ಪರಿಷತ್‌ ಚುನಾವಣೆಗೆ ಟಿಕೆಟ್‌ ಗೊಂದಲ


Team Udayavani, Nov 18, 2021, 6:01 PM IST

Tickets for council elections

ದೇವನಹಳ್ಳಿ: ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ. ಮೂರು ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ತೀವ್ರ ಕಸರತ್ತು ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಚುನಾವಣೆಗೆ ಅಖಾಡ ಸಿದ್ಧವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳು, ರಾಮನಗರ ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳು ಒಟ್ಟು 8ಕ್ಷೇತ್ರ. ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರಾಮನಗರ ಕೇಂದ್ರವಾಗಿದ್ದು, ಜೆಡಿಎಸ್‌, ಕಾಂಗ್ರೆಸ್‌ ಮುಖಂಡರ ಪ್ರತಿಷ್ಠೆಯ ಕಣವಾಗಿದೆ. ಮತದಾರರ ಸಂಖ್ಯೆ ಎಷ್ಟು? ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆ ಸೇರಿ ಒಟ್ಟು 3898 ಮತದಾರರಿದ್ದಾರೆ.

ಇದರಲ್ಲಿ 1862 ಪುರುಷ ಮತದಾರರು, ಹಾಗೂ 2036 ಮಹಿಳಾ ಮತದಾರರು ಇದ್ದಾರೆ. ಬೆಂಗಳೂರು ಗ್ರಾಮಾಂತರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿವೆ. ಕೈ-ದಳ ಪೈಪೋಟಿ: 2015ರಲ್ಲಿ ನಡೆದ ಚುನಾವಣೆ ಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ರವಿ, ಜೆಡಿಎಸ್‌ ಅಭ್ಯರ್ಥಿ ಇ.ಕೃಷ್ಣಪ್ಪ ವಿರುದ್ಧ 378ಮತಗಳ ಅಂತರ ದಿಂದ ಗೆಲುವು ಸಾಧಿಸಿದ್ದರು. ಈ ಭಾರಿ ಪುನ: ಇವೆರಡು ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಹಾಗಾಗಿ ಫ‌ಲಿತಾಂಶ ಹೇಗೆ ತಿರುಗುವುದು ಎಂಬ ಕುತೂಹಲ ಮೂಡಿಸಿದೆ. ಕಳೆದ ಭಾರಿ ಚುನಾವಣೆ ಯಲ್ಲಿ ಎಸ್‌.ರವಿ 2267 ಮತಗಳು, ಬಿಜೆಪಿಯ ಹನುಮಂತೇಗೌಡ 170, ಜೆಡಿಎಸ್‌ನ ಇ.ಕೃಷ್ಣಪ್ಪ 1889 ಮತಗಳನ್ನು ಪಡೆದಿದ್ದರು.

ಟಿಕೆಟ್‌ ಗೊಂದಲ: ವಿಧಾನಪರಿಷತ್‌ ಚುನಾವಣೆ ಯಲ್ಲಿ ಕೆಲ ಹೆಸರುಗಳು ಕೇಳಿಬರುತ್ತಿದ್ದು ಕಾಂಗ್ರೆಸ್‌ ಅಭ್ಯರ್ಥಿ ಒಬ್ಬರನ್ನು ಬಿಟ್ಟು ಉಳಿದ ಪಕ್ಷಗಳಲ್ಲಿ ಗೊಂದಲ ಗಳಿವೆ. ಈ ಹಿಂದೆ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಗೆಲುವು ಪಡೆದಿದ್ದ ಎಸ್‌.ರವಿಗೆ ಟಿಕೆಟ್‌ ಅಂತಿಮವಾಗುವ ಸಾಧ್ಯತೆಗಳಿವೆ. ಕಳೆದ ಚುನಾವಣೆ ಯಲ್ಲಿ ಜೆಡಿಎಸ್‌ ನಿಂದ ಇ.ಕೃಷ್ಣಪ್ಪ, ಬಿಜೆಪಿಯ ಹನುಮಂತೇ ಗೌಡ ಈ ಭಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ.

