ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿ
Team Udayavani, Oct 1, 2019, 3:00 AM IST
ನೆಲಮಂಗಲ: ಪಟ್ಟಣದ ಸ್ವಾಸ್ಥ್ಯ ಕಾಪಾಡುವ ಕಾರ್ಯ ಮಾಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜು ಪೌರಕಾರ್ಮಿಕರಿಗೆ ಸಲಹೆ ನೀಡಿದರು. ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣ ಪುರಸಭೆ ಮತ್ತು ರಾಜ್ಯ ಪೌರನೌಕರರ ಸೇವಾಸಂಘದ ಸಹಯೋಗದಲ್ಲಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕರಾಗಿ ಸಧೃಡರಾಗಬೇಕು. ಕ್ರೀಡೆಗಳು ಮನುಷ್ಯನ ಮಾನಸಿಕ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಸ್ಥಿರವಾಗಿರಿಸುತ್ತದೆ. ಅಲ್ಲದೇ ದಿನಪೂರ್ತಿ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿದೆ ಎಂದರು.
ಪೌರ ನೌಕರರ ಸಂಘದ ಬೆಂಗಳೂರು ವಿಭಾಗದ ಉಪಾಧ್ಯಕ್ಷ ಎಲ್.ಅಂಕಯ್ಯ ಮಾತನಾಡಿ, ಪಟ್ಟಣವನ್ನು ಸ್ವಚ್ಚ ಹಾಗೂ ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಕಾರ್ಯ ಅತ್ಯಂತ ಪ್ರಮುಖವಾದದ್ದಾಗಿದೆ. ಅಧಿಕಾರಿಗಳು ಪುರಸಭೆಯಿಂದ ಪೌರಕಾರ್ಮಿಕರಿಗೆ ದೊರೆಯುವ ಎಲ್ಲಾ ಸವಲತ್ತುಗಳನ್ನು ಪೌರ ನೌಕರರ ಹಿತ ಕಾಯಬೇಕು ಎಂದರು.
ಸ್ಪರ್ಧೆಗಳು: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡೆಯಲ್ಲಿ ಗುಂಪು ಆಟಗಳು ಮತ್ತು ಏಕವ್ಯಕ್ತಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪೌರನೌಕರರ ಸಂಘದ ರಾಜ್ಯಪರಿಷತ್ ಸದಸ್ಯರಾದ ರಾಜು, ಮಂಜುನಾಥ್,ಲಕ್ಷ್ಮೀನಾರಾಯಣ್,ಶಾಖಾ ಅಧ್ಯಕ್ಷ ಚಂದ್ರಶೇಖರ್,ಉಪಾಧ್ಯಕ್ಷ ನಾರಾಯಣ ಸ್ವಾಮಿ, ಖಜಾಂಚಿ ರವಿಮೂರ್ತಿ, ಪುರಸಭೆ ಆರೋಗ್ಯ ನಿರೀಕ್ಷಕಿ ಮೀನಾಕ್ಷಿ, ಪರಿಸರ ಅಭಿಯಂತರೆ ಉಮಾ,ಮೋಹನಾಕುಮಾರಿ,ಸಮುದಾಯ ಸಂಘಟಕಿ ಅನುಸೂಯಮ್ಮ ಮತ್ತಿತರರು ಉಪಸ್ಥಿತರಿದ್ದರು.
ಇಂದು ದಿನಾಚರಣೆ : ಪಟ್ಟಣದ ಪುರಸಭೆ ಆವರಣದಲ್ಲಿ ಮಂಗಳವಾರ ಪೌರಕಾರ್ಮಿಕ ದಿನಾಚರಣೆ ಆಯೋಜಿಸಲಾಗಿದೆ. ಶಾಸಕ ಡಾ.ಕೆ.ಶ್ರೀನಿವಾಸ್‌ಮೂರ್ತಿ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಪೌರಕಾರ್ಮಿಕರು ತಮಟೆವಾದನದ ಮೂಲಕ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಕ್ರೀಡಾವಿಜೇತರಿಗೆ ಬಹುಮಾ® ವಿತರಿಸಲಾಗುತ್ತದೆ. ಉತ್ತಮ ಪೌರ ನೌಕರರಿಗೆ ಪುರಸಭೆ ವತಿಯಿಂದ ಸನ್ಮಾನ ಮಾಡಲಾಗುತ್ತದೆ ಎಂದು ಪೌರ ನೌಕರರ ಸಂಘದ ಶಾಖಾ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.