ಉತ್ತಮ ಆರೋಗ್ಯಕ್ಕೆ ಕ್ರೀಡೆ ಪೂರಕ
Team Udayavani, Aug 28, 2019, 3:00 AM IST
ಆನೇಕಲ್: ಕ್ರೀಡೆಗಳಲ್ಲಿ ಭಾಗವಹಿಸುಕೆಯಿಂದ ದೈಹಿಕ-ಮಾನಸಿಕ ಚೈತನ್ಯ ಬೆಳವಣಿಗೆ ಜೊತೆಗೆ ಜನರಲ್ಲಿ ದೇಶಾಭಿಮಾನ ಮತ್ತು ಭಾವೈಕ್ಯತಾ ಮನೋಭಾವ ಮೂಡುತ್ತದೆ ಎಂದು ಶಾಸಕ ಸರ್ಜಾಪುರ ಗ್ರಾಪಂ ಮಾಜಿ ಅಧ್ಯಕ್ಷ ಶಂಭಯ್ಯ ಹೇಳಿದರು. ತಾಲೂಕಿನ ಸರ್ಜಾಪುರ ಗ್ರಾಮದ ಅಂಬೇಡ್ಕರ್ ಆಟದ ಮೈದಾನದಲ್ಲಿ ಜೈ ಭೀಮ್ ಕಬಡ್ಡಿ ಕಪ್ (ಕ್ಲಬ್) ವತಿಯಿಂದ ಆಯೋಜಿಸಿದ್ದ 19 ವಯಸ್ಸಿನ ಒಳಗಿನ ಜೂನಿಯರ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಹಳ್ಳಿಯ ಸೊಗಡನ್ನು ಸೂಚಿಸುವ ಕಬಡ್ಡಿ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಹಕಾರಿಯಾಗುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಯಾವುದಾದರೊಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು. ಆದ್ದರಿಂದ ಭವಿಷ್ಯದಲ್ಲಿ ಉತ್ತಮ ಹುದ್ದೆಗಳು ಅರಸಿ ಬರುತ್ತವೆ ಎಂದರು.
ಜೈ ಭೀಮ್ ಕಬಡ್ಡಿ ಕಪ್ ಆಯೋಜಕರಾದ ನವೀನ್ ಮಾತನಾಡಿ, ಹೊಸ ಪ್ರತಿಭೆಗಳನ್ನು ಹೊರತರಲು ಕ್ರೀಡೆಗಳು ಅವಶ್ಯಕವಾಗಿದ್ದು, ಇದರ ಪೂರಕವಾಗಿ ಸರ್ಜಾಪುರದಲ್ಲಿ 19 ವಯಸ್ಸಿನ ಒಳಗಿನ ಜೂನಿಯರ್ ಕಬಡ್ಡಿ ಪಂದ್ಯಾವಳಿಯನ್ನು ತಾಲೂಕಿನಲ್ಲಿಯೇ ಪ್ರಥಮವಾಗಿ ರೂಪಿಸಿದ್ದು, ರಾಜ್ಯದ ನಾನಾ ಭಾಗಗಳಿಂದ ಸುಮಾರು 60ಕ್ಕೂ ಹೆಚ್ಚು ತಂಡಗಳು ಈ ಪಂದ್ಯದಲ್ಲಿ ಭಾಗವಹಿಸಿದ್ದು ಸರ್ಜಾಪುರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಜೈ ಭೀಮ್ ಕಬಡ್ಡಿ ಕಪ್ ಸಹ ಆಯೋಜಕ ಹೇಮಂತ್‌ಕುಮಾರ್ ಮಾತನಾಡಿ, ಆರೋಗ್ಯವಂತರಾಗಿರಲು ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕ್ರೀಡೆ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರು ಪ್ರತಿನಿತ್ಯಾ ಒಂದು ಗಂಟೆ ವ್ಯಾಯಾಮ ಮಾಡ ಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಅನಿವಾರ್ಯ ಆದರೆ ಅದರಲ್ಲಿ ಭಾಗವಹಿಸುವುದು ಬಹಳ ಮುಖ್ಯವಾಗಿದ್ದು ವಿದ್ಯಾರ್ಥಿಗಳು ಸೋತರು ಸಹ ಬೇಸರ ಪಡದೆ ಕ್ರೀಡೆಗಳಲ್ಲಿ ಸತತ ಅಭ್ಯಾಸ ಮಾಡಿದರೆ ಇಂದೆಲ್ಲಾ ನಾಳೆ ಗೆಲುವು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಉತ್ತಮವಾಗಿ ಆಟಚಾಡಿದ ಸರ್ಜಾಪುರ ಟೆರರ್ ತಂಡದ ಆಟಗಾರ ನಾಗೇಂದ್ರಗೆ 20 ಸಾವಿರ ರೂ. ನಗದು ಬಹುಮಾನವನ್ನು ಜೈಹಿಂದ್ ವಾಲಿಬಾಲ್ ಕ್ಲಬ್‌ನ ಮುಖ್ಯಸ್ಥರು ನೀಡಿದರು. ಶಾಸಕ ಬಿ.ಶಿವಣ್ಣ, ಸರ್ಜಾಪುರಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಮದ್ದೂರಪ್ಪ ಮಧು, ಸತೀಶ್, ಯಲ್ಲಪ್ಪ, ಮೌನ, ಜೈ ಭೀಮ್ ಕಬಡ್ಡಿ ಕಪ್ ಸಹ ಆಯೋಜಕ ಮುರಳಿ ಕೃಷ್ಣ, ಮೋಹನ್, ಮಂಜುನಾಥ್, ಆಭಿಲಾಷ್ ಹಾಗೂ ಕ್ರೀಡಾಭಿಮಾನಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.