ಈ ಬಾರಿ ಬಿಜೆಪಿ ಕಡೆಗೆ ಒಲವು
Team Udayavani, Mar 1, 2018, 2:24 PM IST
ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿಯ ಗುಂಡಮಗೆರೆ ಹೊಸಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ತಾಲೂಕು ಬಿಜೆಪಿ ವತಿಯಿಂದ ಬೂತ್ ಮಟ್ಟದ ಸಶಕ್ತೀಕರಣದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಪಂಚಾಯಿತಿ ವಾರು ಸಭೆಗಳನ್ನು ನಡೆಸಿದ್ದು ಕಾರ್ಯಕರ್ತರು ಸಕ್ರಿಯವಾಗಿ ಸಂಘಟನೆ ಮಾಡುತ್ತಿದ್ದಾರೆ.
ನಗರ ಸೇರಿದಂತೆ ತಾಲೂಕಿನ ಮತದಾರರಲ್ಲಿ ಈ ಬಾರಿ ಬಿಜೆಪಿ ಕಡೆಗೆ ಒಲವು ಹೆಚ್ಚಾಗಿದೆ. ಅಭ್ಯರ್ಥಿ ವಿಚಾರವಾಗಿ ಬಿಜೆಪಿಯಲ್ಲಿ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದ್ದು, ಇದಕ್ಕೆ ಮತದಾರರು ಬೆಲೆ ನೀಡುವುದಿಲ್ಲ. ಕಾರ್ಯಕರ್ತರು ಪಕ್ಷ ಸಂಘಟನೆ ಕಡೆ ಗಮನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಎನ್ ನಾಗರಾಜು, ಜಿಲ್ಲಾ ವಕ್ತಾರ ಅಶ್ವತ್ಥ ನಾರಾಯಣಸ್ವಾಮಿ ಸೇರಿದಂತೆ ಬೂತ್ ಮಟ್ಟದ ಪದಾಧಿಕಾರಿಗಳು ಸಾಸಲು ಹೋಬಳಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.