ಎಸ್ಸೆಸ್ಸೆಲ್ಸಿ,14ರಿಂದ 3ನೇ ಸ್ಥಾನಕ್ಕೆ ಜಿಗಿತ: ಹರ್ಷ

Team Udayavani, May 3, 2019, 11:42 AM IST

blore-g

ದೇವನಹಳ್ಳಿ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದೆ. 2018ರಲ್ಲಿ ಜಿಲ್ಲೆಯು 14ನೇ ಸ್ಥಾನದಲ್ಲಿತ್ತು. ಪ್ರಸ್ತುತ ವರ್ಷದ ಫಲಿತಾಂಶ ಹೆಚ್ಚಳವಾಗಿರುವುದು ನಮ್ಮೆಲ್ಲರಿಗೂ ಬಹಳ ಸಂತೋಷದ ವಿಷಯವಾಗಿದ್ದರೂ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗಿದೆ. ಶೇ.88.34 ಫಲಿತಾಂಶ ಪಡೆದಿದೆ ಎಂಬ ತೃಪ್ತಿ ನಮಗಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಕಾರಿ ಆರ್‌.ಲತಾ ತಿಳಿಸಿದರು.

ತಾಲೂಕಿನ ಚಪ್ಪರದಕಲ್ಲು ಸರ್ಕಲ್ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಪರೀಕ್ಷೆಗೂ ಮುನ್ನ ನಿಕಟ ಪೂರ್ವ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೃಷ್ಣಬೈರೇಗೌಡ, ಜಿಲ್ಲಾ ಪ್ರಗತಿ ಪರಿಶೀಲನ ಸಭೆಯಲ್ಲಿ ಈ ವರ್ಷ ಫಲಿತಾಂಶ ಸುಧಾರಣೆಗೆ ಕರೆಕೊಟ್ಟು ಸೂಕ್ತ ಸಲಹೆಗಳನ್ನು ನೀಡಿದ್ದರು ಎಂದರು.

ಅನುದಾನ ಬಳಕೆ: ಫಲಿತಾಂಶ ಸುಧಾರಣಾ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಒಂದು ಸಮಿತಿಯನ್ನು ರಚಿಸಲಾಯಿತು. ಅದರಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಜಿಪಂ ಅಧಿಕಾರಿಗಳನ್ನು ಒಳಗೊಂಡ ಈ ಎರಡು ವಿವಿಧ ಅಧಿಕಾರಿಗಳ ಸಹಯೋಗದಲ್ಲಿ ನಡೆಸುವುದೆಂದು ತೀರ್ಮಾನಿಸಲಾಗಿತ್ತು. ಈ ಸಮಿತಿಗೆ ಶೈಕ್ಷಣಿಕವಾಗಿ ಸಲಹೆ ಮಾರ್ಗದರ್ಶನ ನೀಡಲು ನಿವೃತ್ತ ಪ್ರಾಧ್ಯಾಪಕ ಡಾ.ಆರ್‌.ನಾಗರಾಜಯ್ಯ ಅವರನ್ನು ನೇಮಿಸಿಕೊಳ್ಳಲಾಗಿತ್ತು. ಈ ಯೋಜನೆಗೆ ಅಗತ್ಯವಿರುವ ಅನುದಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯು ತಮ್ಮ ಸಿಎಸ್‌ಆರ್‌ ಅನುದಾನದಿಂದ ನೀಡಲು ಒಪ್ಪಿಕೊಂಡಿತ್ತು. ಅದರಂತೆ ಅನುದಾನವನ್ನು ಸಹ ನೀಡಿದೆ ಎಂದು ಹೇಳಿದರು.

