ಜನರನ್ನೇ ದಿಕ್ಕು ತಪ್ಪಿಸುತ್ತಿರುವ ಸಿಎಂ


Team Udayavani, Jan 15, 2018, 2:10 PM IST

blore-g-2.jpg

ದೇವನಹಳ್ಳಿ: ಕಳೆದ ನಾಲ್ಕೂವರೆ ವರ್ಷ ಗಳಿಂದ ಮಲಗಿದ್ದ ಸರ್ಕಾರ ಈಗ ಕುಂಭಕರ್ಣ ನಿದ್ದೆಯಿಂದ ಎದ್ದಿದೆ. ಖಜಾನೆ
ಯಲ್ಲಿ ಹಣ ಇಲ್ಲದಿದ್ದರೂ, ಸಿಎಂ ಸಿದ್ದರಾಮಯ್ಯ ಆಶ್ವಾಸನೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಆರೋಪಿಸಿದರು.

ತಾಲೂಕಿನ ಮದಗಾನಕುಂಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ತಾಲೂಕು ಬಿಜೆಪಿ ವತಿಯಿಂದ 
ಹಮ್ಮಿಕೊಂಡಿದ್ದ ಕರವೇ ತಾಲೂಕು ಅಧ್ಯಕ್ಷ ಗಜೇಂದ್ರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಲ ಮಾಡುವುದರಲ್ಲಿ ರಾಜ್ಯ ನಂ 1 : ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲದೇ ದಿವಾಳಿಯಾಗಿದ್ದರೂ, ಯಾರೂ ಏನೇ ಕೇಳಿದರೂ ಆಶ್ವಾಸನೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜಾವ ಬ್ದಾರಿಯಿಂದ ಜನರನ್ನು ಮರಳು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸಾಲ ಮಾಡುವು ದರಲ್ಲಿ ದೇಶದಲ್ಲೇ ನಂ.1 ಆಗಿದೆ. ಎರಡೂವರೆ ಸಾವಿರ ಕೋಟಿ ರೂ. ಸಾಲ ಮಾಡಿ ಪ್ರತಿಯೊಬ್ಬರ ಮೇಲೆ ಸಾಲದ ಹೊರಿಸಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ 400ಕೋಟಿ ರೂ. ಅನುದಾನ ನೀಡಿದ್ದರು. ಕಾಂಗ್ರೆಸ್‌, ಜೆಡಿಎಸ್‌ ಅನ್ನದೇ ಎಲ್ಲಾ ಕ್ಷೇತ್ರಕ್ಕೂ ಹೆಚ್ಚಿನ ಅನುದಾನ ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಲ್ಲಿ ಹೆಚ್ಚಿನ ಅನುದಾನ ತರಲು ಆಗುವುದಿಲ್ಲ ಎಂದು ಹೇಳಿದರು.

ಮತಕ್ಕೋಸ್ಕರ ದೇಶ ಮಾರಾಟ: ದೇಶದ ಒಳಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಉತ್ತಮ ಆಡಳಿತ ನೀಡುವ ಸರ್ಕಾರ ಬೇಕು. ದೇಶದಲ್ಲಿ ಅಕ್ರಮವಾಗಿ ಸುಮಾರು ಮೂರು ಕೋಟಿಗೂ ಹೆಚ್ಚು ಬಾಂಗ್ಲಾ ದೇಶದ ಜನರು ವಾಸವಾ ಗಿದ್ದಾರೆ. ಕರ್ನಾಟಕ ರಾಜ್ಯದಲ್ಲೂ ಕೆಲವು ಪ್ರದೇಶಗಳಲ್ಲಿ ಬಾಂಗ್ಲಾದೇಶದ ಜನರು ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿದ್ದಾಗ ಬಾಂಗ್ಲಾ ಪ್ರಜೆಗಳು ದೇಶಕ್ಕೆ ನುಸುಳಿದ್ದಾರೆ. ಕಾಂಗ್ರೆಸ್‌ ಕೇವಲ ಮತಕ್ಕೋಸ್ಕರ ದೇಶ ಮಾರಾಟ ಮಾಡಲು ಸಿದ್ಧರಿದ್ದಾರೆಂದು ದೂರಿದರು.

