ವಿಶ್ವಾಸ ದ್ರೋಹಿಗಳಿಗೆ ತಕ್ಕ ಪಾಠ ಕಲಿಸಿ

Team Udayavani, Nov 24, 2019, 3:00 AM IST

samasyegala

ಹೊಸಕೋಟೆ: ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರದ ಬಿಜೆಪಿ ಸರಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅಲ್ಲಂ ರಾಜು ಹೇಳಿದರು. ಅವರು ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಗೋಷ್ಠಿಯಲ್ಲಿ ಮಾತನಾಡಿದರು.

ಜಾರಿಗೊಳಿಸುತ್ತಿರುವ ಯೋಜನೆಗಳು ಕೇವಲ ಬಂಡವಾಳಶಾಹಿಗಳಿಗೆ ಅನುಕೂಲವಾಗಿದ್ದು ರಾಷ್ಟ್ರದ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳುತ್ತಿದ್ದು ಉದ್ಯೋಗ ಸೃಷ್ಟಿ ಬಗ್ಗೆ ನೀಡಿದ್ದ ಭರವಸೆಯನ್ನು ಇದುವರೆವಿಗೂ ಈಡೇರಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾಮಾನ್ಯ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಿಕೊಡಲು ವಿಫ‌ಲವಾಗಿದ್ದು ಆರ್ಥಿಕ ಬಿಕ್ಕಟ್ಟು ಸೃಷ್ಟಿಗೊಳಿಸಿರುವುದೇ ಪ್ರಮುಖ ಸಾಧನೆಯಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಮ್ಮಿಶ್ರ ಸರಕಾರವನ್ನು ಕುತಂತ್ರಗಳಿಂದಾಗಿ ಪದಚ್ಯುತಗೊಳಿಸಿ ಉಪಚುನಾವಣೆಗೆ ಬಿಜೆಪಿಯೇ ಕಾರಣವಾಗಿದೆ.

ರಾಜೀನಾಮೆ ನೀಡಿರುವ ಎಲ್ಲಾ 17 ಶಾಸಕರೂ ಸಹ ತಮ್ಮ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿದವರೇ ಆಗಿದ್ದು ಮತದಾರರು ಇಂತಹ ದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದರು. ಹೆಬ್ಬಾಳ ಶಾಸಕ ಬೈರತಿ ಸುರೇಶ್‌ ಮಾತನಾಡಿ ಚುನಾವಣೆ ನಂತರ ಎಂಟಿಬಿ ನಾಗರಾಜ್‌ ವಿರುದ್ಧ ದೂರು ದಾಖಲಿಸಲಾಗುವುದು.

ನಾಮಪತ್ರದೊಂದಿಗೆ ಸಲ್ಲಿಸಿರುವ ಮಾಹಿತಿಯಲ್ಲಿ ಸಾಲ ನೀಡಿರುವ ಬಗ್ಗೆ ಉಲ್ಲೇಖೀಸದೆ ಇದೀಗ ರಾಜಕಾರಣಿಗಳಿಗೆ ಕೋಟ್ಯಾಂತರ ರೂ.ಗಳನ್ನು ಕೊಟ್ಟಿರುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ತಾಲೂಕಿನಲ್ಲಿ ನ.24ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾಜಿ ಸಚಿವರುಗಳಾದ ಡಿ.ಕೆ.ಶಿವಕುಮಾರ್‌, ಜಮೀರ್‌ ಅಹಮದ್‌,

ಕೃಷ್ಣಬೈರೇಗೌಡ ಇನ್ನಿತರರು ಸೂಲಿಬೆಲೆ, ಅನುಗೊಂಡನಹಳ್ಳಿ, ನಂದಗುಡಿ ಹೋಬಳಿ ಹಾಗೂ ನಗರದಲ್ಲಿ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮಾಜಿ ಶಾಸಕರಾದ ಶ್ರೀನಿವಾಸ್‌, ರಾಘವೇಂದ್ರ ಹಿಟ್ನಾಳ್‌, ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮುನಿಶಾಮಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.