ದೇವರ ದಾಸಿಮಯ್ಯರ ಆದರ್ಶ ಪಾಲಿಸಿ: ನಾಗರಾಜ್
ಸಮಾಜದಲ್ಲಿ ಜಾತಿ-ಧರ್ಮ ತಾರತಮ್ಯವಿಲ್ಲದೆ ಸಮಾಜದಲ್ಲಿ ಸಹೋದರತ್ವ ಭಾವನೆಯಿಂದ ಬದುಕಬೇಕು.
Team Udayavani, Apr 7, 2022, 3:47 PM IST
ದೇವನಹಳ್ಳಿ: ಸಮಾಜದಲ್ಲಿನ ಅಸಮಾನತೆಯ ವಿರುದ್ಧ ಕ್ರಾಂತಿಕಾರರನ್ನು ಹುಟ್ಟುಹಾಕಿದ ಬಸವವಾದಿ ಶರಣರಿಗೆ ದೇವರ ದಾಸಿಮಯ್ಯ ವಚನ ಸಾಹಿತ್ಯಗಳು ಸ್ಫೂರ್ತಿಯಾಗಿದ್ದವು ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ತಿಳಿಸಿದರು.
ಪಟ್ಟಣದ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯ ಜಯಂತ್ಯುತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ದೇವರ ದಾಸಿಮಯ್ಯ ಅವರು ಕೂಡ ಜಾತಿ ನಿರ್ಮೂಲನೆಗಾಗಿ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ಜಾತಿ-ಧರ್ಮ ತಾರತಮ್ಯವಿಲ್ಲದೆ ಸಮಾಜದಲ್ಲಿ ಸಹೋದರತ್ವ ಭಾವನೆಯಿಂದ ಬದುಕಬೇಕು.
ದೇವರದಾಸಿಮಯ್ಯ ಶ್ರೇಷ್ಠ ವಚನಕಾರರು. ಮನುಷ್ಯನ ತಪ್ಪುಗಳನ್ನು ತಿದ್ದಲು ದೇವರದಾಸಿಮಯ್ಯ ಅವರ ವಚನಗಳು ಸಹಕಾರಿಯಾಗಲಿದೆ. ವೃತ್ತಿಯಲ್ಲಿ ನೇಕಾರನಾದ ದೇವರ ದಾಸಿಮಯ್ಯ ಅವನು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವ ಭಕ್ತಿ ಮೆರೆದಿರುವುದು ಪುರಾಣಗಳಲ್ಲಿ ಕಾಣಬಹುದಾಗಿದೆ. ದಾಸಿಮಯ್ಯ ಅವರು 176 ವಚನಗಳನ್ನು ವಚನಲೋಕಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅವರ ವಚನಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು
ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಗೋಪಮ್ಮ ಮಾತನಾಡಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ವಚನ ಸಾಹಿತಿ ದೇವರದಾಸಿಮಯ್ಯ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಈ ವೇಳೆಯಲ್ಲಿ ಪುರಸಭಾ ಉಪಾಧ್ಯಕ್ಷೆ ಗೀತಾ ಶ್ರೀಧರ್ ಮೂರ್ತಿ, ನಾಮಿನಿ ಪುರಸಭಾ ಸದಸ್ಯ ಪುನೀತ, ಪುರಸಭಾ ಪರಿಸರ ಅಭಿಯಂತರೆ ನೇತ್ರಾವತಿ, ಆರೋಗ್ಯ ನಿರೀಕ್ಷಕಿ ಶ್ರೀದೇವಿ, ಮುಖಂಡರಾದ ಮಂಜುನಾಥ್, ಶ್ರೀಧರ್ ಮೂರ್ತಿ ಪುರಸಭೆಯ ಬೈರಪ್ಪ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.