ನೂತನ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ
Team Udayavani, Nov 8, 2019, 3:04 PM IST
ದೇವನಹಳ್ಳಿ: ಕೆವಿನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಗ್ರಾಮೀಣ ವಿಧ್ಯಾರ್ಥಿಗಳ ಶೆ„ಕ್ಷಣಿಕ ಪ್ರಗತಿಗಾಗಿ ಸಾಮಾಜಿಕ ನಿರ್ವಹಣಾ ಅನುದಾನದಲ್ಲಿ 38 ಲಕ್ಷ ರೂ.ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೆವಿನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ಮಸಕಿ, ಯಾಷಿಮಾ ಸಾನ್ ತಿಳಿಸಿದರು.
ತಾಲೂಕಿನ ಸುಣ್ಣಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೆವಿನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದರು. ಗ್ರಾಮಿಣ ಪ್ರದೇಶದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಣ ಪ್ರತಿಯೊಬ್ಬ ಮಗುವಿಗೂ ಸಿಕ್ಕಾಗ ಮಾತ್ರ, ಗ್ರಾಮಗಳು ಶೆ„ಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಲ್.ಎನ್ ನಾರಾ ಯಣಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸಿಎಸ್‌ಆರ್ ಅನುದಾನದಲ್ಲಿ ಉತ್ತಮ ಸುಸರ್ಜಿತ ಕಟ್ಟಡ ನಿರ್ಮಾಣ ವಾಗುತ್ತಿರುವುದರಿಂದ ಶಾಲೆಯ ದಾಖಲಾತಿ ಪ್ರಮಾಣ ಹೆಚ್ಚಾಗಲಿದೆ ಎಂದರು.
ಜಿಪಂ ಸದಸ್ಯ ಕೆ.ಸಿ ಮಂಜುನಾಥ್ ಮಾತನಾಡಿ ಪ್ರತಿ ಮಗುವಿಗೂ ಉತ್ತಮ ಶಿಕ್ಷಣ ಅಗತ್ಯವಿದೆ. ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕು ಎಂದರು. ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ ನಾರಾಯಣಸ್ವಾಮಿ ಮಾತನಾಡಿದರು. ಈ ವೇಳೆ ಬಿಇಒ ಗಾಯಿತ್ರೀ ದೇವಿ, ಆಲೂರು ದುದ್ದನ ಹಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಪಿಳ್ಳಮ್ಮ, ಸದಸ್ಯ ಮರಿಯಪ್ಪ, ಮುಖಂಡಾದ ಚಂದ್ರೇ ಗೌಡ, ಮಂಜು ನಾಥ್, ನಂಜೇಗೌಡ, ಎ ದೇವರಾಜ್, ಮೀನಾಕ್ಷಿ, ಶಾಲಾ ಅಭಿವೃದ್ಧ ಸಮಿತಿ ಅಧ್ಯಕ್ಷರು, ಸದಸ್ಯರು ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.