Vaccination campaign: ಜಿಲ್ಲೆಯಲ್ಲಿ ಲಸಿಕಾ ಅಭಿಯಾನ
Team Udayavani, Sep 25, 2023, 12:28 PM IST
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಹೈನುಗಾರಿಕೆ ಮತ್ತು ರೇಷ್ಮೆಗೆ ಹೆಸರು ವಾಸಿಯಾಗಿದ್ದು. ಪ್ರತಿ ರಾಸುಗಳಿಗೆ ತಪ್ಪದೇ ಕಾಲುಬಾಯಿ ಕಾಯಿಲೆಯನ್ನು ತಡೆಗಟ್ಟಲು ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಬೆಂಗಳೂರು ಹಾಲು ಒಕ್ಕೂಟ ವತಿಯಿಂದ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 25ರವರೆಗೆ ನಾಲ್ಕನೇ ಸುತ್ತಿನ ಕಾಲು ಬಾಯಿ ಲಸಿಕಾ ಅಭಿಯಾನ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕಿ ನಲ್ಲೂ ಕಾಲುಬಾಯಿ ಕಾಯಿಲೆಯ ಲಸಿಕೆ ಹಾಕಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಬೆಂಗಳೂರು ಹಾಲು ಒಕ್ಕೂಟವು ಸಹ ಸಹಕಾರವನ್ನು ನೀಡುತ್ತಿದೆ. 1 ಲಕ್ಷ 87 ಸಾವಿರ 700 ಡೋಸ್ ಕಾಲುಬಾಯಿ ರೋಗದ ಲಸಿಕೆ ಹಾಗೂ 1 ಲಕ್ಷ 67,000 ಸಿರಿಂಜ್‌ಗಳನ್ನು ಸರಬರಾಜು ಮಾಡಲಾಗಿದೆ. ಬೆಂಗಳೂರು ಹಾಲು ಒಕ್ಕೂಟ ಕೂಡ ಲಸಿಕೆ ವಿತರಣೆಗೆ ಸಹಯೋಗ ನೀಡಿದೆ. ಬೆಂಗಳೂರು ಹಾಲು ಒಕ್ಕೂಟದಿಂದ ಒಟ್ಟು 36 ವಾಹನ 51 ಲಸಿಕೆದಾರರನ್ನು ಒದಗಿಸಲಾಗುತ್ತಿದೆ.
ಹೈನುಗಾರಿಕೆಗೆ ರೈತರು ಹೆಚ್ಚಿನ ಒತ್ತು: ಜಿಲ್ಲೆಯಲ್ಲಿ ಹೈನುಗಾರಿಕೆಗೆ ರೈತರು ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಗಳಲ್ಲಿ ಈಗಾಗಲೇ ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕರು ಮತ್ತು ಉಪವ್ಯವಸ್ಥಾಪಕರು, ಬೆಂಗಳೂರು ಹಾಲು ಒಕ್ಕೂಟದ ಪಶು ವೈದ್ಯರು ಮತ್ತು ಪಶು ಪಾಲನಾ ಇಲಾಖೆ ವೈದ್ಯರುಗಳು ರೈತರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸಿ ಇದರಿಂದ ಯಾವುದೇ ದುಷ್ಪರಿಣಾಮಗಳು ಹಾಗೂ ಹಾಲು ಕಡಿಮೆಯಾಗುವುದಿಲ್ಲ ಎಂದು ವ್ಯಾಪಕ ಪ್ರಚಾರವನ್ನು ಹಾಗೂ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪ್ರತಿ ವಾರ್ಷಿಕ ಮಹಾಸಭೆಗಳಲ್ಲಿ ಕಾಲುಬಾಯಿ ರೋಗದ ಲಸಿಕೆ ಹಾಕಿಸಲು ರೈತರಿಗೆ ಮಾಹಿತಿ ನೀಡಲಾಗುತ್ತಿದೆ.
ಲಸಿಕೆ ವಿತರಣೆಗೆ ಕ್ರಮ: ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಕಾಲುಬಾಯಿ ರೋಗ ರಾಸುಗಳನ್ನು ಹೆಚ್ಚಾಗಿ ಕಾಡಿತ್ತು. ಕಾಲುಬಾಯಿ ರೋಗದಿಂದ ಹಲವು ಕರು ರಾಸುಗಳು ಸಾವನ್ನಪ್ಪಿದ್ದು. ರೈತರಿಗೆ ಆರ್ಥಿಕ ನಷ್ಟ ಪರಿಸ್ಥಿತಿನಿರ್ಮಾಣವಾಗಿತ್ತು. ಇಲಾಖೆಯು ಮುನ್ನೆಚ್ಚರಿಕೆಯಿಂದ ಲಸಿಕೆ ನೀಡುತ್ತಿದ್ದು ಲಸಿಕೆ ವಿತರಣೆಗೆ ಸಾಕಷ್ಟು ಕ್ರಮಗಳನ್ನು ವಹಿಸಿ ಅಗತ್ಯ ಕ್ರಮವನ್ನು ಕೈಗೊಳ್ಳುತ್ತಿದೆ.
ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಗಳನ್ನು ಮಾಡಿ ಕಾಲುಬಾಯಿ ರೋಗದ ಲಸಿಕೆ ಯಾವ ರೀತಿ ವಿತರಿಸಬೇಕು ಎಂಬುದರ ಬಗ್ಗೆ ಸಭೆ ಮಾಡಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಬಾರಿ ಶೇಕಡ 98ರಷ್ಟು ಲಸಿಕೆ ಹಾಕಿಸಲಾಗಿತ್ತು. ಈ ಬಾರಿ ಶೇಕಡಾ ನೂರರಷ್ಟು ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಲಸಿಕಾ ವಿತರಣಾ ಕಾರ್ಯ ಪ್ರಾರಂಭ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1, 62, 980 ಧನ ಮತ್ತು ಕಾಲುಬಾಯಿ ರೋಗ ಕಂಡು ಬಂದರೆ ಹಾಲಿನ ಉತ್ಪಾದನೆ ಕುಸಿಯುವ ಸೇರಿದಂತೆ ಜಾನುವಾರು ಗಳು ಸಾಯುವ ಆತಂಕ ಕೂಡ ಇದೆ. ಅದಕ್ಕಾಗಿ ಲಸಿಕಾ ವಿತರಣಾ ಕಾರ್ಯ ಪ್ರಾರಂಭಿಸಿದೆ.
ಕಳೆದ ಒಂದು ತಿಂಗಳ ಕಾಲ ಪ್ರತಿ ಹಳ್ಳಿಯಲ್ಲೂ ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಲಿದೆ. ರೈತರಲ್ಲಿ ಲಸಿಕೆಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳ್ಳಿಮಟ್ಟದಲ್ಲಿ ರಾಸುಗಳಿಗೆ ಕಾಲುಬಾಯಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಲಸಿಕೆ ವಿತರಣೆಗಾಗಿ 65 ತಂಡಗಳನ್ನು ರಚಿಸಿದ್ದು. 276 ಮಂದಿ ಲಸಿಕೆದಾರರು ಪ್ರತಿದಿನ ಬೆಳಗ್ಗೆ 6 ರಿಂದ 11 ಗಂಟೆವರೆಗೆ ನಿಗದಿಪಡಿಸಿದ ಹಳ್ಳಿಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಅದಕ್ಕಾಗಿ ಹಳ್ಳಿ ವಾರು ಮೈಕ್ರೋಪ್ಲಾನ್ ಸಿದ್ದಪಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೈನುಗಾರಿಕೆಯಲ್ಲಿ ಹೆಚ್ಚು ರೈತರು ತೊಡಗಿಸಿಕೊಂಡಿದ್ದಾರೆ.
ರಾಸುಗಳಿಗೆ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 25ರ ವರೆಗೆ ಒಂದು ತಿಂಗಳ ಕಾಲ ಕಾಲು ಬಾಯಿ ರೋಗದ ಲಸಿಕೆ ಅಭಿಯಾನ ಹಮ್ಮಿಕೊಂಡಿದೆ. ಎಲ್ಲಾ ರೈತರು ಮೊದಲು ಕಾಲುಬಾಯಿ ರೋಗದ ಲಸಿಕೆಯನ್ನು ರಾಸುಗಳಿಗೆ ಕೊಡಿಸಬೇಕು.– ಡಾ.ಸಿ.ಎಸ್.ಅನಿಲ್‌ಕುಮಾರ್, ಜಿಲ್ಲಾ ಮುಖ್ಯ ಪಶುಪಾಲನಾಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಲುಬಾಯಿ ರೋಗಕ್ಕೆ ಲಸಿಕೆ ಅಭಿಯಾನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಪ್ರತಿ ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲುಬಾಯಿ ರೋಗದ ಲಸಿಕೆಯನ್ನು ಹಾಕಿಸಬೇಕು. ಇದರಿಂದ ಯಾವುದೇ ತೊಂದರೆಗಳು ಆಗುವುದಿಲ್ಲ. ಕಾಲುಬಾಯಿ ರೋಗದ ತಡೆಗಟ್ಟಬೇಕಾದರೆ ಪ್ರತಿ ರೈತರು ರಾಸುಗಳಿಗೆ ಲಸಿಕೆ ಹಾಕಿಸಿ. ಮೂರನೇ ತಿಂಗಳು ಮೇಲ್ಪಟ್ಟ ಎಲ್ಲಾ ರಾಸುಗಳಿಗೆ ಲಸಿಕೆ ಹಾಕಿಸಬೇಕು.– ಡಾ.ಜಗದೀಶ್, ಉಪನಿರ್ದೇಶಕರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ
– ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.