ಮಾರುಕಟ್ಟೆ ಸರ್ಕಾರಿ ಶಾಲೆ “ಶತಕ’ ಸಂಭ್ರಮಾಚರಣೆ
Team Udayavani, Feb 18, 2017, 3:52 PM IST
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ, ಬಿಸಿಯೂಟ, ಸಮವಸ್ತ್ರ ಹಲವು ಯೋಜನೆಗಳನ್ನು ರೂಪಿಸಿ ಶಿಕ್ಷಣಕ್ಕೆ ನೆರವು ನೀಡುತ್ತಿದೆ. ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಕಾಣಬೇಕು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ನಗರದ ಮಾರುಕಟ್ಟೆ ಚೌಕ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಶತಮಾ ನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರದ ಸರ್ಕಾರಿ ಪದವಿ ರ್ಪೂ ಕಾಲೇಜಿಗೆ ಈಗ ಸ್ವಂತ ಕಟ್ಟಡಗಳು ನಿರ್ಮಾಣವಾಗಲಿವೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ, ಸಭಾಂಗಣ ಹಾಗೂ ಕೊಠಡಿಗಳು ನಿರ್ಮಾಣವಾಗಿವೆ. ಮಹಿಳಾ ಕಾಲೇಜಿನ ಸ್ಥಾಪನೆಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆ ಮಾಡಬೇಕು ಎಂದು ವಿವರಿಸಿದರು.
ಪುಷ್ಪಾಂಡಜ ಆಶ್ರಮದ ದಿವ್ಯಜಾnನಾನಂದ ಸ್ವಾಮೀಜಿ ಸಾನಿಧ್ಯ ವಹಿಸಿ, ಸರ್ಕಾರಿ ಶಾಲೆ 100 ವರ್ಷಗಳನ್ನು ಪೂರೈಸುವುದು ಎಂದರೆ ಅದು ಸಾಧನೆಯೇ ಸರಿ. ಸರ್ಕಾರಿ ಶಾಲೆಯಲ್ಲಿ ಓದಿದ ಹಲವು ಮಹನೀಯರು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಶಿಕ್ಷಣವಿಲ್ಲದಿದ್ದರೆ ಇಂದು ಶೂನ್ಯ ಎನ್ನುವ ಸ್ಥಿತಿ ಇದ್ದು, ದೇಶದ ಪ್ರಗತಿಗೆ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿವರಿಸಿದರು.
ನಿವೃತ್ತರಿಗೆ ಸನ್ಮಾನ: ಸಮಾರಂಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸ ಲಾಯಿತು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಉಪಾಧ್ಯಕ್ಷೆ ಜಯಲಕ್ಷ್ಮೀ ನಟರಾಜ್, ಜಿಪಂ ಸದಸ್ಯೆ ಪದ್ಮಾವತಿ ಮುನೇಗೌಡ, ನಗರಸಭಾ ಸದಸ್ಯರಾದ ಪಿ.ಸಿ.ಲಕ್ಷ್ಮೀ ನಾರಾಯಣ್, ಟಿ.ಎನ್.ಪ್ರಭುದೇವ್, ಗಾಯತ್ರಿ ಪ್ರಕಾಶ್,
ಎಚ್.ಎಸ್.ಶಿವಶಂಕರ್, ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ತಾಲೂಕು ಕಸಾಪ ಅಧ್ಯಕ್ಷೆ ಪ್ರಮೀಳಾ ಮಹದೇವ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ,ಶಾಲಾ ಶತಮಾನೋತ್ಸವ ವರ್ಷಾಚರಣೆ ಸಮಿತಿಯ ಅಧ್ಯಕ್ಷ ಜಿ.ಸಿ.ಶಿವಕುಮಾರ್,ಉಪಾಧ್ಯಕ್ಷರಾದ ಕೆ.ಕೆ.ವೆಂಕಟೇಶ್, ಶ್ರೀನಿವಾಸಮೂರ್ತಿ, ಸಲಹಾ ಸಮಿತಿಯ ಕೆ.ಮಹಾಲಿಂಗಯ್ಯ,ಎಸ್.ಡಿ.ಎಂ.ಸಿ ಅಧ್ಯಕ್ಷ ನಂಜೇಗೌಡ, ಮುಖ್ಯ ಶಿಕ್ಷಕಿ ಕೆ.ಎಸ್.ಚಂದ್ರಕಲಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.