ಕನ್ನಡ ಶಾಲೆಗೆ ಶಿಕ್ಷಕರೇ ಕಂಟಕ

ಶಿಕ್ಷಕರ ವಿರುದ್ಧ ಶಾಲೆ ಮುಚ್ಚಿಸುವ ಹುನ್ನಾರದ ಆರೋಪ | ಕಠಿಣ ಕ್ರಮದ ಎಚ್ಚರಿಕೆ

Team Udayavani, Aug 2, 2019, 11:06 AM IST

br-tdy-1

ನೆಲಮಂಗಲ ಪಟ್ಟಣದ ಪ್ರಿಯದರ್ಶಿನಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ಫ‌ರ್ವೀನ್‌ತಾಜ್‌ ಭೇಟಿ ನೀಡಿ ದಾಖಲಾತಿ ಪರಿಶೀಲನೆ ಮಾಡಿದರು.

ನೆಲಮಂಗಲ: ರಾಜ್ಯದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿ ಶಾಲೆ ಗಳನ್ನು ನಡೆಸುತ್ತಿದೆ. ಆದರೆ ಶಿಕ್ಷಕರು ಶಾಲೆಯನ್ನು ಮುಚ್ಚುವ ಉದ್ದೇಶದಿಂದ ಮಕ್ಕಳಿಗೆ ಬೇರೆ ಶಾಲೆಗೆ ಸೇರುವಂತೆ ತಿಳಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದು ವೇಳೆ ಶಿಕ್ಷಕರ ವಿರುದ್ಧದ ಆರೋಪ ಸಾಬೀತಾದರೆ, ಕ್ರಿಮಿನಲ್ ಕೇಸ್‌ ದಾಖಲಿಸಿ, ಮೂರು ತಿಂಗಳ ವೇತನ ಕಡಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಕರ ನಡೆ ಅನುಮಾನಾಸ್ಪದ: ಪಟ್ಟಣದ ಸುಭಾಷ್‌ ನಗರದ ಪ್ರಿಯದರ್ಶಿನಿ ಪ್ರೌಢ ಶಾಲೆ 1994ರಲ್ಲಿ ಆರಂಭವಾಗಿ 1996 ರಿಂದ ಸರ್ಕಾರಿ ಅನುದಾನಿತ ಗೊಂಡಿದೆ. ಜತೆಗೆ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಕಾಗಿಸಿದೆ. ಇಂತಹ ಶಾಲೆಗೆ ಬಾಗಿಲು ಮುಚ್ಚುವ ಅನಿವಾರ್ಯ ಎದುರಾಗಿರುವುದಕ್ಕೆ ಮೂಲ ಕಾರಣವೇ ಮುಖ್ಯಶಿಕ್ಷರು ಹಾಗೂ ಸಹ ಶಿಕ್ಷಕರು ಎಂಬ ಆರೋಪ ಬಲವಾಗಿ ಕೇಳಿದೆ. ಶಾಲೆ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಫ‌ವೀನ್‌ತಾಜ್‌, ಶಾಲೆ ಮುಚ್ಚುವಲ್ಲಿ ಮುಖ್ಯ ಶಿಕ್ಷಕರ ಪಾತ್ರವಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾಲಕರನ್ನು ಹೊಣೆ ಮಾಡಿದ ಶಿಕ್ಷಕರು: ಪ್ರಿಯ ದರ್ಶಿನಿ ಪ್ರೌಢಶಾಲೆ 2016-17 ನೇ ಸಾಲಿನಲ್ಲಿ 8 ರಿಂದ 10ನೇ ತರಗತಿಯವರೆಗೆ 94 ಮಕ್ಕಳು, 2017- 18 ರಲ್ಲಿ 84 ಮಕ್ಕಳಿದ್ದರು. ಇನ್ನೂ 2018-19ನೇ ಸಾಲಿನಲ್ಲಿ 67 ಮಕ್ಕಳಿದ್ದಾರೆ ಎಂಬ ದಾಖಲಾತಿಯನ್ನು ಇಲಾಖೆಗೆ ನೀಡಿದ್ದಾರೆ. 67 ಮಕ್ಕಳಲ್ಲಿ 26 ವಿದ್ಯಾ ರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಮುಗಿದ ನಂತರ 41 ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿನ 9 ಹಾಗೂ 10ನೇ ತರಗತಿಯಲ್ಲಿ ಇರಬೇಕಾಗಿತ್ತು. ದುರಂತ ವೆಂಬಂತೆ ಶಾಲೆ ಶಿಕ್ಷಕರು 3 ವಿದ್ಯಾರ್ಥಿಗಳನ್ನು ಬಿಟ್ಟು ಉಳಿದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ನೀಡಿದ್ದಾರೆ. ಇದರ ಬಗ್ಗೆ ಕೇಳಿದರೆ ಪೋಷ ಕರು ಕೊಡಿ ಎಂದು ಕೇಳಿದ್ದರು. ಅದಕ್ಕೆ ಕೊಟ್ಟಿದ್ದೇವೆ ಎಂದು ಮುಖ್ಯ ಶಿಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಇದರ ಹಿಂದೆ ಮುಖ್ಯ ಶಿಕ್ಷಕರ ಕೈವಾಡವಿದೆ ಎಂಬ ದಟ್ಟ ಅನಮಾನವಿದೆ ಎನ್ನಲಾಗಿದೆ.

