Urea shortage: ಯೂರಿಯಾ ಕೊರತೆ: ಸಾಲುಗಟಿ ನಿಂತ ರೈತರು


Team Udayavani, Sep 28, 2023, 1:56 PM IST

tdy-9

ದೊಡ್ಡಬಳ್ಳಾಪುರ: ಒಂದು ವಾರದಿಂದಲು ತಾಲೂಕಿನಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರಾಗಿ, ಮುಸುಕಿನಜೋಳ ಸೇರಿದಂತೆ ಇತರೆ ಬೆಳೆಗೆ ಹಾಕುವ ಸಲುವಾಗಿ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಾಲೂಕಿನ ರಸಗೊಬ್ಬರಗಳ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿ ನಿಲ್ಲುವಂತಾಗಿದೆ.

ನಗರ ಸೇರಿದಂತೆ ತಾಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿ ಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದ್ದು, ನಗರದ ಟಿಎ ಪಿಎಂಸಿಎಸ್‌ ಮಾರಾಟ ಮಳಿಗೆಯಲ್ಲಿ ಮಾತ್ರ ಬುಧವಾರ 29 ಟನ್‌ ದಾಸ್ತಾನು ಇದೆ. ಇದರಿಂದಾಗಿ ಬುಧವಾರ ಬೆಳಗ್ಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದರು. ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಯಿತಾದರೂ ಸಹ ಸಾಲಿನಲ್ಲಿ ನಿಂತಿದ್ದ ನೂರಾರು ಜನ ರೈತರು ಯೂರಿಯಾ ದೊರೆಯದೆ ಬರಿಗೈಯಲ್ಲಿ ಹಿಂದಿರುಗುವಂತಾಯಿತು.

ನಗರದ ತಾಲೂಕು ಪಂಚಾಯಿತಿ ಯಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ ಕೃಷಿ ಇಲಾಖೆಯ ತಾಂತ್ರಿಕ ವಿಭಾಗದ ಅಧಿಕಾರಿ ರೂಪಾ, ತಾಲೂಕಿಗೆ ಈ ವರ್ಷದ ಮಳೆಗಾಲಕ್ಕೆ 569 ಟನ್‌ ಯೂರಿಯಾ ಬೇಕಾಗಬಹುದು ಎನ್ನುವ ಗುರಿ ಅಂದಾಜಿಸಲಾಗಿತ್ತು. ಆದರೆ ಇದುವರೆಗೆ 900ಟನ್‌ ಯೂರಿಯಾ ಸರಬರಾಜು ಆಗಿದೆ. ಆದರೂ ಸಹ ಇನ್ನೂ ರೈತರಿಂದ ಬೇಡಿಕೆ ಇದೆ. ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್‌ ರೈಲು ಬರುವುದು ವಿಳಂಬವಾಗಿರುವುದರಿಂದ ಮೂರು ದಿನಗಳ ಒಳಗೆ 150 ಟನ್‌ ಯೂರಿಯಾ ಬರಲಿದೆ. ಯೂರಿಯಾ ದಾಸ್ತಾನು ಕೊರತೆ ಇರುವ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕು ತರಲಾಗಿದೆ ಎಂದರು.

ಈ ಬಾರಿ ನಮ್ಮ ತಾಲೂಕನ್ನು ರಾಜ್ಯ ಸರ್ಕಾರ ಮೊದಲ ಪಟ್ಟಿಯಲ್ಲೇ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಶೇ.85ರಷ್ಟು ರಾಗಿ ಬೆಳೆ ವಿಫಲವಾಗಿದೆ. ತಾಲೂಕಿನಲ್ಲಿ ಈ ಬಾರಿಯ ಮುಂಗಾರಿನಲ್ಲಿ ಫಸಲ್‌ ಬಿಮಾ ಬೆಳೆ ವಿಮಾ ಯೋಜನೆಯಡಿ ರಾಗಿ, ಮುಸುಕಿನಜೋಳದ ಬೆಳೆಗೆ 16,755 ಜನ ರೈತರು ವಿಮೆ ಹಣ ಪಾವತಿಸಿ ನೋಂದಣಿ ಮಾಡಿಕೊಂಡಿದ್ದಾರೆ. ಬೆಳೆ ಸಮೀ ಕ್ಷೆಯ ನಂತರ ನಷ್ಟದ ಅಂದಾಜು ಸಿಗಲಿದೆ. ಸಮೀಕ್ಷೆಯ ಆಧಾರದ ಮೇಲೆ ಬೆಳೆ ವಿಮೆ ಮಾಡಿಸಿರುವ ಎಲ್ಲಾ ರೈತರಿಗೂ ಫೆಬ್ರವರಿ ವೇಳೆಗೆ ಖಾತೆಗಳಿಗೆ ಹಣ ಜಮೆ ಯಾಗಲಿದೆ ಎಂದರು.

 

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.