ತಂಬಾಕು ನಿಷೇಧ ನಾಮಫಲಕ ಕಡ್ಡಾಯ:ಡೀಸಿ ರವೀಂದ್ರ
Team Udayavani, Feb 7, 2020, 4:52 PM IST
ದೇವನಹಳ್ಳಿ : 2003ರ ಕೋಟ್ಟಾ ಕಾಯಿದೆಯಡಿ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಮೀಟರ್ ಅಂತರದಲ್ಲಿ , ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ನಿಷೇಧವೆಂದು ಶಾಲೆಯ ಮುಖ್ಯ ಪ್ರವೇಶ ದ್ವಾರಗಳಲ್ಲಿ ನಾಮಫಲಕವನ್ನು ಮುಂದಿನ ತ್ರೈಮಾಸಿಕ ಸಭೆ ನಡೆಯುವಷ್ಟರಲ್ಲಿ ಕಡ್ಡಾಯವಾಗಿ ಅಳವಡಿಸ ಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಡೀಸಿ ಪಿ.ಎನ್.ರವೀಂದ್ರ ಸೂಚಿಸಿದರು.
ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೈಗಾರಿಕಾ ಪ್ರದೇಶಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಶಾಲಾ-ಕಾಲೇಜು ಆವರಣಗಳು ಮತ್ತು ಸರ್ಕಾರಿ ಕಚೇರಿ ಆವರಣಗಳುಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ಉಲ್ಲಂ ಸುವವರಿಗೆ 200 ರೂ. ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದರು.
ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಾದ ಕ್ಯಾನ್ಸರ್, ಹೃದಯ ಸಂಬಂಧಿ ಇತ್ಯಾದಿ ಮಾರಾಣಾಂತಿಕ ಖಾಯಿಲೆಗಳು, ಗರ್ಭ ಪಾತ, ಗರ್ಭದಾರಣೆಯಲ್ಲಿ ಕುಂಠಿತ, ಸೇರಿದಂತೆ ಇತರೆ ದುಷ್ಪರಿಣಾಮಗಳ ಕುರಿತು ಜಾಗೃತಿ ತಿಳುವಳಿಕೆ ಮೂಡಿಸುವ ಶಿಬಿರಗಳನ್ನು ಆಯೋಜಿಸಿವಂತೆ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ್, ಡಿವೈಎಸ್ಪಿ ದೀಪಕ್, ನಾಲ್ಕು ತಾಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.