ಕೋವಿಡ್‌ ನಿಯಂತ್ರಣಕ್ಕಾಗಿ ಬಿಗಿ ಲಾಕ್‌ಡೌನ್‌


Team Udayavani, Jun 15, 2021, 5:11 PM IST

Tight lockdown,  covid control, udayavani, kannada

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕುಆಡಳಿತ ಹಾಗೂ ಪೊಲೀಸ್‌ ಇಲಾಖೆ ಜೂ.21ರವರೆಗೆಕಠಿಣ ಲಾಕ್‌ಡೌನ್‌ ಜಾರಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದ್ದು, ಇದರೊಂದಿಗೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌ ತಿಳಿಸಿದರು.

ನಗರದ ವಿವಿಧೆಡೆಗಳಲ್ಲಿ ಪೊಲೀಸ್‌ ಚೆಕ್‌ ಪೋಸ್ಟ್‌ಗಳಲ್ಲಿ ನಡೆಯುತ್ತಿದ್ದ ವಾಹನ ತಪಾಸಣೆ ಸ್ಥಳಗಳಿಗೆಭೇಟಿ ನೀಡಿ ಮಾತನಾಡಿ, ರಾಜ್ಯದಲ್ಲಿ ದೊಡ್ಡಬಳ್ಳಾಪುರತಾಲೂಕು ಪಾಸಿಟಿವ್‌ ಪಟ್ಟಿಯಲ್ಲಿ ಕೆಂಪು ವಲಯಕ್ಕೆಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಆದೇಶದ ಮೇರೆಗೆ ತಾಲೂಕಿನ ವಿವಿಧೆಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ, ಅನಗತ್ಯವಾಗಿಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡಲು ಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿ ವಾರು ಹಾಗೂನಗರಸಭೆ ವ್ಯಾಪ್ತಿಗಳಲ್ಲಿ ಕೊರೊನಾ ಪರೀಕ್ಷೆಗಳನ್ನುನಡೆಸಲಾಗುತ್ತಿದೆ. ಇದರೊಂದಿಗೆ ಲಸಿಕಾ ಕೇಂದ್ರ,ಎಪಿಎಂಸಿ, ತಾಲೂಕು ಕಚೇರಿಗಳಲ್ಲಿಯೂ ಕೊರೊನಾಪರೀಕ್ಷೆ ನಡೆಸಲಾಗುತ್ತಿದೆ. ಎಪಿಎಂಸಿಯಲ್ಲಿ ಬೆಳಗ್ಗೆ10ರವರೆಗೆ ನಡೆಸಲಾಗುತ್ತಿದ್ದ ಮಾರುಕಟ್ಟೆಯನ್ನು ಬೆಳಗ್ಗೆ8 ಗಂಟೆಗಳ ವರೆಗೆ ಸೀಮಿತಗೊಳಿಸಲಾಗಿದ್ದು, ಉಳಿದಂತೆ6ರಿಂದ10ರವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲುಸಮಯ ನಿಗದಿಪಡಿಸಲಾಗಿದೆ ಎಂದರು.

ಅಗತ್ಯ ವಸ್ತು ಖರೀದಿಗೆ ಮಾತ್ರ ಅವಕಾಶ:ಡಿವೈಎಸ್‌ಪಿ ಟಿ.ರಂಗಪ್ಪ ಮಾತನಾಡಿ, ಬೆಂಗಳೂರುನಗರ ಜಿಲ್ಲೆಯಲ್ಲಿ ಮಾತ್ರ ಲಾಕ್‌ಡೌನ್‌ ತೆರವಾಗಿದ್ದು,2 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲುಅವಕಾಶವಿದೆ. ಆದರೆ, ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿದಿದ್ದು, 6ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳನ್ನುಖರೀದಿಸಲು ಅವಕಾಶವಿದೆ. ಇದರಲ್ಲಿ ಯಾವುದೇಗೊಂದಲ ಬೇಡ. ಈ ಸಮಯದಲ್ಲಿ ಕೊರೊನಾ ಇಲ್ಲಎಂದು ಭಾವಿಸಿ, ಸಾರ್ವಜನಿಕರು ಹೇಗೆಂದರೆ ಹಾಗೆ ವರ್ತಿಸುವಂತಿಲ್ಲ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಪಾಡಿಕೊಳ್ಳುವುದು ಅಗತ್ಯ.

ದೊಡ್ಡಬಳ್ಳಾಪುರ ಸುತ್ತಬ್ಯಾರಿಕೇಡ್‌ ಹಾಕಿ ಪೊಲೀಸ್‌ ಕಾವಲು ಹಾಕಲಾಗಿದೆ.ಅನಗತ್ಯವಾಗಿ ಓಡಾಡುವ ವಾಹನಗಳ ಮೇಲೆವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಪ್ರಕರಣದಾಖಲಿಸಲಾಗುವುದು. ಭಾನುವಾರ 40ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದರು.

ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ: ತಾಲೂಕಿನಪಾಸಿಟಿವಿಟಿ ದರ ಇಳಿಸುವ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.ಗ್ರಾಮದ ಮುಖಂಡರು ಇದಕ್ಕೆ ಸಹಕರಿಸಬೇಕಿದೆ.ತಾಲೂಕು ಆಡಳಿತ ಹಾಗೂ ಪೊಲೀಸ್‌ ಇಲಾಖೆಯೊಂದಿಗೆ ಸಾರ್ವಜನಿಕರು ಜವಾಬ್ದಾರಿಯಿಂದವರ್ತಿಸಿ ಸಹಕರಿಸಬೇಕಿದೆ ಎಂದು ಹೇಳಿದರು.ಮಾಂಸ ಮಾರಾಟ ಬಂದ್‌: ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಜೂ.21ರವರೆಗೆದೊಡ್ಡಬಳ್ಳಾಪುರ ತಾಲೂಕಿನಲ್ಲಿ ಎಲ್ಲಾ ರೀತಿಯ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್‌ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.

ಉಪನೋಂದಣಿ ಕಚೇರಿ ಮುಂದೆ ಜನ: ರಾಜ್ಯಸರ್ಕಾರ ಉಪನೋಂದಣಾಧಿಕಾರಿಗಳ ಕಚೇರಿಗಳನ್ನುತೆರೆಯಲು ಅವಕಾಶ ಮಾಡಿಕೊಟ್ಟಿರುವುದರಿಂದಸೋಮವಾರ ವಿವಿಧ ನೋಂದಣಿ ಕಾರ್ಯಗಳಿಗಾಗಿಉಪನೋಂದಣಿ ಅಧಿಕಾರಿಗಳ ಕಚೇರಿ ಮುಂಭಾಗಜನರು ಸಾಲುಗಟ್ಟಿ ನಿಂತಿದ್ದರು. ಈ ನಡುವೆ ಸರ್ವರ್‌ಸಮಸ್ಯೆಯಿಂದ ಆಗಬೇಕಾದ ಕಚೇರಿ ಕೆಲಸಗಳುಕೆಲಕಾಲ ಸ್ಥಗಿತಗೊಂಡಿದ್ದರಿಂದ ಹೆಚ್ಚಿನ ಜನಜಂಗುಳಿಉಂಟಾಗಿತ್ತು. ತಾಲೂಕು ಕಚೇರಿ ಮುಂಭಾಗದಲ್ಲಿಕೊರೊನಾ ಲಾಕ್‌ಡೌನ್‌ಗೂ ಮುಂಚೆ ಇದ್ದಂತೆವಾಹನಗಳ ಸಾಲು ಹೆಚ್ಚಾಗಿತ್ತು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.