ಸುಧಾರಣಾ ಸಮಿತಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣ ಸಮಿತಿ ಎಂಬ ಶೀರ್ಷಿಕೆಯಡಿಯಲ್ಲಿ ಚಿಂತನೆ ಪ್ರಾರಂಭವಾಯಿತು. ಪ್ರಾರಂಭದಲ್ಲಿ ಯೋಜನೆಯ ಮಾನದಂಡವಾಗಿ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯವಾರ್ಷಿಕ ಪರೀಕ್ಷೆಯಲ್ಲಿ ಶೇ.40ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರ್ತಿಸಲಾಯಿತು. ಈ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 1936 ವಿದ್ಯಾರ್ಥಿಗಳ ಸಾಧನೆ ಮಟ್ಟವು ಗಣಿತ, ವಿಜ್ಞಾನ, ಆಂಗ್ಲ ಭಾಷೆ ಮತ್ತು ವಿಜ್ಞಾನದಲ್ಲಿ ಕಡಿಮೆ ಇದ್ದರಿಂದ ಕಡಿಮೆ ಸಾಧನೆ ಮಾಡಿದ ಮಕ್ಕಳನ್ನು ಒಕ್ಕೂಡಿಸಿ ವಿಶೇಷ ಪರಿಗಣಿತ ಗುಂಪು (ವಿಪಿಜಿ) ರೂಪಿಸಲಾಯಿತು. ಈ ಮಕ್ಕಳಿಗೆ ನಾಲ್ಕು ವಿಷಯಗಳ ಬೋಧನೆಗೆ ವಾರದಲ್ಲಿ ಒಂದು ದಿನ ವಿಶೇಷ ತರಗತಿಗಳನ್ನು ನಡೆಸಲು ಅಂದಾಜಿಸಲಾಯಿತು.

ಸಮಗ್ರ ವ್ಯವಸ್ಥೆ: ಈ ತರಗತಿಗಳನ್ನು ವ್ಯವಸ್ಥಿತವಾಗಿ ನಡೆಸಲು ಸ್ಥಳ ಮತ್ತು ಸಂಪನ್ಮೂಲಗಳ ಲಭ್ಯತೆಗೆ ಅನುಸಾರವಾಗಿ 33 ಕೇಂದ್ರಗಳನ್ನು ಗುರ್ತಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ವಿದ್ಯಾರ್ಥಿಗಳನ್ನು 30 ಕೇಂದ್ರಗಳಿಗೆ ಹಂಚಿಕೆ ಮಾಡಿ ತರಗತಿಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮತ್ತು ಮದ್ಯಾಹ್ನದ ಊಟದ ವ್ಯವಸ್ಥೆ, ಲೇಖನ ಸಾಮಗ್ರಿಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಹ್ಯಾಪಿ ಹೋಮ್‌ ಸ್ಕೂಲ್ ಪದ್ಧತಿ ಅನುಷ್ಠಾನಗೊಳಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಹೆಚ್ಚಿಸಲಾಯಿತು. ವಿಪಿಜಿ ಅನುಷ್ಠಾನದಿಂದ ಶೇ. 40ರಷ್ಟು ಮಕ್ಕಳು ಉತ್ತಮ ಸಾಧನೆಯತ್ತ ದಾಪುಗಾಲು ಹಾಕಿದ್ದಾರೆ. ಹೋಮ್‌ ಸ್ಕೂಲ್ ಪ್ರಾರಂಭಿಸಿದ್ದರಿಂದ ಶೇ.60ರಷ್ಟು ಮಕ್ಕಳು ಹೆಚ್ಚು ಪಗ್ರತಿ ಸಾಧಿಸಲು ಸಹಕಾರಿಯಾಯಿತು. ಈ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮದಿಂದ ನಮ್ಮ ಜಿಲ್ಲೆಯ 14ನೇ ಸ್ಥಾನದಿಂದ 3 ನೇ ಸ್ಥಾನಕ್ಕೆ ಬರಲು ಕಾರಣವಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೂ ಸಹ ಈ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ.