ಶಿಕ್ಷಕರ ವಿರುದ್ಧ ಆರೋಪ: ಪ್ರಿಯದರ್ಶಿನಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಗಳನ್ನು ಈ ಶಾಲೆಯಲ್ಲಿ ಉತ್ತಮಶಿಕ್ಷಣ ನೀಡುವು ದಿಲ್ಲ. ಶಿಕ್ಷಕರ ಕೊರತೆಯಿದೆ. ಸೌಲಭ್ಯಗಳಿಲ್ಲ ಎಂಬು ದಾಗಿ ಹೇಳಿರುವ ಶಿಕ್ಷಕರು ಒತ್ತಾಯ ಪೂರ್ವಕವಾಗಿ ಬೇರೆ ಶಾಲೆಗೆ ಸೇರುವಂತೆ ಮಾಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆೆ. ಇದಕ್ಕೆ ಪೂರಕವೆಂಬಂತೆ ಒಂದೇ ವರ್ಷದಲ್ಲಿ 9 ಮತ್ತು 10ನೇ ತರಗತಿಯ 20ಕ್ಕೂ ಹೆಚ್ಚು ವಿದ್ಯಾ ರ್ಥಿಗಳಿಗೆ ವರ್ಗಾವಣೆ ಪ್ರಮಾಣ(ಟಿಸಿ) ನೀಡಿರು ವುದು ಹಾಗೂ ಹೊಸ ದಾಖಲಾತಿ ಮಾಡಿಕೊಳ್ಳ ದಿರುವುದು ಆರೋಪ ಹಾಗೂ ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ.

ಸೇವೆ ಸಲ್ಲಿಸುತ್ತಿರುವ 7 ಶಿಕ್ಷಕರು: ಪ್ರೌಢಶಾಲೆಯಲ್ಲಿ ಪ್ರಸ್ತುತ 7 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರೆಲ್ಲ ರಿಗೂ ಸರ್ಕಾರ ವೇತನ ನೀಡುತ್ತಿದೆ. ಶಿಕ್ಷಕರಿಲ್ಲದ ಕಾರಣ ಪಾಠ ಮಾಡಲಾಗದೆ ಫ‌ಲಿತಾಂಶ ಕಡಿಮೆ ಬಂದಿದೆ. ಹೀಗಾಗಿಯೇ ಪೋಷಕರು ವರ್ಗಾವಣೆ ಪ್ರಮಾಣ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ಮುಖ್ಯ ಶಿಕ್ಷಕರು ಉತ್ತರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ, ಶಿಕ್ಷಕರ ಕೊರತೆಯಿಲ್ಲ, ಮುಖ್ಯ ಶಿಕ್ಷಕರ ನಾಟಕ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಶಾಲೆ ಉಳಿವಿಗೆ ಸಂಘಟನೆಗಳ ಒತ್ತಾಯ: ಕನ್ನಡ ಶಾಲೆಗಳ ಉಳಿವಿಗೆ ಶಿಕ್ಷಕರು ಮುಂದಾಗಬೇಕು. ಮಕ್ಕಳನ್ನು ಬೇರೆ ಶಾಲೆಗೆ ಸೇರುವಂತೆ ವರ್ಗಾವಣೆ ಟಿಸಿ ನೀಡಿರುವುದು ಖಂಡನೀಯ. ಶಾಲೆ ಮುಂದು ವರಿಸಿ ಕನ್ನಡ ಶಾಲೆಗಳಿಗೆ ಜೀವ ನೀಡಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.