ಪ್ರತ್ಯೇಕ ಲಿಂಗಾಯುತ ಧರ್ಮಕ್ಕೆ ವಿರೋಧವಿದೆ

Team Udayavani, Jul 30, 2017, 3:36 PM IST

203.jpg

ನೆಲಮಂಗಲ: ವೀರಶೈವ ಸಮಾಜ ಏಕತೆ ಹಾಗೂ ಅಖಂಡತೆಯಿಂದ ಕೂಡಿರಬೇಕು. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ತಮ್ಮ ವಿರೋಧವಿದೆ ಎಂದು ಹೊನ್ನಮ್ಮಗವಿ ಮಠದ ಮಠಾಧ್ಯಕ್ಷ ಶ್ರೀರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಸೋಂಪುರ ಹೋಬಳಿಯ ಶಿವಗಂಗೆಯ ಹೊನ್ನಮ್ಮಗವಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜ ಎರಡು ಒಂದೇ. ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ಭಾವನೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದ್ದರೆ ನೇರವಾಗಿ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ಎಂದು ಶಿಫಾರಸ್ಸು ಮಾಡಲಿ, ಇದರಲ್ಲಿ ಏನಾದರೂ ಗೊಂದಲವಿದ್ದರೆ ಸುಮ್ಮನಿರಲಿ, ಸುಖಾ ಸುಮ್ಮನೆ ಸಮಾಜ ಒಡೆಯುವ ಕೆಲಸ ಮಾಡಬಾರದು ಎಂದು ಹೇಳಿದರು.

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಗೂ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿಯ ಹೆಸರು ನಾಮಕರಣ ಮಾಡಿದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಖೀಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ ಮಾಡಿ, ಮಹಾಸಭಾ ನೀಡಿದ ಮನವಿಯಂತೆ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕು ಎಂಬ ಮನವಿಗೆ ಸಕರಾತ್ಮಕವಾಗಿ ಸ್ಪಂದನೆ ಮಾಡಿದ್ದಾರೆ ಎಂದು ವಿವರಿಸಿದರು.

ಒಂದು ಜಾತಿಯನ್ನು ಧರ್ಮ ಎಂದು ಘೋಷಿಸಿದರೆ ಉಳಿದ ಜಾತಿಗಳೂ ಅದನ್ನೇ ಕೇಳುತ್ತವೆ. ಆದ್ದರಿಂದ ಇದು ಸಾಧ್ಯವಿಲ್ಲ. ರಾಜಕೀಯ ಉದ್ದೇಶಕ್ಕೆ ಲಿಂಗಾಯಿತ ಎನ್ನುವುದನ್ನು ಧರ್ಮ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಮೇಲ್ನೊಟ್ಟಕ್ಕೆ ಕಂಡುಬರುತ್ತಿದೆ. ಮಾತೇ ಮಹಾದೇವಿಯವರು ವೀರಶೈವ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ.

ಅವರು ಲಿಂಗದೇವ ಎಂಬ ಅಂಕಿತನಾಮ ಇಟ್ಟುಕೊಳ್ಳುವುದರ ಮೂಲಕ ಕೂಡಲಸಂಗಮ ದೇವಾ ಎಂಬ ಅಂಕಿತನಾಮವನ್ನು ತೆಗೆದುಹಾಕಿದರೋ ಅವತ್ತೇ ನೈತಿಕತೆಯಿಂದ ದೂರ ಉಳಿದ್ದಿದ್ದಾರೆ. ಬಸವಣ್ಣನವರ ಬಗ್ಗೆ ಮಾತನಾಡುವ ಅರ್ಹತೆ ಅವರಿಗಿಲ್ಲ ಎಂದು ಹೇಳಿದರು. ಇದನ್ನು ರಾಜ್ಯದ ಜನತೆ ಗಮನಿಸಬೇಕಿದೆ ಕೇವಲ ಸ್ವಾರ್ಥಕೊಸ್ಕರ ಇವರು ಹೆಚ್ಚು ಲಿಂಗಾಯತರು ಎಂದು ಹೇಳಿಕೊಳ್ಳುವ ವ್ಯವಸ್ಥೆ ಇದೆ.

