ಜಿಲ್ಲೆಯಲ್ಲಿ 13 ಕೇಂದ್ರ, 8,743 ವಿದ್ಯಾರ್ಥಿಗಳು


Team Udayavani, Jun 17, 2020, 7:00 AM IST

jille-13kendra

ದೊಡ್ಡಬಳ್ಳಾಪುರ: ಕೋವಿಡ್‌ 19 ಸೋಂಕಿನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಜೂನ್‌ 18ರಂದು ಪರೀಕ್ಷೆ ನಡೆಯಲಿದೆ. ಜಿಲ್ಲೆಯ 13 ಪರೀಕ್ಷೆ ಕೇಂದ್ರಗಳಲ್ಲಿ 8,743  ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಸ್ತುತ ವಿದ್ಯಾರ್ಥಿಗಳಿರುವ ಜಿಲ್ಲೆಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಹೊರ ಜಿಲ್ಲೆಗಳ 117 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ನಗರದ ಸರಕಾರಿ  ಪದವಿ ಪೂರ್ವ ಕಾಲೇಜು, ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಮತ್ತು ಶ್ರೀದೇವರಾಜ ಅರಸು ಪದವಿ ಪೂರ್ವ ಕಾಲೇಜು, ದೇವನ ಹಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜು, ವಿಜಯ ಪುರ ಸರಕಾರಿ ಪದವಿ ಪೂರ್ವ ಕಾಲೇಜು,  ಪ್ರಗತಿ ಪದವಿ ಪೂರ್ವ ಕಾಲೇಜು, ಹೊಸಕೋಟೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ನಂದಗುಡಿ ಸರ ಕಾರಿ ಪದವಿ ಪೂರ್ವ ಕಾಲೇಜು, ನೆಲಮಂಗಲ ಸರಕಾರಿ  ಪದವಿ ಪೂರ್ವ ಕಾಲೇಜು, ಬಸವೇಶ್ವರ ಪದವಿ ಪೂರ್ವ ಕಾಲೇಜು, ಬಸ ವೇ ಶ್ವರ ಮಹಿಳಾ ಪದವಿ ಪೂರ್ವ ಕಾಲೇಜು, ತ್ಯಾಮಗ್ಲೊಂಡು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು  ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಶುಚಿತ್ವ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಂತೆ ಸ್ಯಾನಿಟೈಸರ್‌ ವ್ಯವಸ್ಥೆ  ಮಾಡಲಾಗುತ್ತಿದೆ. ಪರೀಕ್ಷೆ  ಕೇಂದ್ರದಲ್ಲೂ ವೈದ್ಯಕೀಯ ನೆರವಿನ ವ್ಯವಸ್ಥೆ  ಯಿದೆ. ಆರೋಗ್ಯ ಸಹಾಯಕರು ಪರೀಕ್ಷೆ ಆರಂಭದಿಂದ ಕೊನೆ ತನಕ ಅಗತ್ಯ ಔಷಧ ಮತ್ತು ಪ್ರಥಮ ಚಿಕಿತ್ಸೆ ಸಲಕರಣೆಯೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ.

ಪ್ರತಿ ಪರೀಕ್ಷೆ ಕೇಂದ್ರದಲ್ಲೂ ಕೊಠಡಿಗಳಿಗೆ ಮತ್ತು ಕಾಲೇಜಿನ ಆವರಣ ದಲ್ಲೂ ಶುಚಿತ್ವಕ್ಕಾಗಿ ಸ್ಯಾನಿಟೈಸರ್‌ ಸಿಂಪಡಿಸಲಾಗುತ್ತಿ ದೆ. ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌, ದೇಹದ ಉಷ್ಣತೆ ಅಳೆಯಲಾಗು ತ್ತದೆ. ಅನಾರೋಗ್ಯದ ಲಕ್ಷಣ  ಕಂಡ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ  ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿ ನಲ್ಲಿ 14 ಮಂದಿ ಬೇರೆ ಜಿಲ್ಲೆಯವರು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ  ಕೈಗೊಳ್ಳಲಾಗಿದ್ದು, ಒಂದು ಕೊಠಡಿಯಲ್ಲಿ 20 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆಸನಗಳ ನಡುವೆ ಸಾಕಷ್ಟು ಅಂತರವಿರುತ್ತದೆ. ಕೋವಿಡ್‌-19 ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲು 2 ಕೊಠಡಿ ಹಾಗೂ ಅಗತ್ಯ ಕೊಠಡಿ  ಮೇಲ್ವಿಚಾರಕರನ್ನು ಮೀಸಲಿರಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಪರೀಕ್ಷೆ ಕೇಂದ್ರದಲ್ಲಿ ಹಾಜರಿರುತ್ತಾರೆ. ಕೇಂದ್ರದ ಎಲ್ಲ ವಿದ್ಯಾರ್ಥಿಗಳ ಮಾಹಿತಿ ಪಡೆಯಲಾಗಿದ್ದು, ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮ  ಕೈಗೊಳ್ಳಲಾಗುತ್ತಿದೆ ಎಂದುಪ್ರಾಂಶುಪಾಲ ಬಿ.ಎಸ್‌.ಪ್ರಸನ್ನ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.