Ration card holders: ಪಡಿತರ ಚೀಟಿದಾರರಿಗೆ ಸಂದಾಯವಾಗದ ಹಣ


Team Udayavani, Oct 21, 2023, 3:05 PM IST

tdy-14

ದೇವನಹಳ್ಳಿ: ಕಾಂಗ್ರೆಸ್‌ ಸರ್ಕಾರದ ಮಹಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಪಡಿತರ ಅಕ್ಕಿಗೆ ಬದಲಾಗಿ ಹಣ ನೀಡುತ್ತಿದೆ. ಅರ್ಹರಿಗೆ ನೇರವಾಗಿ ನಗದು ಪಾವತಿ (ಡಿಡಿಟಿ) ಮೂಲಕ ಹಣ ಪಾವತಿಯಾಗುತ್ತಿದೆ. ಆದರೆ, ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 10 ಸಾವಿರಕ್ಕೂ ಅಧಿಕ ಪಡಿತರದಾರರಿಗೆ ಹಣ ಸಂದಾಯವಾಗಿಲ್ಲ.

ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡಿಸದಿರುವುದೂ ಸೇರಿದಂತೆ ಹಲವು ತಾಂತ್ರಿಕ ಕಾರಣಗಳಿಂದ ಅನ್ನಭಾಗ್ಯದ ಹಣ ತಲುಪಿಲ್ಲ. ಕೆಲವರು ಬ್ಯಾಂಕ್‌ ಖಾತೆ ತೆರೆಯಲು, ಇ ಕೆವೈಸಿ ಲಿಂಕ್‌ ಮಾಡಿಸಲು ನಿತ್ಯ ಬ್ಯಾಂಕ್‌ ಮತ್ತು ಇಂಟರ್‌ನೆರ್ಟ್‌ ಸೆಂಟರ್‌ಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್‌ ಮಾತ್ರವಲ್ಲದೇ, ಅಂಚೆ ಕಚೇರಿಗಳಲ್ಲಿಯೂ ಖಾತೆ ಪ್ರಾರಂಭಿಸಬಹುದು. ಆ ಖಾತೆಗೆ ಆಧಾರ್‌ ಲಿಂಕ್‌ ಮಾಡಿದರೆ ಹಣ ಡಿಬಿಟಿ ಆಗುತ್ತದೆ. ಹಲವರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಬ್ಯಾಂಕ್‌ ಖಾತೆಗೆ ಆಧಾರ್‌ಸಂಖ್ಯೆ ಜೋಡಣೆ ಮಾಡಿಸಬೇಕು. ಇ ಕೆವೈಸಿ ಆಗದೆ ಫ‌ಲಾನುಭವಿಗಳಿಗೆ ಡಿಬಿಟಿ ಸಾಧ್ಯವಾಗುತ್ತಿಲ್ಲ. ಕುಟುಂಬದ ಮುಖ್ಯಸ್ಥರು ನಿಧನರಾಗಿದ್ದರೆ, ಮತ್ತೂಂದು ಖಾತೆ ತೆರೆದಿದ್ದರೆ ಅಂಥವರಿಗೆ ಹಣ ತಲುಪದೇ ವಾಪಸ್‌ ಬಂದಿದೆ. ಬ್ಯಾಂಕ್‌ ಗಳಲ್ಲಿ ಜನದಟ್ಟನೆ ಕಾರಣದಿಂದ ಖಾತೆ ಮಾಡಿಸಲು ಮತ್ತು ಇ ಕೆವೈಸಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂಬುದು ಕೆಲ ಫ‌ಲಾನುಭವಿಗಳ ಅಳಲು. ಖಾತೆ ಹೊಂದಿದ್ದರೂ ಆಧಾರ್‌ ಜೋಡಣೆಯಾಗಿಲ್ಲ. ಇ ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಡಿ ಬಿಟಿ ಮೂಲಕ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಸಾಧ್ಯವಾಗಿಲ್ಲ. ಅನ್ನಭಾಗ್ಯ ಯೋಜನೆಯ ಹಣವನ್ನು ಡೆಬಿಟ್‌ ಮಾಡಲು ಆರಂಭಿಸಿದಾಗ ಹಲವು ಕುಟುಂಬಗಳಿಗೆ ಇಕೆವೈಸಿ ಮಾಡಿಸಿರಲಿಲ್ಲ. ಇದರಿಂದ ಇವರ ಖಾತೆಗಳಿಗೆ ಹಣ ಜಮೆಯಾಗಿರಲಿಲ್ಲ. ಈ ಬಗ್ಗೆ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮನವರಿಕೆ ಮಾಡಿಕೊಟ್ಟ ನಂತರ ಇ ಕೆ ವೈಸಿ ಪ್ರಕ್ರಿಯೆಗಳು ಹೆಚ್ಚಾದವು.

