ಗ್ರಾಪಂ ಮೇಲರ್ಜೆಗೇರಿಸಲು ಗ್ರಾಮಸ್ಥರ ಪಟ್ಟು
ಜಿಪಂ, ತಾಪಂ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ; ಆಡಳಿತಾಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ
Team Udayavani, Sep 24, 2021, 2:42 PM IST
ನೆಲಮಂಗಲ: ತಾಲೂಕಿನ ತ್ಯಾಮಗೊಂಡ್ಲು ಗ್ರಾಪಂ ಪಟ್ಟಣ ಪಂಚಾಯ್ತಿ ಆಗುವ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ತನದಿಂದ ಪಪಂ ಆಗದೇ ಗ್ರಾಪಂ ಆಗಿ ಉಳಿದಿರುವುದು ಒಂದೆಡೆ ಜನರಲ್ಲಿ ಬೇಸರ ಮೂಡಿಸಿದರೆ, ಮತ್ತೊಂದೆಡೆ ಅಭಿವೃದ್ಧಿಯಾಗದೆ ಉಳಿದಿರಲು ಅಧಿಕಾರಿಗಳ ಕಾರ್ಯಕ್ಷಮತೆಯನ್ನು ತೋರುತ್ತಿದೆ.
ತಾಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮಾಡುವಂತೆ ಸ್ಥಳೀಯ ಜನಪ್ರತಿನಿಧಿಗಳು 2016ರಿಂದಲೇ ಜಿಲ್ಲಾಧಿ ಕಾರಿಗೆ ಅರ್ಜಿ ಸಲ್ಲಿಸಿದ್ದರು. ಕಳೆದ 7ವರ್ಷದಿಂದ ಯಾವುದೇ ಬೆಳವಣಿಗೆಗಳು ಕಂಡು ಬಂದಿರಲಿಲ್ಲ.
ಗ್ರಾಪಂ ಚುನಾವಣೆಯನ್ನು ಬಹಿಷ್ಕಾರ ಮಾಡಿದ ಕಾರಣ ಅಧಿಕಾರಿ ಪಂಚಾಯ್ತಿಯನ್ನು ಪುರಸಭೆಯನ್ನಾಗಿಸುವತ್ತ ಗಮನಹರಿಸಿ ಒಂದು ವರ್ಷ ವಾದರೂ ಕನಸು ಕನಸಾಗಿಯೇ ಉಳಿಯುತ್ತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಹಿಂಬಡ್ತಿ ಪಟ್ಟಣ: ತಾಲೂಕಿನ ತ್ಯಾಮಗೊಂಡ್ಲು ಪಟ್ಟಣವೂ 1920ರಿಂದ 1986ರವರೆಗೂ ಪುರಸಭೆಯಾಗಿ ನಂತರ 1986ರಿಂದ 1993 ರವರೆಗೂ ಪಪಂ ಆಗಿ ಅಭಿವೃದ್ಧಿಯತ್ತ ಸಾಗುತ್ತಿದ್ದ ಪಟ್ಟಣವಾಗಿತ್ತು. ಆದರೆ, ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು ತಮ್ಮ ಸ್ವಾರ್ಥ ಉದ್ದೇಶಕ್ಕೆ ಪಟ್ಟಣ ಪಂಚಾಯ್ತಿಯಿಂದ ಗ್ರಾಪಂಗೆ ಹಿಂಬಡ್ತಿ ಪಡೆಯುವಂತೆ ಮಾಡಿದ್ದಾರೆ. ಆದರೆ, 2021ರಲ್ಲಿ ಗ್ರಾಮ ಪಂಚಾಯ್ತಿಯನ್ನು ಪಪಂಗೆ ಮೇಲ್ದರ್ಜೆಗೆರಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ:ಕೋರ್ಟ್ ಅವರಣದಲ್ಲೇ ಗ್ಯಾಂಗ್ ವಾರ್: ಶೂಟ್ಔಟ್ ನಲ್ಲಿ ನಾಲ್ವರು ಸಾವು, ವಕೀಲರಂತೆ ಬಂದ ಗ್ಯಾಂಗ್
ಚುನಾವಣೆ ಬಹಿಷ್ಕಾರ: ತ್ಯಾಮಗೊಂಡ್ಲು ಗ್ರಾಪಂಗೆ 2020 ಡಿಸೆಂಬರ್ ಮತ್ತು 2021ಮಾರ್ಚ್ ತಿಂಗಳಲ್ಲಿ ಘೋಷಣೆಯಾದ ಗ್ರಾಪಂ ಚುನಾವಣೆ ಯಲ್ಲಿ ಒಂದೇ ಒಂದು ನಾಮಪತ್ರವನ್ನು ಸಲ್ಲಿಸದೇ ತ್ಯಾಮಗೊಂಡ್ಲು ಜನತೆ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದರು.ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮಾಡುವವರೆಗೂ ಯಾವುದೇ ಚುನಾವಣೆಗೂ ಯಾರೂ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಗ್ರಾಮದ ಮುಖಂಡರು ನಿರ್ಧರಿಸಿ ಸರ್ಕಾರಕ್ಕೆ ತಮ್ಮ ಬೇಡಿಕೆ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಅನುಕೂಲವಾಗಿಲ್ಲ.
