿ ವಿಶೇಷವಾಗಿ ಹಿರಿಯ ಚೇತನರಿಗೆ, ವಿಕಲಚೇತನರಿಗೆ ಮತದಾನ ಮಾಡಲು ವಿಶೇಷ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಒಟ್ಟು 20 ಸಾವಿರದ 324 ಮಂದಿ 80 ವರ್ಷ ಮೇಲ್ಪಟ್ಟವರು, 12ಸಾವಿರ 481ವಿಕಲ ಚೇತನರಿದ್ದಾರೆ. ಜಿಲ್ಲೆಯಲ್ಲಿ ಶಾಂತಿಯುತ ಮತ ದಾನಕ್ಕಾಗಿ ಒಟ್ಟು 834 ಮತಗಟ್ಟೆ ಕ್ಷೇತ್ರಗಳ ಪೈಕಿ 1137ಮತಗಟ್ಟೆಗಳನ್ನು ಗುರ್ತಿಸಲಾಗಿದೆ. ಈ ಪೈಕಿ ದೇವನಹಳ್ಳಿ 292, ಹೊಸಕೋಟೆ 293, ನೆಲಮಂಗಲ 276, ದೊಡ್ಡಬಳ್ಳಾಪುರ 276 ಮತಗಟ್ಟೆಗಳಿವೆ. ಇದೇ ಪ್ರಥಮ ಬಾರಿಗೆ ಕೆಲವರಿಗಷ್ಟೇ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಒದಗಿಸಲಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು, ವಿಶೇಷ ಚೇತನರು ಈ ಸೌಲಭ್ಯ ಪಡೆದುಕೊಳ್ಳ ಬಹುದಾಗಿದ್ದು, ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಫಾರ್ಮ್ 12ಡಿ ಸಲ್ಲಿಕೆ ಮಾಡಿ ಅವಕಾಶವನ್ನು ಬಳಸಿ ಕೊಳ್ಳಬಹುದಾಗಿದೆ.

ಗೌಪ್ಯ ಮತದಾನಕ್ಕೆ ವ್ಯವಸ್ಥೆ: ಅರ್ಜಿ ಸಲ್ಲಿಸಿದ ನಂತರ ನಿಗದಿತ ಮತದಾನಕ್ಕೆ ಸಿಬ್ಬಂದಿ ಆಯಾ ವಿಳಾಸಕ್ಕೆ ಬಂದು ಗೌಪ್ಯ ಮತದಾನ ಪ್ರಕ್ರಿಯೆಗಳೆಲ್ಲಾ ವಿಡಿಯೋ ಮಾಡ ಲಾಗುತ್ತದೆ. ಮನೆಗಳಲ್ಲಿಯೇ ಮತದಾನ ಪ್ರಕ್ರಿಯೆ ನಡೆಸಲು ಅಗತ್ಯ ಭದ್ರತೆ ಗೌಪ್ಯ ಮತದಾನಕ್ಕೆ ವ್ಯವಸ್ಥೆ ಹೀಗೆ ಪ್ರತಿಯೊಂದಕ್ಕೂ ಆದ್ಯತೆ ನೀಡುವ ಹಿನ್ನೆಲೆ ಮತದಾನ ಸೇಪ್‌ ಇರಲಿದೆ. ವಿಶೇಷವೆಂದರೆ ಇದೇ ಪ್ರಥಮ ಬಾರಿಗೆ ವಿಕಲ ಚೇತನರೇ ಕಾರ್ಯ ನಿರ್ವಹಿ ಸುವಂತಹ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಆ ಮೂಲಕ ಹೆಚ್ಚಿನ ಮತದಾನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಒಂದರಂತೆ ಮತಗಟ್ಟೆಗಳಲ್ಲಿ ಸಂಪೂರ್ಣ ವಿಕಲಚೇತನರು ನಿರ್ವಹಿ ಸಲಿದ್ದು ಇವರಿಗೆ ಸಹಕಾರಿಯಾಗಿ ವಿವಿಧ ಇಲಾಖೆಯ ಯುವ ಸಿಬ್ಬಂದಿ ಜೊತೆಗೂಡಿ ಸಾಥ್‌ ನೀಡಲಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ವತಿಯಿಂದ 80ವರ್ಷ ಮೇಲ್ಪಟ್ಟರಿಗೆ, ವಿಕಲಚೇತನರಿಗೆ ಮತದಾನ ನಡೆಸಲು ಅಂಚೆ ಮತದಾನಕ್ಕೆ ನೊಡಲ್‌ ಅಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರತಿಯೊಬ್ಬರೂ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಮತದಾನ ನಮ್ಮೆಲ್ಲರ ಹಕ್ಕು. ಕಡ್ಡಾಯ ಮತ ದಾನವಾಗಬೇಕು ಎಂಬುವುದು ಜಿಲ್ಲಾಡಳಿತದ ಧ್ಯೇಯೋದ್ದೇಶವಾಗಿದೆ.

ಪ್ರತಿಯೊಬ್ಬರೂ ಮತಗಟ್ಟೆಗಳಲ್ಲಿ ಮತದಾನ ಮಾಡಲು ಪ್ರಥಮ ಪ್ರಾಶಸ್ತ್ಯವನ್ನು ನೀಡಿ ಚುನಾವಣಾ ಹಬ್ಬದಲ್ಲಿ ಪ್ರತಿಯೊಬ್ಬರೂ ಭಾಗ ವಹಿಸುವಂತೆ ಜಿಲ್ಲಾಡಳಿತದ ಗುರಿಯಾಗಿದೆ. 80ವರ್ಷ ಮೇಲ್ಪಟ್ಟವರು, ವಿಕಲಚೇತನರು ಮತದಾನ ಮಾಡಲು ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಜಿಲ್ಲೆ ಯಲ್ಲಿ ಮನೆ ಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. – ಆರ್‌.ಲತಾ, ಜಿಲ್ಲಾಧಿಕಾರಿ

– ಎಸ್‌.ಮಹೇಶ್‌

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.