Tragic: ಹೆದ್ದಾರಿಯಲ್ಲಿ ಸ್ಕೂಟರ್‌ಗೆ ಲಾರಿ ಡಿಕ್ಕಿ; 8 ತಿಂಗಳ ಗರ್ಭಿಣಿ ಸಾವು
Team Udayavani, Aug 8, 2024, 10:44 AM IST
ನೆಲಮಂಗಲ: ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಾಗೂ ಹೊಟ್ಟೆಯಿಂದ ಹೊರ ಬಂದ 8 ತಿಂಗಳ ಭ್ರೂಣ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ತಾಲೂಕಿನ ಸೋಂಪುರ ಹೋಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಬುಧವಾರ ಬೆಳಗ್ಗೆ 7.45ರಲ್ಲಿ ಘಟನೆ ಸಂಭವಿಸಿದೆ.
ತಾಲೂಕಿನ ತ್ಯಾಮ ಗೊಂಡ್ಲು ಹೋಬಳಿಯ ತೋಟನಹಳ್ಳಿಯ ಸಿಂಚನಾ (30) ಹಾಗೂ ಗರ್ಭಿಣಿ ಹೊಟ್ಟೆಯಲ್ಲಿದ್ದ 8 ತಿಂಗಳ ಭ್ರೂಣ ಕೂಡ ಸಾವನ್ನಪ್ಪಿದೆ. ಸ್ಕೂಟರ್ ಓಡಿಸುತ್ತಿದ್ದ ಸಿಂಚನಾ ಪತಿ ಮಂಜುನಾಥ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ವಿವರ: ಮಂಜುನಾಥ್ ಸೋಂಪುರ ಕೈಗಾರಿಕಾ ಪ್ರದೇಶದ ಎಲ್.ಎಂ.ಕಾರ್ಖಾನೆಯಲ್ಲಿ ನೌಕರನಾ ಗಿದ್ದು, ಕಂಪನಿಯಿಂದ ಬೇರೆ ರಾಜ್ಯಕ್ಕೆ ವರ್ಗಾವಣೆ ಯಾಗಿದ್ದರು. ಸಿಂಚನಾಳ ಬಾಣಂತನ ಹಾಗೂ ಬೇರೆ ರಾಜ್ಯದಲ್ಲಿ ಕೆಲಸ ಸುಸೂತ್ರವಾಗಿ ನಡೆಯಲಿ ಎಂದು ಹೋಬಳಿಯ ದಕ್ಷಿಣ ಕಾಶಿ ಖ್ಯಾತಿಯ ಶಿವಗಂಗೆ ತೆರಳಿ ಪೂಜೆ ಸಲ್ಲಿಸಿ, ದಾಬಸ್ ಪೇಟೆ ಮೂಲಕ ಎಡೇಹಳ್ಳಿ ಬಳಿ ಬರುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಕೆಳಗೆ ಬಿದ್ದ ಪತ್ನಿ ಸಿಂಚನಾ ಮೇಲೆ ಟಿಪ್ಪರ್ ಲಾರಿ ಹರಿದಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಸಿಂಚನಾ ಹೊಟ್ಟೆಯಿಂದ ಭ್ರೂಣ ಆಚೆ ಬಂದು ವಿಲವಿಲ ಒದ್ದಾಡಿ ಸಾವನ್ನಪ್ಪಿದೆ. ಅಪಘಾತ ಬಳಿಕ ಟಿಪ್ಪರ್ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಿಂಚನಾ ಪತಿ ಮಂಜುನಾಥ್, “ನಾವಿಬ್ಬರೂ ವಿವಾಹವಾಗಿ 10 ತಿಂಗಳಾಗಿತ್ತು. ಹೆರಿಗೆ ಸುಸೂತ್ರವಾಗಿ ಆಗಲಿ ಹಾಗೂ ನನ್ನ ನೌಕರಿ ಕೈ ಹಿಡಿಯಲಿ’ ಎಂದು ಶಿವಗಂಗೆಯ ಹರಕೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು, ದಾಬಸ್ ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಡೆಹಳ್ಳಿಯ ತೋಟನಹಳ್ಳಿಗೆ ಹೋಗುತ್ತಿದ್ದೆವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ನಾವಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆಯಿತು. ಘಟನೆಯಲ್ಲಿ ಪತ್ನಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.