ಕೋವಿಡ್ ತಡೆಗೆ ಸರ್ಕಾರ ವಿಫ‌ಲ: ಆರೋಪ

Team Udayavani, Jun 3, 2021, 11:00 PM IST

ಕೋವಿಡ್ ತಡೆಗೆ ಸರ್ಕಾರ ವಿಫ‌ಲ: ಆರೋಪ

ದೇವನಹಳ್ಳಿ: ಸರ್ಕಾರ ಕೋವಿಡ್ ತಡೆಗೆ ಸಂಪೂರ್ಣ ವಿಫ‌ಲವಾಗಿದೆ. ಜನರು ಲಾಕ್‌ಡೌನ್‌ನಲ್ಲಿ ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ಇದೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ತಿಳಿಸಿದರು.

ತಾಲೂಕಿನ ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ಆರೋಗ್ಯಾಧಿಕಾರಿ ಡಾ.ಸಂಜಯ್‌, ಉಪ ತಹಶೀಲ್ದಾರ್‌ ಚೈತ್ರಾ, ವೈದ್ಯೆ ಡಾ.ಕೀರ್ತಿ ಅವರಿಗೆ ಆರೋಗ್ಯ ಸುರಕ್ಷತಾ ಸಾಮಗ್ರಿ ಹಸ್ತಾಂತರಿಸಿ ಮಾತನಾಡಿ, ದೇವನಹಳ್ಳಿಯ ಯುವ ಕಾಂಗ್ರೆಸ್‌ ವಾರಿಯರ್ಸ್‌ಗಳು ಜನರ ಪರವಾಗಿ ಶ್ರಮಿಸುತ್ತಿದ್ದಾರೆ. ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ವಿ.ಶಾಂತಕುಮಾರ್‌ ನೇತೃತ್ವದಲ್ಲಿ ಆರೋಗ್ಯ ಸುರಕ್ಷತಾ ಸಾಮಗ್ರಿಗಳು, ಅಂಗವಿಕಲರಿಗೆ ದಿನಸಿ ಕಿಟ್‌ ನೀಡಲಾಗುತ್ತಿದೆ ಎಂದರು.

ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಮಾತನಾಡಿ, ಈಗಾಗಲೇ ಜಿಲ್ಲಾಡಳಿತ, ತಾಲೂಕು ಆಡಳಿತ ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುತ್ತಿದೆ. ಕೊರೊನಾ ಎರಡನೇ ಅಲೆಯಿಂದ ಜನರಿಗೆ ತೊಂದರೆಯಾಗಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ಮಾತನಾಡಿದರು. ಮಾಜಿ ಸಚಿವ ಕೃಷ್ಣಭೈರೇಗೌಡ, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಪ್ರಸನ್ನಕುಮಾರ್‌, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್‌, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌, ಪುರಸಭಾ ಸದಸ್ಯ ಎನ್‌.ರಘು, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ಆರ್‌.ನಾಗೇಶ್‌, ಕುಂದಾಣ ಗ್ರಾಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಪುರಸಭಾ ಅಧ್ಯಕ್ಷೆ ರೇಖಾ, ಮಹಿಳಾ ಅಧ್ಯಕ್ಷೆ ಲಕ್ಷ್ಮೀ, ಮುಖಂಡರಾದ ಸೋಮಣ್ಣ, ಆರ್‌.ಸುಮಂತ್‌, ನರಸಿಂಹಮೂರ್ತಿ, ಲಕ್ಷ್ಮೀಕಾಂತ್‌, ಎಸ್‌.ಜಿ.ಮಂಜುನಾಥ್‌, ಡಿ.ಎಂ.ದೇವರಾಜ್‌, ಸಂದೀಪ್‌, ಅರುಣ್‌ ಹಾಜರಿದ್ದರು.

ಟಾಪ್ ನ್ಯೂಸ್

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.