ನೂತನವಾಗಿ ಸೇರ್ಪಡೆಯಾಗಿರುವ ಯುವಕರು ಪ್ರತಿ ಬೂತ್‌ನಲ್ಲಿ ಪಕ್ಷ ಸಂಘಟಿಸಿ ಶಾಸಕರನ್ನು ಗೆಲ್ಲಿಸಿಕೊಳ್ಳುವುದರ ಮೂಲಕ ಮತ್ತೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ. ಪ್ರಧಾನಿ ನರೇಂದ್ರ ಮೋದಿ ಉತ್ತಮ ಜನಪ್ರಿಯ ಕಾರ್ಯಕ್ರಮ ಮಾಡುತ್ತಿದಾರೆ. ಪ್ರತಿ ಮನೆ ಮನೆಗೆ ತಿಳಿಸುವ ಕಾರ್ಯ ಆಗಬೇಕು. ಚುನಾವಣೆ ಎಂಬ ಯುದ್ಧಕ್ಕೆ ಸೈನಿಕರಂತೆ ಸಿದ್ಧರಾಗಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೇಶದ್ರೋಹಿ ಸಂಘಟನೆಗಳನ್ನು ಓಲೈಸಲು ದೇಶದ ಸಂಸ್ಕೃತಿಯ ಪ್ರತೀಕವಾಗಿರುವ ಆರ್‌
ಎಸ್‌ಎಸ್‌ ಸಂಘ ಪರಿವಾರ ಸಂಘಟನೆಗಳ ಕಾರ್ಯಕರ್ತರನ್ನು ಉಗ್ರಗಾಮಿಗಳು ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಕೇವಲ ಭಾಗ್ಯಗಳ ಸರ್ಕಾರವಾಗಿದೆ. ಕಳೆದ ನಾಲ್ಕೂವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡುವಲ್ಲಿ ಸರ್ಕಾರ ವಿಫ‌ಲವಾಗಿದೆ ಎಂದು ಕಿಡಿಕಾರಿದರು.

ನೀತಿ ನಿರೂಪಣೆ ರಾಜಕೀಯ ವಿಶ್ಲೇಷಣೆ ಪ್ರಕೋಷ್ಠ ಸಂಚಾಲಕ ಡಿ.ಆರ್‌.ನಾರಾಯಣ ಸ್ವಾಮಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಯುವಕರು ಜನರಿಗೆ ತಿಳಿಸಿಕೊಡಬೇಕು. ಹೆಚ್ಚಿನ ಯುವಕರು ಪಕ್ಷಕ್ಕೆ ಸೇರ್ಪಡೆ ಯಾಗುತ್ತಿರುವುದರಿಂದ ಆನೆ ಬಲ ಬರುತ್ತಿದೆ.  ರಾಜ್ಯ ಸರ್ಕಾರ ಹಲವಾರು ಯೋಜನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳಿಗೆ ತಮ್ಮ ಫೋಟೋ ಹಾಕಿಸಿಕೊಂಡು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಹಣ ಲೂಟಿ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್‌.ಎಂ.ರವಿಕುಮಾರ್‌ ಮಾತ ನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಧರ್ಮ ಮತ್ತು ಜಾತಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರ ಹಣ ಲೂಟಿ ಮಾಡುತ್ತಿದೆ. ಅರೆಬರೆ ಕಾಮಗಾರಿಗಳನ್ನು ಉದ್ಘಾಟಿಸಿ ಕಮೀಷನ್‌ ಆಸೆಗಾಗಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಸಿ.ನಾಗರಾಜ ಗೌಡ, ಪ್ರಧಾನ ಕಾರ್ಯದರ್ಶಿ ಸೊಣ್ಣೇಗೌಡ, ರಾಜ್ಯ ಪರಿಷತ್‌ ಸದಸ್ಯ ದೇಸು ನಾಗರಾಜ್‌, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎನ್‌.ರಾಜಗೋಪಾಲ್‌, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಅಗ್ರಹಾರ ರಾಜಣ್ಣ, ಉಪಾಧ್ಯಕ್ಷ ಜಿ.ಎನ್‌.ಗೋಪಾಲ್‌,
ಜಿಲ್ಲಾ ಮಾಧ್ಯಮ ಪ್ರಮುಖ್‌ ಎಸ್‌.ರಮೇಶ್‌ ಕುಮಾರ್‌, ಟೌನ್‌ ಬಿಜೆಪಿ ಅಧ್ಯಕ್ಷ ನೀಲೇರಿ ಮಂಜುನಾಥ್‌, ಯುವ ಮೋರ್ಚಾ ಅಧ್ಯಕ್ಷ ಆನಂದಗೌಡ, ಉಪಾಧ್ಯಕ್ಷ ಸತೀಶ್‌ ಗೋಖರೆ, ಪ್ರಧಾನ ಕಾರ್ಯದರ್ಶಿ ಡಿ.ಆರ್‌. ಬಾಲರಾಜ್‌, ಮುಖಂಡ ಜಿ.ಮುನಿಯಪ್ಪ, ಮಂಜುನಾಥಗೌಡ, ಮಂಜುನಾಥ್‌, ಮಾಚಪ್ಪ, ರಾಧಾಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.