ಸೌಲಭ್ಯ ಪಡೆಯಲು ಬೀದಿನಾಟಕದಿಂದ ಜಾಗೃತಿ ಅಭಿಯಾನ
ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪಲಾನುಭವಿ ಸದುಪಯೋಗ ಮಾಡಿಕೊಳ್ಳಬೇಕು: ಸಹಾಯಕ ನಿರ್ದೇಶಕಿ ನಳಿನಾಕ್ಷಿ
Team Udayavani, Oct 14, 2021, 12:20 PM IST
ದೇವನಹಳ್ಳಿ: ಜಾತಿ ನಿಂದನೆ ಯಾಕೆ ಆಗುತ್ತಿದೆ. ಅಲóಸಿಟಿ ಪ್ರಕರಣ ಯಾಕೆ ಆಗುತ್ತಿದೆ. ಸರ್ಕಾರ ದಿಂದ ಸಮಾಜ ಕಲ್ಯಾಣ ಇಲಾಖೆಗೆ ಬರುವ ಯೋಜನೆಗಳ ಸೌಲಭ್ಯ ಇಲಾಖೆಯಲ್ಲಿ ಹೇಗೆ ಪಡೆದುಕೊಳ್ಳಬಹುದು. ಶಾಲಾ ಮಕ್ಕಳಿಗೆ ಏನೆಲ್ಲಾ ಕಾರ್ಯಕ್ರಮಗಳು ಇವೆ ಎಂಬುವುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಳಿನಾಕ್ಷಿ ತಿಳಿಸಿದರು.
ತಾಲೂಕಿನ ರಾಮನಾಥಪುರ ಗ್ರಾಮದ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಸಬಲೀಕರಣ, ಪ.ಜಾತಿ ಮತ್ತು ಪಂಗಡಗಳ ಮೇಲಾಗುತ್ತಿರುವ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆ, ಜಿಲ್ಲಾ ಜಾಗೃತಿ ಸಮಿತಿಯ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯ ಪ್ರತಿ ಅರ್ಹ ಫಲಾನುಭವಿಗಳು ಹೇಗೆ ಪಡೆದುಕೊಳ್ಳಬಹುದೆಂಬುವುದನ್ನು ಕಲಾತಂಡದ ಮೂಲಕ ಬೀದಿನಾಟಕ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ.
ಪ.ಜಾತಿ, ಪಂಗಡ ವರ್ಗಗಳ ಅಭಿವೃದ್ಧಿಗೆ ಪ್ರತಿವರ್ಷ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮೀಸಲಿಟ್ಟ ಹಣವನ್ನು ಪಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಬೀದಿನಾಟಕದ ಮೂಲಕ ಜಾಗೃತಿ: ಮಹಿಳಾ ಸಬಲೀಕರಣ, ಪ. ಜಾತಿ ಮತ್ತು ಪಂಗಡಗಳ ಜನರ ಮೇಲಾಗುತ್ತಿರುವ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆ, ಜಿಲ್ಲಾ ಜಾಗೃತಿ ಸಮಿತಿ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯ ಪ್ರತಿ ಅರ್ಹ ಫಲಾನುಭವಿಗಳು ಹೇಗೆ ಪಡೆದುಕೊಳ್ಳಬ ಹುದೆಂಬುದನ್ನು ಕಲಾ ತಂಡದಿಂದ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ಇದನ್ನೂ ಓದಿ;- ಇಂದು ರಿಲೀಸ್ ಆಗಲೇ ಇಲ್ಲ ಕೋಟಿಗೊಬ್ಬ : ಸುದೀಪ್ ಸರ್ ಗೆ ಸತ್ಯ ಗೊತ್ತಿದೆ ಎಂದ ಸೂರಪ್ಪ ಬಾಬು
ಸರ್ಕಾರ ದಿಂದ ಸಮಾಜ ಕಲ್ಯಾಣ ಇಲಾಖೆಗೆ ಬರುವ ಯೋಜನೆಗಳ ಸೌಲಭ್ಯಗಳನ್ನು ಇಲಾಖೆಯಲ್ಲಿ ಹೇಗೆ ಪಡೆದುಕೊಳ್ಳಬೇಕು. ಶಾಲಾ ಮಕ್ಕಳಿಗೆ ಯಾವ ಕಾರ್ಯಕ್ರಮಗಳು ಸಿಗುತ್ತವೆ ಎನ್ನುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಸೌಲಭ್ಯ ಪಡೆದುಕೊಳ್ಳಲು ಮುಂದಾಗಿ: ಜಿಲ್ಲಾ ಜಾಗೃತಿ ಸಮಿತಿ ಹಾಗೂ ಉಸ್ತುವಾರಿ ಸಮಿತಿ ಸದಸ್ಯೆ ಎಸ್. ರವಿಕಲಾ ಮಾತನಾಡಿ, ಪ್ರತಿಯೊಬ್ಬರೂ ಇದರ ಬಗ್ಗೆ ತಿಳಿದುಕೊಂಡು ಇಲಾಖೆ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕು. ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಗಿದೆ.
ಪ.ಜಾತಿ, ಪಂಗಡದವರ ಸಮಗ್ರ ಶ್ರೇಯೋಭಿ ವೃದ್ಧಿಗಾಗಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳಾದ ವಿದ್ಯಾರ್ಥಿವೇತನ, ವಿದೇಶ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಗರಿಷ್ಠ 10 ಲಕ್ಷ ರೂ. ಸಹಾಯಧನ ಮಂಜೂರು, ನಿರುದ್ಯೋಗಿಗಳಿಗೆ ಲಘುವಾಹನ ತರಬೇತಿ, ಸರಳ ವಿವಾಹಕ್ಕೆ ಇಲಾಖೆಯಿಂದ 50 ಸಾವಿರ ರೂ.ಪ್ರೋತ್ಸಾಹಧನ ಮಂಜೂರು, ಹೀಗೆ ಹಲವಾರು ಯೋಜನೆಗಳ ಮಾಹಿತಿ ನೀಡುವ ಕಾರ್ಯವಾಗುತ್ತಿದೆ ಎಂದರು.
ತಾಲೂಕಿನ ಇಂಡ್ರಸನಹಳ್ಳಿ, ಕುಂದಾಣ, ರಾಮನಾಥಪುರ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗಿದೆ. ಜಿಲ್ಲಾ ಜಾಗೃತಿ ವೇದಿಕೆ ಹಾಗೂ ಉಸ್ತುವಾರಿ ಸಮಿತಿ ಸದಸ್ಯೆ ಎಸ್. ರವಿಕಲಾ, ಕೊಯಿರ ಗ್ರಾಪಂ ಕಾರ್ಯದರ್ಶಿ ಆದೇಪ್ಪ, ರಾಮನಾಥಪುರ ಗ್ರಾಮದ ಪ.ಜಾತಿ, ಪಂಗಡ ಮಹಿಳೆಯರು, ಮಕ್ಕಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಕಲಾ ತಂಡದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.