ದಳದಿಂದ ರಮೇಶ್‌ ? ಬಿಜೆಪಿಯಿಂದ ರುದ್ರೇಶ್‌? ಎರಡು ಪಕ್ಷಗಳಿಂದ ಹೊಸಮುಖಗಳು ಚುನಾವಣಾ ಕಣಕ್ಕೆ ಪ್ರವೇಶ ಪಡೆಯುತ್ತಿದ್ದು, ಜೆಡಿಎಸ್‌ನಿಂದ ಹಾಲಿ ವಿಧಾನಪರಿಷತ್‌ ಸದಸ್ಯ ರಮೇಶ್‌ಗೌಡ ಹೆಸರು ಕೇಳಿಬರುತ್ತಿದೆ. ನಾಮಪತ್ರ ಸಲ್ಲಿಸಲು ರಮೇಶ್‌ಗೌಡ ಬಂದಿದ್ದರು. ಸಮಯ ಮುಗಿದಿದ್ದರಿಂದ ವಾಪಸ್‌ ತೆರ ಳಿದ್ದಾರೆ. ಬಿಜೆಪಿಯಿಂದ ರಾಮನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರುದ್ರೇಶ್‌ ಹೆಸರು ಕೇಳಿಬರುತ್ತಿದೆ.

ಈ ಮದ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂ ದಲೂ ಅಭ್ಯರ್ಥಿ ಪ್ರವೇಶಕ್ಕೆ ಸಾಧ್ಯತೆಯಿದೆ. ಜೆಡಿಎಸ್‌ ನಲ್ಲಿ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿಯವರು ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ. ಬೆಂಗ ಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿಗಳಾದ ಎಂಟಿಬಿ ನಾಗರಾಜ್‌, ಡಾ. ಅಶ್ವತ್ಥ ನಾರಾಯಣ್‌ ಜೊತೆಗೆ ಕಂದಾಯ ಸಚಿವ ಆರ್‌.ಅಶೋಕ್‌ ಸಹ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸಲಿದ್ದಾರೆ.

ಕೇಸರಿ ಕೋಟೆಗಿಲ್ಲ ನೆಲೆ: ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರದಲ್ಲಿ ರಾಮನಗರ ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ಮೂರು ಜೆಡಿಎಸ್‌ ಶಾಸಕರು, ಒಬ್ಬರು ಕಾಂಗ್ರೆಸ್‌ ಶಾಸಕರು. ಬೆಂಗಳೂರು ಗ್ರಾಮಾಂ ತರ ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ದೊಡ್ಡ ಬಳ್ಳಾಪುರದಲ್ಲಿ ಕಾಂಗ್ರೆಸ್‌ ಶಾಸಕರು, ಹೊಸಕೋಟೆ ಯಲ್ಲಿ ಶಾಸಕ ಶರತ್‌ ಬಚ್ಚೇಗೌಡ ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ.

ದೇವನಹಳ್ಳಿ ಮತ್ತು ನೆಲಮಂಗಲದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಬಿಜೆಪಿ ಸರ್ಕಾರ ಇರುವುದರಿಂದ ಸಮರ್ಥ ಅಭ್ಯರ್ಥಿ ಯೊಂದಿಗೆ ಸದಸ್ಯರನ್ನು ಸೆಳೆಯುವ ಪ್ರಯತ್ನ ಸಾಧ್ಯತೆ ಗಳು ಇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರ ಸ್ವಾಮಿ ಆಲಯ ನಡುವೆ ಕಮಲಕ್ಕೆ ಹಿನ್ನೆಡೆಯಾಗುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಮತ್ತು ನಲ್ಲೂರು ಗ್ರಾಮಪಂಚಾಯಿಗಳ ಅವಧಿ ಮುಗಿದಿರು ವುದರಿಂದ ಗ್ರಾಪಂ ಸದಸ್ಯರಿಗೆ ಮತದಾನದ ಹಕ್ಕು ಇಲ್ಲದಂತಾಗಿದೆ. ಜಿಪಂ ಮತ್ತು ತಾಪಂ ಸದಸ್ಯರ ಅವಧಿ ಮುಗಿದಿರುವುದರಿಂದ ಮತದಾನದ ಹಕ್ಕು ಇಲ್ಲದಂತಾಗಿದೆ. ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ಗ್ರಾಪಂ ಚುನಾವಣೆ ನಡೆದಿಲ್ಲ. ಬಿಡದಿ ಪುರಸಭೆ ಚುನಾವಣೆ ಆಗಿಲ್ಲ

ಬೆಂ ಗ್ರಾಮಾಂತರ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 23 ಜಿಪಂ ಸದಸ್ಯರು ಇದ್ದು ಹಾಗೂ ನಾಲ್ಕು ತಾಲೂಕು ಗಳಿಂದ ಒಟ್ಟು 58 ತಾಪಂ ಸದಸ್ಯರ ಬಲವಿದೆ. ಜಿಲ್ಲೆಯಲ್ಲಿ 101 ಗ್ರಾಪಂಗಳು ಬರಲಿವೆ. ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ನಗರ ಸಭೆಗಳು ಹಾಗು ದೇವನಹಳ್ಳಿ ಮತ್ತು ವಿಜಯಪುರ ಪುರಸಭೆಗಳನ್ನು ಹೊಂದಿದೆ.