ಖಾತೆ, ಇ ಕೆವೈಸಿಗೆ ಜನದಟ್ಟಣೆ ಅಡ್ಡಿ : ಬ್ಯಾಂಕ್‌ಗಳಲ್ಲಿ ಜನದಟ್ಟಣೆ ಕಾರಣದಿಂದ ಖಾತೆ ಮಾಡಿಸಲು ಮತ್ತು ಇ ಕೆವೈ ಸಿ ಮಾಡಿಸಲು ಸಾಧ್ಯವಾಗುತ್ತಿಲ್ಲ. ಬ್ಯಾಂಕ್‌ ಖಾತೆಗೆ ಆಧಾರ್‌ ಕಡ್ಡಾಯ. ಇ ಕೆವೈಸಿ ಆಗದ ಫ‌ಲಾನುಭವಿಗಳಿಗೆ ಡಿಬಿಟಿ ಸಾಧ್ಯ ವಾಗುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3 ತಿಂಗಳ ಅವಧಿಯಲ್ಲಿ 2.30 ಲಕ್ಷ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಹಣ ಸಂದಾಯವಾಗಿದೆ. ಅದರಲ್ಲಿ 10,000 ಜನರಿಗೆ ಡಿಬಿಟಿ ಮೂಲಕ ಹಣ ಸಂದಾಯವಾಗಿಲ್ಲ. ಜುಲೈ 2023ರ ಮಾಹೆಯಲ್ಲಿ 9,84,50,910 ರೂ.ಗಳನ್ನು ವರ್ಗಾವಣೆ ಮಾಡಲಾಗಿರುತ್ತದೆ. ಆಗಸ್ಟ್‌ 2023ರ ಮಾಹೆಯಲ್ಲಿ 10,71,15,130 ರೂ.ಗಳನ್ನು ಅರ್ಹರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಸೆಪ್ಟೆಂಬರ್‌ 2023ರ 11,05,62,930 ರೂ. ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 10 ಸಾವಿರ ಕುಟುಂಬಗಳಿಗೆ ಹಣ ಸಂದಾಯವಾಗಿಲ್ಲ. ಇ ಕೆವೈಸಿ ಮಾಡಿಸದಿರುವುದು, ಕೆಲವು ತಾಂತ್ರಿಕ ಸಮಸ್ಯೆಗಳಿಂದ ಹಣ ಸಂದಾಯವಾಗುತ್ತಿಲ್ಲ, ಹಂತ ಹಂತವಾಗಿ ಪಡಿತರ ಚೀಟಿದಾರರಿಗೆ ಹಣ ಸಂದಾಯ ಮಾಡಲಾಗುತ್ತದೆ. ಇ ಕೆವೈಸಿ ಮಾಡಿಸದೇ ಇರುವವರು ಕೂಡಲೇ ಮಾಡಿಸಬೇಕು. – ಗಿರಿಜಾದೇವಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ

ಅನ್ನಭಾಗ್ಯ ಪಡಿತರ ಅಕ್ಕಿಯ ಹಣ ನಮ್ಮ ಖಾತೆಗೆ ಇನ್ನೂ ಸಂದಾಯವಾಗಿಲ್ಲ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಸೈಬರ್‌ ಸೆಂಟರ್‌ಗಳಿಗೆ ಅಲೆದಾಡಿ ಸುಸ್ತಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇ ಕೆವೈಸಿ ಮಾಡಿಸಿದ್ದರೂ ಹಣ ಖಾತೆಗೆ ಜಮಾ ಆಗಿಲ್ಲ. – ಸುಶೀಲಮ್ಮ, ಪಡಿತರ ಚೀಟಿ ಫ‌ಲಾನುಭವಿ 

– ಎಸ್‌.ಮಹೇಶ್‌

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.