ಕಂಪನಿಗಳ ಸಾಮಾಜಿಕ ಜವಾಬ್ದಾರಿಯಡಿ ಶಿಕ್ಷಣಕ್ಕೆ ಒತ್ತು; ಶಾಸಕ ವೆಂಕಟರಮಣಯ್ಯ
ವಾಟರ್ ಪ್ಯೂರಿಪೈಯರ್, ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕಗಳನ್ನು ನೀಡಲಾಗುತ್ತಿದೆ
Team Udayavani, Jul 1, 2022, 5:27 PM IST
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಕಂಪನಿಗಳು ತಮ್ಮ ಕಂಪನಿಗಳ ಸಾಮಾಜಿಕ ಜವಾಬ್ದಾರಿಯಡಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಮುನ್ನಡೆಯಬೇಕಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ತಿಳಿಸಿದರು.
ನಗರದ ತಾಲೂಕು ಕಚೇರಿ ರಸ್ತೆ ಬಳಿ ಇರುವ ಸರ್ಕಾರಿ ಉರ್ದು ಪ್ರಾಥಮಿಕ ಪಾಠಶಾಲೆಯಲ್ಲಿ ಯುನಿಲೆಟ್ ಕಂಪನಿಯ ಸಿಎಸ್‌ಆರ್ ಅನುದಾನದಡಿ ನೀಡಲಾಗುತ್ತಿರುವ ಶಾಲೆಗಳ ಭೌತಿಕ ಸೌಲಭ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯಿಲಿ ಅವರು ಕೇಂದ್ರದ ಕಂಪನಿ ವ್ಯವಹಾರಗಳ ಸಚಿವರಾಗಿದ್ದಾಗ ಜಾರಿಗೆ ತಂದಿದ್ದ ಕಂಪನಿಗಳ ಸಾಮಾಜಿಕ ಜವಾಬ್ದಾರಿ ನಿಧಿಯಡಿಯಲ್ಲಿ ವಿವಿಧ ಸಾಮಾಜಿಕ ಸೇವೆಗಳನ್ನು ಹಮ್ಮಿಕೊಳ್ಳಬೇಕು ಎನ್ನುವ ನಿಯಮದಿಂದ ಇಂದು ತಾಲೂಕಿನಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಸೇವಾ ಕಾರ್ಯಗಳಾಗುತ್ತಿದ್ದು, ವಿವಿಧ ಸೌಲಭ್ಯ ಸಿಗುತ್ತಿವೆ ಎಂದರು.
ಯುನಿಲೆಟ್ ಕಂಪನಿಯು ಶಾಲೆಗಳ ಉನ್ನತೀಕರಣದ ದ್ಯೆàಯವನ್ನು ಹೊಂದುವ ಮೂಲಕ ಇಂದು ಹಲವಾರು ಸೌಲಭ್ಯಗಳನ್ನು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಆಂಗ್ಲ ಮಾಧ್ಯಮಕ್ಕೆ ದಾಖಲಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಂಪನಿಗಳ ಸಿಎಸ್‌ಆರ್ ನಿಧಿ ಹಾಗೂ ಸಮುದಾಯದ ಸಹಕಾರದಿಂದ ಹಲವಾರು ಸೌಲಭ್ಯ ದೊರೆಯುತ್ತಿವೆ. ಕಂಪನಿಗಳು ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಡಬೇಕಿದೆ ಎಂದು ಮನವಿ ಮಾಡಿದರು. ಇಂದು ಮಾತೃ ಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆ ಸಹ ಅಗತ್ಯವಾಗಿದೆ.
ಇಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ಆಂಗ್ಲ ಮಾಧ್ಯಮ ವನ್ನು ಬೋಧಿಸಲಾಗುತ್ತಿದ್ದು, ಪೋಷಕರು ವಿದ್ಯಾರ್ಥಿಗಳನ್ನು ಆಂಗ್ಲ ಮಾಧ್ಯಮಕ್ಕೆ ದಾಖಲಿ ಸುವಂತೆ ತಿಳಿಸಿದರು.
ಸ್ಕೂಲ್ ಬ್ಯಾಗ್, ಪುಸ್ತಕ ವಿತರಣೆ: ಯುನಿಲೆಟ್ ಕಂಪನಿಯ ಮುರಳೀಕೃಷ್ಣ ಮಾತನಾಡಿ, ಯುನಿಲೆಟ್‌ನಿಂದ ನಗರದ ವಿನಾಯಕನಗರ, ರೋಜಿಪುರದಲ್ಲಿ ಉರ್ದು ಹಾಗೂ ಕನ್ನಡ ಮಾಧ್ಯಮ ಶಾಲೆ ಹಾಗೂ ಇಲ್ಲಿನ ಶಾಲೆಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಇದರಲ್ಲಿ ಶಾಲೆಯ ನವೀಕರಣ, ಆಧುನಿಕ ತರಗತಿ ಕೊಠಡಿ, ಕಂಪ್ಯೂಟರ್ ಮತ್ತು ಪ್ರಿಂಟರ್, ವಾಟರ್ ಪ್ಯೂರಿಪೈಯರ್, ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕಗಳನ್ನು ನೀಡಲಾಗುತ್ತಿದೆ ಎಂದರು.
ಯುನಿಲೆಟ್‌ನ ವ್ಯವಸ್ಥಾಪಕ ನಿರ್ದೇಶಕ ಹುಮಾ ಯುನ್ ಫೈಯಾಜ್ ಮಾತನಾಡಿದರು. ನಗರಸಭಾ ಸದಸ್ಯೆ ರೂಪಿಣಿ, ರಜನಿ, ಮಂಜುಳಾ ರಮೇಶ್, ನಾಗರಾಜ್, ಆನಂದ್, ಅಲ್ತಾಫ್, ಚಂದ್ರ ಮೋಹನ್, ಎಸ್‌ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್, ಮುಖ್ಯಶಿಕ್ಷಕಿ ಶಮೀನಾ ಬೇಗಂ ಹಾಗೂ ಕಂಪನಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.