ಉತ್ತರ ಕರ್ನಾಟಕದ ಕೆಲವು ಸ್ವಾಮೀಜಿಗಳು ಇದಕ್ಕೆ ಬೆಂಬಲ ನೀಡುತ್ತಿದ್ದು, ಸಮಾಜದ ಅಖಂಡತೆಯನ್ನು ತೆಗೆಯುವ ಮೂಲಕ ಸಮಾಜದ ಒಡಕಿದೆ ಕಾರಣವಾಗುತ್ತಿದ್ದಾರೆ. ಉತ್ತರ ಕರ್ನಾಟಕದ ಕೆಲವು ಮಠಗಳು ಹಾಗೂ ಬೇರೆ ಜಾತಿಯಿಂದ ಸ್ವಾಮೀಜಿಯವರು ಬಸವ ತತ್ವವನ್ನು ಒಪ್ಪಿಕೊಂಡು ಲಿಂಗಧಾರಣೆ ಮಾಡಿಕೊಂಡು ಬಂದಿರುವ ಸ್ವಾಮೀಜಿಯವರ ಒತ್ತಾಯ ಹೆಚ್ಚಾಗಿದೆ. ಮಠಗಳ ಪರಂಪರೆಯ ಅರಿವು ತಿಳಿದಿಲ್ಲ ಅಂತಕಾಣುತ್ತಿದೆ ಅದಕ್ಕೆ ಈ ರೀತಿಯ ಒತ್ತಡಗಳು ಆಗುತ್ತಿವೆ ಎಂದರು.

ವೀರಶೈವ ಲಿಂಗಾಯತ ಎರಡೂ ಒಂದೇ ಆಗಿದೆ. ಅಖೀಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ 1904ರಲ್ಲಿ ಸಮಾಜದ ಅಭಿವೃದ್ಧಿಗೆ ಹುಟ್ಟಿಕೊಂಡ ಸಂಸ್ಥೆ, ನೂರು ವರ್ಷಕ್ಕಿಂತ ಹೆಚ್ಚು ಕೆಲಸ ಮಾಡಿದ ಸಂದರ್ಭದಲ್ಲಿ ಅನೇಕ ಮಹನೀಯರು ಅದರ ಅಧ್ಯಕ್ಷರಾಗಿದ್ದಾರೆ. ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ನಾಲ್ಕೈದು ವರ್ಷಗಳ ಹಿಂದೆ ಸುತ್ತೂರು ಮಠದಲ್ಲಿ ಅಖೀಲ ಭಾರತೀಯ ವೀರಶೈವ ಮಹಾಸಭಾದ ಅಧಿವೇಶನವನ್ನು ಎರಡು ದಿನಗಳ ಮಾಡುವುದರ ಮೂಲಕ ಸುತ್ತೂರು ಸಿರಿಗೆರೆ ಸಿದ್ಧಗಂಗೆ ಚಿತ್ರದುರ್ಗದ ಎಲ್ಲಾ ಪಂಚಪೀಠಗಳ ಸ್ವಾಮೀಜಿಯವರು ಪಾಲ್ಗೊಂಡು ತಾವೆಲ್ಲಾ ಒಂದು ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದೆ, ತಾವೆಲ್ಲಾ ಮಹಾಸಭಾವನ್ನು ಒಪ್ಪಿಕೊಂಡು ಅದಕ್ಕೆ ಪೋ›ತ್ಸಾಹ ನೀಡುತ್ತಿರುವ ಸಂದರ್ಭದಲ್ಲಿ ಮಹಾಸಭಾ ತೆಗೆದುಕೊಂಡ ತೀರ್ಮಾನಕ್ಕೆ ತಾವೆಲ್ಲ ಬದ್ಧರಾಗಬೇಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.