ಬಿಜೆಪಿಗೆ ಮಾನವೀಯತೆಯೇ ಇಲ್ಲ
Team Udayavani, Apr 17, 2019, 3:00 AM IST
ದೇವನಹಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಮಾನವೀಯತೆ ಇದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಬಿಜೆಪಿಗೆ ಯಾವುದೇ ರೀತಿಯ ಕರುಣೆ, ದಯೆ ಹಾಗೂ ಮಾನವೀಯತೆ ಇಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಆರೋಪಿಸಿದರು. ನಗರದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದರು.
ರಾಹುಲ್ ಪ್ರಧಾನಿ ಆಗುವುದು ಖಚಿತ: ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಬೇಕು. ರಾಹುಲ್ ಗಾಂಧಿ ಅವರನ್ನು ಪ್ರಧಾನಿಮಾಡಲು ಶ್ರಮಿಸಬೇಕು. ಮೋದಿ 5 ವರ್ಷ ಜನರನ್ನು ಮೊಡಿಯಲ್ಲಿ ಮುಳುಗಿಸಿ, ಜನರ ನಿರೀಕ್ಷೆ ಹುಸಿಗೊಳಿಸಿದ್ದಾರೆ. ಕೇವಲ 10, 15 ಜನರ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಮಾತ್ರ ಜನರ ನೆಮ್ಮದಿ ಕಾಪಾಡಲು ಸಾಧ್ಯ. ಯುಪಿಎ ಸರ್ಕಾರದಲ್ಲಿ 260, 300 ರೂ.ಗೆ ಸಿಗುತ್ತಿದ್ದ ಅನಿಲ ಈಗ 900 ರೂ. ತಲುಪಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.
ಮೋದಿಗೆ ಹಿಟ್ಲರ್ ಗತಿ ಬರುತ್ತೆ: ಇನ್ನೆಡರು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಕೆಲಸ ಮಾಡುತ್ತೇವೆ. ಸುಳ್ಳು ಆಶ್ವಾಸನೆ ನೀಡುವವರನ್ನು ನಂಬಬೇಡಿ. ಸರ್ಜಿಕಲ್ ಸ್ಟ್ರೈಕ್ ಎಲ್ಲಿ ಆಗಿದೆ. ಇದು ಕೇವಲ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಅವರನ್ನು ಹಿಗೇಯೇ ಬಿಟ್ಟರೆ ಇನ್ನೊಬ್ಬ ಹಿಟ್ಲರ್ ಆಗುವುದರ ಜೊತೆಗೆ ದೇಶವನ್ನೇ ಅಲ್ಲೊಲ್ಲ ಕಲ್ಲೊಲ್ಲ ಮಾಡುತ್ತಾರೆ. ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಮುಂದೊಂದು ದಿನ ಸರ್ವಾಧಿಕಾರಿ ಹಿಟ್ಲರ್‌ಗೆ ಬಂದ ಗತಿ ಇವರಿಗೆ ಬರುತ್ತದೆ ಎಂದರು.
ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮ: ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸವಾಗಬೇಕಿದೆ. ಮೊಯ್ಲಿ ಸಂಸದರಾಗಿ ಆಯ್ಕೆ ಆದ ಮೇಲೆ ವೀರಪ್ಪ ಮೊಯ್ಲಿ ಅವರು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಂತೆ ಆಗಬೇಕು.
ನೀರಿನ ಸಮಸ್ಯೆ ಇರುವುದರಿಂದ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ ನೀರನ್ನು ಹರಿಸುವ ಅಂತರ್ಜಲಮಟ್ಟ ಹೆಚ್ಚಿಸುವಂತೆ ಆಗಬೇಕು. 5 ವರ್ಷಗಳ ಕಾಲ ಮೈತ್ರಿ ಸರ್ಕಾರವನ್ನು ಕುಮಾರಸ್ವಾಮಿ ಅವರು ಸುಭದ್ರವಾಗಿ ನೀಡಲಿದ್ದಾರೆ. 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸುತ್ತಿದ್ದಾರೆ. ಇದನ್ನು ಸಹಿಸದ ವಿರೋಧ ಪಕ್ಷದವರು ನೀರು ಬರುವುದಿಲ್ಲ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಈ ವೇಳೆ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಎಸ್ ಆರ್ ರವಿ ಕುಮಾರ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಶ್ರೀನಿವಾಸ್,
ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನ ಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಜಿಪಂ ಸದಸ್ಯರಾದ ಲಕ್ಷಿನಾರಾಯಣ್, ಕೆ.ಸಿ.ಮಂಜುನಾಥ್, ಕೆಪಿಸಿಸಿ ಸದಸ್ಯರಾದ ಚೇತನ್‌ಗೌಡ, ಪಟಾಲಪ್ಪ, ಎ.ಚಿನ್ನಪ್ಪ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು,
ಟೌನ್ ಜೆಡಿಎಸ್ ಅಧ್ಯಕ್ಷ ಮುನಿ ನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್ ಬಾಬು, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್, ತಾಲೂಕು ಯುವ ಘಟಕದ ಅಧ್ಯಕ್ಷ ಭರತ್ ಕುಮಾರ್, ತಾಲೂಕು ಜೆಡಿಎಸ್ ಎಸ್‌ಸಿ ಘಟಕದ ಅಧ್ಯಕ್ಷ ಹನುಮಂತಪ್ಪ, ಮಾಹಿತಿ ಮತ್ತು ತಂತ್ರಜ್ಞಾನ ಘಟಕದ ಅಧ್ಯಕ್ಷ ಅನಿಲ್ ಯಾದವ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕೆ ಮಮತಾ, ಮಾಜಿ ಪುರಸಭಾ ಅಧ್ಯಕ್ಷರಾದ ಮೂರ್ತಿ, ನರಸಿಂಹಮೂರ್ತಿ, ಶಾರದಮ್ಮ, ಎಂ.ನಾರಾಯಣಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.