ಕುತೂಹಲ ಮೂಡಿಸಿದ ಸೂರ್ಯ ವೃತ್ತ
Team Udayavani, Apr 15, 2021, 1:29 PM IST
ದೊಡ್ಡಬಳ್ಳಾಪುರ: ಯುಗಾದಿಹಬ್ಬದ ದಿನದಂದು ಸೂರ್ಯನ ಸುತ್ತಲೂ ವೃತ್ತದ ಆಕೃತಿಯೊಂದು ಆವರಿಸಿ, ಆಗಸದಲ್ಲಿ ಅಪರೂಪದ ವಿದ್ಯಮಾನವೊಂದು ಗೋಚರಿಸಿತು. ಸುಮಾರು 11ಗಂಟೆ ಸುಮಾರಿಗೆ ಆರಂಭವಾಗಿ ಸುಮಾರು 2 ಗಂಟೆಗಳ ಕಾಲ ಗೋಚರಿಸಿದ ಈ ವಿದ್ಯಮಾನವನ್ನುನೋಡಿದ ಜನ ಪುಳಕಿತರಾಗಿ ಮೊಬೈಲ್,ಕ್ಯಾಮೆರಾದಲ್ಲೂ ಸೆರೆ ಹಿಡಿದರು.
ವಾಟ್ಸ್‌ಆ್ಯಪ್ ಗ್ರೂಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರಗಳು ವೈರಲ್ ಆಗಿದ್ದವು. ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ.
ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನುಇದು ನೀಡುತ್ತದೆ. ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀ ಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ.ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ,ಆಕರ್ಷಕ ಕಾಮನಬಿಲ್ಲು ಗೋಚ ರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.