ಸೌಕರ್ಯಗಳ ಕೊರತೆ: ತ್ಯಾಮಗೊಂಡ್ಲು ನೆಲಮಂಗಲ ತಾಲೂಕಿನಲ್ಲಿಯೇ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೋಬಳಿ ಕೇಂದ್ರ. ಆರ್ಥಿಕ ವಾಗಿ ನಾನಾ ಚಟುವಟಿಕೆಗಳು ನಡೆಯುತ್ತಿರುವ ಕಾರಣದಿಂದ ಮತ್ತು ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಗ್ರಾಪಂ ಅನುದಾನ ಸಾಲುತ್ತಿಲ್ಲ. ಆದ್ದರಿಂದ, ಪಟ್ಟಣ ಪಂಚಾಯ್ತಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಅಧಿಕಾರಿಗಳು ಸ್ಥಳೀಯ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಆಡಳಿತಾಧಿಕಾರಿ ನೇಮಕ: ಗ್ರಾಮ ಪಂಚಾಯ್ತಿಗೆ ಆಡಳಿತಾಧಿಕಾರಿ ನೇಮಕವಾಗಿ ಒಂದು ವರ್ಷ ಕಳೆದರೂ, ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ, ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿ ಸುವಂತೆ ಕೋರ್ಟ್‌ನಲ್ಲಿ ಅರ್ಜಿ ಹಾಕಿ ಸರ್ಕಾರಕ್ಕೆ ದಾಖಲೆ ಕೇಳಿದರೂ, ಸರಿಯಾದ ಸಮಯಕ್ಕೆ ದಾಖಲೆ ನೀಡದೇ ಅಧಿಕಾರಿಗಳು ದುರುದ್ದೇಶದಿಂದ ವಿಳಂಬ ನೀತಿಯನ್ನು ಅನುಸರಿಸುತಿದ್ದಾರೆ. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯ ಚುನಾವಣೆ ಅಷ್ಟರಲ್ಲಿ ಯಾವುದೇ ಬೆಳವಣಿಗೆಗಳು ಕಾಣದಿದ್ದರೇ, ಆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಚರ್ಚಿಸುತ್ತಿರುವುದು ಕಂಡು ಬಂದಿದೆ.
ಕಲಾಪದಲ್ಲಿ ಚರ್ಚಿಸುವೆ: ಶಾಸಕ
ತ್ಯಾಮಗೊಂಡ್ಲು ಪಟ್ಟಣವೂ ಕೈಗಾರಿಕಾ ಪ್ರದೇಶದೊಂದಿಗೆ ಹೆಚ್ಚು ಜನಸಂಖ್ಯೆ ಒಳಗೊಂಡಿದ್ದು, ಅಗತ್ಯ ಸೌಲಭ್ಯ ಕಲ್ಪಿಸಲು ಗ್ರಾಮ ಪಂಚಾಯ್ತಿ ಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಬೇಕೆಂದು ಕಳೆದ ಬಾರಿಯೇ ಜಿಲ್ಲಾಧಿಕಾರಿ ಜತೆಯಲ್ಲಿ ಮಾತನಾಡಿದ್ದೇನೆ. ಈ ವಿಚಾರವಾಗಿ ಕಲಾಪದಲ್ಲಿ ಸರ್ಕಾರದ ಗಮನಕ್ಕೆ ತಂದು ಅದಷ್ಟು ಬೇಗ ಜನರ ಕನಸ್ಸು ನನಸಾಗುವಂತೆ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.
ತ್ಯಾಮಗೊಂಡ್ಲು ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿ ಯಾಗಿ ಮೇಲ್ದರ್ಜೆಗೇ ರಿಸುವ ವಿಚಾರವಾಗಿ ಡೀಸಿ ಆದೇಶದಂತೆ ದಾಖಲೆ ಸಲ್ಲಿಸಿ ಶಿಫಾರಸು ಮಾಡಿದ್ದೇನೆ. ಈಗಾಗಲೇ ಡೀಸಿ ಸರ್ಕಾರಕ್ಕೆ ದಾಖಲೆ ನೀಡಿ ಶಿಫಾರಸು ಮಾಡಿದ್ದಾರೆ.
– ರವಿಕುಮಾರ್, ಬೆಂ.ಗ್ರಾ ಜಿಪಂ ಸಿಇಒ
-ಕೊಟ್ರೇಶ್.ಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.