ಪೊಲೀಸ್‌ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ

Team Udayavani, Oct 22, 2019, 3:00 AM IST

police-kar

ದೇವನಹಳ್ಳಿ: ದೇಶದ ಗಡಿ ಕಾಯುವ ಯೋಧ‌ರಂತೆ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ರಕ್ಷಣೆ ಮಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾದದ್ದು. ಪೊಲೀಸರ ಶ್ರಮ ಅವಿರತವಾಗಿದ್ದು, ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿಎನ್‌ ರವೀಂದ್ರ ಹೇಳಿದರು.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಬ್ಯಾಡರಹಳ್ಳಿಯಲ್ಲಿರುವ ಪೋಲೀಸ್‌ ಕವಾಯಿತು ಮೈದಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ನಗರ ಜಿಲ್ಲೆಯ ವತಿಯಿಂದ ಪೊಲೀಸ್‌ ಸಂಸ್ಮರಣೆ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಪುತ್ಥಳಿಗೆ ಗೌರವ ಸಮರ್ಪಿಸಿ ಮಾತನಾಡಿದರು.

ಪೊಲೀಸ್‌ ಮತ್ತು ಖಾಕಿ ಎಂದರೆ ಎಲ್ಲರಲ್ಲೂ ಸುರಕ್ಷತೆಯ ಮನೋಭಾವ ಮೂಡಬೇಕು. ಪೊಲೀಸರು ಶತ್ರುಗಳ ವಿರುದ್ಧ ನಿಂತು ಹೋರಾಡಿ ಪ್ರಾಣ ಕಳೆದುಕೊಳ್ಳುತ್ತಾರೆ. ಪೊಲೀಸ್‌ ಕಾರ್ಯಕ್ಕಿಂತ ಶ್ರೇಷ್ಠ ಸೇವೆ ಮತ್ತೂಂದಿಲ್ಲ. ಗಡಿಯಲ್ಲಿ ದೇಶ ಕಾಯುವ ಸೈನಿಕರು ಹೇಗೋ, ಅದೇ ರೀತಿ ಸಮಾಜದ ಒಳಗೆ ದಿನದ 24 ಗಂಟೆಯೂ ಜನಸಾಮಾನ್ಯರ ರಕ್ಷಣೆಯಲ್ಲಿ ಕಾರ್ಯನಿರತವಾಗಿರುವ ಪೊಲೀಸರು ಕೂಡ, ಸಮಾಜ ರಕ್ಷಿಸುವ ಸೈನಿಕರಾಗಿದ್ದಾರೆ.

ಸಮಾಜದಲ್ಲಿ ಜನತೆ ನೆಮ್ಮದಿಯಿಂದ ನಿದ್ರಿಸುತ್ತಾರೆ ಎಂದರೆ ಅದಕ್ಕೆ ಪೊಲೀಸರ ಶ್ರಮ ಕಾರಣ ಎಂದು ಪೊಲೀಸರ ಕಾರ್ಯವನ್ನು ಶ್ಲಾ ಸಿದರು. ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮಾತನಾಡಿ, ಪೊಲೀಸರು ಮತ್ತು ಖಾಕಿ ದರ್ಪದ ಸಂಕೇತವಾಗಬಾರದು. ಅದು ಬದ್ಧತೆ ಮತ್ತು ಭದ್ರತೆಯ ಸಂಕೇತವಾಗಬೇಕು. ಪ್ರತಿಯೊಬ್ಬರೂ ಶಾಂತಿಯಿಂದ ನೆಲಸಲು ಪೋಲೀಸರ ಪಾತ್ರ ಮುಖ್ಯವಾಗಿದೆ. ನಾಗರೀಕ ಸುರಕ್ಷತೆ ಮತ್ತು ಸಂರಕ್ಷಣೆಯಲ್ಲಿ ಪೋಲೀಸರ ಪಾತ್ರ ಪ್ರಮುಖವಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ರವಿ ಚೆನ್ನಣ್ಣವರ್‌ ಮಾತನಾಡಿ, ಕರ್ತವ್ಯದ ವೇಳೆ ಮೃತರಾದ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 292 ಮಂದಿ ಪೊಲೀಸರು ದೇಶದಲ್ಲಿ ಮೃತಪಟ್ಟಿದ್ದರೆ, ರಾಜ್ಯದಲ್ಲಿ 12 ಮಂದಿ ತಮ್ಮ ಪ್ರಾಣ ಅರ್ಪಿಸಿದ್ದಾರೆ. ನಾವು ಕಾನೂನು ತಿಳಿಯದಿದ್ದರೆ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ ಎಂದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐಜಿ ಶರತ್‌ ಚಂದ್ರ, ಅಡಿಷನಲ್‌ ಎಸ್‌ಪಿ ಸಜಿತ್‌, ದೊಡ್ಡಬಳ್ಳಾಪುರ ಇನ್ಸ್‌ಪೆಕ್ಟರ್‌ ರಾಘವ ಗೌಡ, ಮತ್ತಿತರರು ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.