ಹ್ಯಾಪಿ ಹೋಮ್‌ ಸ್ಕೂಲ್ನ ಪ್ರಯೋಗ ಪ್ರಾರಂಭವಾದ ಶಾಲೆಯಾದ ಜಿಜೆಸಿ ವಿಶ್ವನಾಥಪುರದಲ್ಲಿ ಒಟ್ಟು 13 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಹ್ಯಾಪಿ ಹೋಂ ಸ್ಕೂಲ್ನ ಯಶೋಗಾಥೆ ಎಂದೇ ಹೇಳಬಹುದು ಎಂದರು.

ನಿವೃತ್ತ ಪ್ರಾಧ್ಯಾಪಕ ಡಾ.ಆರ್‌.ನಾಗರಾಜಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಕೃಷ್ಣಮೂರ್ತಿ, ಜಿಪಂ ಮುಖ್ಯಾಲೆಕ್ಕಾಕಾರಿ ಶೋಭಾ, ಯೋಜನಾಕಾರಿ ವಿನುತಾ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಚೇರಿಯ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹನುಮಂತಪ್ಪ, ಮತ್ತಿತರರು ಇದ್ದರು. ಪತ್ರಿಕಾಗೋಷ್ಠಿಗೂ ಮುನ್ನ ರಂಗಭೂಮಿ ಹಾಸ್ಯ ಕಲಾವಿದ ಮಾಸ್ಟರ್‌ ಹೀರಣಯ್ಯ ನಿಧನಕ್ಕೆ ಸಂತಾಪ ಸೂಚಿಸಿದರು.

ಮಕ್ಕಳ ಫಲಿತಾಂಶ

ದೇವನಹಳ್ಳಿ ಪರೀಕ್ಷೆಗೆ ಕುಳಿತವರು 445 ಉತ್ತೀರ್ಣರಾದವರು 349, ಶೇ.78.43, ದೊಡ್ಡಬಳ್ಳಾಪುರ 608, 343, ಶೇ.56.41, ಹೊಸಕೋಟೆ 490, 352, ಶೇ. 71.83, ನೆಲಮಂಗಲ 441, 336 ಶೇ.76.19, ಒಟ್ಟು 1984 ಮಕ್ಕಳ ಪೈಕಿ 1380 ಮಕ್ಕಳು ಉತ್ತೀರ್ಣರಾಗಿದ್ದಾರೆ. ಶೇ.70ರಷ್ಟು ಫಲಿತಾಂಶ ಪಡೆದಿದ್ದಾರೆ. ಜಿಲ್ಲೆಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ನವ್ಯ 625ಕ್ಕೆ 619, ನಾಗೇಂದ್ರ ಕುಮಾರ್‌ 619 ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ಶೇಕಡಾ ಫಲಿತಾಂಶ

•ಶೇ.93.30 ದೇವನಹಳ್ಳಿ
•ಶೇ. 92.15 ನೆಲಮಂಗಲ
•ಶೇ. 89.16 ಹೊಸಕೋಟೆ
•ಶೇ. 79.69 ದೊಡ್ಡಬಳ್ಳಾಪುರ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಎಸ್‌ಆರ್‌ ಅನುದಾನದಿಂದ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಉತ್ತೇಜನವನ್ನು ನೀಡಲಾಗುತ್ತಿದೆ. ಸಿಇಒ ಅವರು ಸಿಎಸ್‌ಆರ್‌ ಅನುದಾನ ನೀಡುವಂತೆ ಕೇಳಿದ್ದರು ಅದರಂತೆ ನೀಡಿದ್ದೇವೆ. ಇಂತಹ ಉತ್ತಮ ಫಲಿತಾಂಶ ಬಂದಿರುವುದಕ್ಕೆ ಸಂತಸವಾಗಿದೆ.
●ಹೇಮಂತ್‌ ಮಾರೇಗೌಡ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯ ವ್ಯವಸ್ಥಾಪಕ

ಟಾಪ್ ನ್ಯೂಸ್

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.