ಜಿಪಂ ಕ್ಷೇತ್ರ: ತಾಲೂಕುವಾರು ದೇವನಹಳ್ಳಿ ತಾಲೂಕಿನಲ್ಲಿ 5 ಜಿಪಂ ಕ್ಷೇತ್ರಗಳು, ದೊಡ್ಡಬಳ್ಳಾಪುರ-6ಕ್ಷೇತ್ರಗಳು, ಹೊಸಕೋಟೆ-7 ಜಿಪಂ ಕ್ಷೇತ್ರಗಳು, ನೆಲಮಂಗಲ 5ಜಿಪಂ ಕ್ಷೇತ್ರ ಗಳನ್ನು ಹೊಂದಿದೆ. ನಾಲ್ಕು ತಾಲೂಕುಗಳಲ್ಲಿ ತಾಪಂ ಕ್ಷೇತ್ರಗಳು, ದೇವನಹಳ್ಳಿ ತಾಲೂಕು 12 ತಾಪಂ ಕ್ಷೇತ್ರ ಗಳು, ನೆಲಮಂಗಲ ತಾಲೂಕು 12 ತಾಪಂ ಕ್ಷೇತ್ರ ಗಳು, ದೊಡ್ಡಬಳ್ಳಾಪುರ-16 ತಾಪಂ ಕ್ಷೇತ್ರ ಗಳು, ಹೊಸಕೋಟೆ 18 ತಾಪಂ ಕ್ಷೇತ್ರಗಳನ್ನು ಹೊಂದಿವೆ.

ರಾಮನಗರ ವಿವರ

ರಾಮನಗರ ಜಿಲ್ಲೆಯಲ್ಲಿ 126 ಗ್ರಾಪಂಗಳನ್ನು ಹೊಂದಿದೆ. 22 ಜಿಪಂ ಕ್ಷೇತ್ರಗಳಿವೆ. ನಾಲ್ಕು ತಾಲೂಕುಗಳಿಂದ 65 ತಾಪಂ ಕ್ಷೇತ್ರಗಳನ್ನು ಹೊಂದಿದೆ. ರಾಮನಗರ, ಚನ್ನಪಟ್ಟಣ, ಕನಕಪುರ ನಗರ ಸಭೆಗಳು ಹಾಗೂ ಮಾಗಡಿ ಪುರಸಭೆ ಹೊಂದಿದೆ. ನಾಲ್ಕು ತಾಲೂಕುಗಳಲ್ಲಿ ತಾಪಂ ಕ್ಷೇತ್ರ ಗಳ ವಿವರ.

ಮಾಗಡಿ ತಾಲೂಕು15 ತಾಪಂ ಕ್ಷೇತ್ರ ಗಳು, ರಾಮನಗರ ತಾಲೂಕು 12ತಾಪಂ ಕ್ಷೇತ್ರ ಗಳು, ಚನ್ನಪಟ್ಟಣ 15ತಾಪಂ ಕ್ಷೇತ್ರಗಳು, ಕನಕಪುರ 23ತಾಪಂ ಕ್ಷೇತ್ರಗಳನ್ನು ಹೊಂದಿದೆ. ಕಾಂಗ್ರೆಸ್‌ ಜೆಡಿಎಸ್‌ ನಡುವ ತೀವ್ಯ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸುವ ಸಾಧ್ಯತೆಗಳಿವೆ. ಅಭ್ಯರ್ಥಿ ಆಯ್ಕೆ ಅಂತಿಮ ಗೊಳ್ಳಬೇಕಾಗಿದೆ. ಇದುವರೆಗೂ ಯಾರೂ ಸಹ ನಾಮಪತ್ರ ಸಲ್ಲಿಸಿರುವುದಿಲ್ಲ.

  • – ಎಸ್‌.ಮಹೇಶ್‌

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.