ಟಿಎಪಿಸಿಎಂಎಸ್: ಶೇ.91.5 ಮತದಾನ
ಚುನಾವಣೆಯಲ್ಲಿ "ಎ' ತರಗತಿಯಿಂದಕಾಂಗ್ರೆಸ್ ಬೆಂಬಲಿತ ನಾಲ್ವರು ಆಯ್ಕೆ
Team Udayavani, Nov 9, 2020, 3:10 PM IST
ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟಸಹಕಾರ ಸಂಘಕ್ಕೆ ಭಾನುವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.91.5 ಮತದಾನವಾಗಿದೆ.
ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಮತದಾನದಲ್ಲಿ ನೂರಾರು ಜನ ಸಾಲುಗಟ್ಟಿ ನಿಂತು ಮತ ಚಲಾಯಿಸಿದರು. ಹಿರಿಯರು ವ್ಹೀಲ್ ಚೇರ್‌ಗಳಲ್ಲಿ ಆಗಮಿಸಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು.
ಶಾಸಕರಿಂದ ಮತ ಚಲಾವಣೆ: ಕೋವಿಡ್ -19 ದೃಢಪಟ್ಟಿದ್ದರಿಂದ 13 ದಿನಗಳಿಂದಲೂ ಮನೆಯಲ್ಲಿಯೇ ಇದ್ದ ಶಾಸಕ ಟಿ. ವೆಂಕಟರಮಣಯ್ಯ ಭಾನುವಾರ ನಗರಕ್ಕೆಆಗಮಿಸಿ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿದರು. ಎ ತರಗತಿಯಿಂದ ವಿಎಸ್‌ಎಸ್‌ಎನ್‌ಗಳ ಪ್ರತಿನಿಧಿಗಳು ಚಲಾಯಿಸುವ ಒಟ್ಟು 18 ಮತಗಳಿಗೆ 18 ಮತದಾನವಾಗಿ ಶೇ.100 ಮತದಾನವಾಯಿತು.
ಬಿ ತರಗತಿಯಿಂದ ಒಟ್ಟು 3691 ಮತದಾರರ ಪೈಕಿ 3374 ಮತದಾನವಾಗಿದ್ದು ಶೇ.91.5 ಮತದಾನವಾಗಿದೆ. ಕಾಂಗ್ರೆಸ್-ಜೆಡಿಎಸ್‌ನಿಂದ ಎಲ್ಲಾ 13 ಸ್ಥಾನಗಳಿಗೂ ಅಭ್ಯರ್ಥಿಗಳು ನಾಮಪತ್ರಸಲ್ಲಿಸಿದ್ದರು. ಆದರೆ, ಬಿಜೆಪಿ ಜೆಡಿಎಸ್ ಪಕ್ಷದ ಅಪ್ಪಯ್ಯಣ್ಣ ಅವರ ಬಣದೊಂದಿಗೆ ಸ್ಥಾನ ಹೊಂದಾಣಿಕೆ ಮಾಡಿಕೊಂಡುಎಮತ್ತು ಬಿ ತರಗತಿ ಸೇರಿ 6 ಸ್ಥಾನಗಳಿಗೆ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಮತ ಕೇಂದ್ರದ ಬಳಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಚುನಾವಣೆ ಸಾರ್ವಜನಿಕ ಚುನಾವಣೆಗಳನ್ನು ಮೀರಿಸುವಂತಿತ್ತು. ಸಂಜೆ 4ಕ್ಕೆ ಚುನಾವಣೆ ಮುಗಿದ ನಂತರ ಮತ ಎಣಿಕೆ ಆರಂಭವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.