ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

Team Udayavani, Apr 30, 2023, 12:43 PM IST

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ಕೆಳಗಿನನಾಯಕ ರಾಂಡಹಳ್ಳಿ ಗ್ರಾಮದಲ್ಲಿ ಕಂದಾಯ ಗ್ರಾಮ ಘೋಷಣೆಯಾಗದೇ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ.

ಇದಲ್ಲದೇ ಒಳ ಮೀಸಲಾತಿ ರದ್ದು, ಅರಣ್ಯ ಇಲಾಖೆ ಕಿರುಕುಳ ನಡೆಯುತ್ತಿದ್ದು, ಗ್ರಾಮದ ಮುಖಂಡರು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹೊರತು ಮತದಾನದಲ್ಲಿ ಭಾಗವಹಿಸದೇ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ತಾಲೂಕಿನ ಕೆಳಗಿನನಾಯಕರಾಂಡಹಳ್ಳಿ ಗ್ರಾಮ ಸ್ಥರು ಮತದಾನ ವಿರೋಧಿಸಿ ನಡೆದ ಸುದ್ಧಿ ಗೋಷ್ಠಿ ಯಲ್ಲಿ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಕೃಷ್ಣನಾಯಕ್‌, ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಷ್ಟೇ ಬಂದು ಆಶ್ವಾಸನೆ ನೀಡುತ್ತಾರೆ ಹೊರತು ಉಳಿದಂತೆ ಇತ್ತ ಸುಳಿಯುವುದೇ ಇಲ್ಲ.

ಗ್ರಾಮದಲ್ಲಿ 140 ಕುಟುಂಬಗಳು ಇವೆ. 900 ಜನ ಸಂಖ್ಯೆ ಇದ್ದು 486 ಮತದಾರರು ಇದ್ದಾರೆ. ನಾವು ಯಾರೂ ಮತದಾನದಲ್ಲಿ ಭಾಗವಹಿಸುವುದಿಲ್ಲ. ಸರ್ಕಾರದಿಂದ ದೊರೆಯುವ ಅವಕಾಶಗಳಿಂದ ವಂಚಿತರಾಗಿದ್ದೇವೆ. ಲಂಬಾಣಿ ಜನಾಂಗವನ್ನು ಅಲೆ ಮಾರಿಗಳು ಎಂದು ಕುಂಟು ನೆಪ ಹೇಳುತ್ತ ನಮ್ಮನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸಲಾಗಿದೆ. ನಮ್ಮ ಬೇಡಿಕೆಗಳು ಈಡೇರುವವರಿಗೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದರು.

90ರ ದಶಕದಲ್ಲೇ ಅಂಗೈ ಅಗಲದಷ್ಟು ಗೋಮಾಳ ಜಮೀನನ್ನು ನಮ್ಮ ಹೆಸರಿಗೆ ಖಾತೆ ಮಾಡಿ ಕೊಡಲಾಗಿತ್ತು. ಇದರಲ್ಲಿ ನಾವು ಕೃಷಿ ಮಾಡುತ್ತ ಜೀವನ ನಡೆಸುತ್ತಿದ್ದೆವು. ಇನ್ನೂ ಕೆಲವರು ನಮೂನೆ57, ನಮೂನೆ 53 ಅರ್ಜಿ ಹಾಕಿ ಉಳುಮೆ ಮಾಡುತ್ತಿದ್ದಾರೆ. ಈಗ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳು ಈ ಭೂಮಿ ಅರಣ್ಯ ಇಲಾಖೆಗೆ ಒಳಪಟ್ಟಿದೆ ಎಂದು ಕಾಲುವೆ ತೊಡಲು ಮುಂದಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಒಳ ಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯ: ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗೋಪಾಲ್‌ ನಾಯಕ್‌ ಮಾತನಾಡಿ, ಚುನಾವಣೆ ಗಿಮಿಕ್‌ ಸಲುವಾಗಿ ಜಾರಿಗೆ ತರಲು ಮುಂದಾಗಿರು ಒಳ ಮೀಸಲಾತಿಯಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಇದನ್ನು ಕೂಡಲೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರ ಬೇಡಿಕೆಗಳು: ಕೆಳಗಿನನಾಯಕರಾಂಡನಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಬೇಕು. ಗೋಮಾಳ ಭೂಮಿಯಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ಖಾತೆ ಮಾಡಿಸಬೇಕು. ಅರಣ್ಯ ಇಲಾಖೆ ವತಿಯಿಂದ ರೈತರಿಗೆ ನೀಡುತ್ತಿರುವ ಕಿರುಕುಳ ನಿಲ್ಲಿಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಒಳ ಮೀಸಲಾತಿ ಆದೇಶ ಹಿಂಪಡೆಯಬೇಕು. ರೈತರ ಮೇಲೆ ಹಾಕಿರುವ ಕ್ರಿಮಿನಲ್‌ ಮೊಕದ್ದಮೆ ಗಳನ್ನು ಹಿಂದಕ್ಕೆ ಪಡೆಯಬೇಕು. ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ಟಾಪ್ ನ್ಯೂಸ್

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.