ಗ್ರಾಮ ವಾಸ್ತವ್ಯ: ಮನೆ ಬಾಗಿಲಿಗೇ ಪರಿಹಾರ ಭಾಗ್ಯ
Team Udayavani, Mar 22, 2021, 12:22 PM IST
ವಿಜಯಪುರ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ 2ನೇ ಮಾಸಿಕ ಗ್ರಾಮವಾಸ್ತವ್ಯ ಹಿನ್ನೆಲೆ ಅಧಿಕಾರಿಗಳುಕಾಲ್ನಡಿಗೆಯಲ್ಲಿ ನಲ್ಲೂರು ಗ್ರಾಮದಲ್ಲಿ ಜಾಥಾ ನಡೆಸಿದರು.
ಪಟ್ಟಣ ಸಮೀಪದ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಕೆ.ಶ್ರೀನಿವಾಸ್ ಗ್ರಾಮವಾಸ್ತವ್ಯ ಕೈಗೊಂಡು ಗ್ರಾಮಕ್ಕೆ ಆಗಮಿಸಿ ಗ್ರಾಮ ದೇವತೆ ಕೋಟೆ ಗಂಗಾತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಹಾಗೂಶಾಸಕರಿಗೆ ಆರತಿ ಬೆಳಗುವ ಮೂಲಕ ಸ್ವಾಗತಕೋರಿದರು. ಜಿಲ್ಲಾ ಮತ್ತು ತಾಲೂಕು ಮಟ್ಟದಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಸೌಲಭ್ಯ, ಸಮಸ್ಯೆಗಳ ಬಗ್ಗೆಪರಿಶೀಲನೆ ನಡೆಸಿದರು. ಗ್ರಾಮದ ಬೀದಿಗಳನ್ನುಸುತ್ತಿದ ಅಧಿಕಾರಿಗಳು ಮನೆ ಬಾಗಿಲ ಬಳಿ ಹೋಗಿ ಸಾರ್ವಜನಿಕರ ಅಹವಾಲು ಆಲಿಸಿದರು.
ಮನೆ ಬಾಗಿಲಿಗೆ ಹಕ್ಕು ಪತ್ರ: ನಂತರ ನಲ್ಲೂರು ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿಫಲಾನುಭವಿಗಳಾದ ರಾಜಶೇಖರ, ಚಿಕ್ಕ ಆಂಜಿನಮ್ಮಸೇರಿ ಕಾಲೋನಿಯ ಹತ್ತು ಮಂದಿಗೆ ಮನೆಗಳ ಹಕ್ಕುಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕ್ರಮ: ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾಧಿಕಾರಿನೇತೃತ್ವದಲ್ಲಿ ಅಧಿಕಾರಿಗಳ ತಂಡ ಇಡೀ ದಿನಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡುವ ಪ್ರಯತ್ನ ಮಾಡಿದರು. ಇತ್ತೀಚೆಗೆ ಕೋವಿಡ್ ಸೋಂಕು ಮತ್ತೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡಬಾರದೆಂದು ಜನರ ಮನವಿ ಪತ್ರ ಸ್ವೀಕರಿಸಿ ಕಾಲಮಿತಿಯಲ್ಲಿ ಬಗೆಹರಿಸುವ ಪ್ರಯತ್ನ ನಡೆಸಲು ಪ್ರಯತ್ನಿಸಿದರು. ಸಣ್ಣ ಸಮಸ್ಯೆಗಳಿಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಅಲೆಯುವ ಪರಿಸ್ಥಿತಿ ದೂರ ಮಾಡುವನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಕ್ರೀಡಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್, ಸಿಇಒಎಂ.ಆರ್.ರವಿಕುಮಾರ್, ತಹಶೀಲ್ದಾರ್ ಅನಿಲ್ ಹರೋಲಿಕರ್, ದೊಡ್ಡಬಳ್ಳಾಪುರ ಡಿವೈಎಸ್ಪಿ ಟಿ.ರಂಗಪ್ಪ, ಜಿಪಂ ಸದಸ್ಯರಾದ ಬಾಲೆಪುರ ಲಕ್ಷ್ಮೀ ನಾರಾಯಣ,ತಾಪಂ ಅಧ್ಯಕ್ಷೆ ಶಶಿಕಲಾ ಆನಂದ್, ತಾಪಂ ಸದಸ್ಯ ಸೋಮತ್ತನಹಳ್ಳಿ ಮಂಜುನಾಥ್, ಗ್ರಾಪಂ ಅಧ್ಯಕ್ಷೆಮಹಾಲಕ್ಷ್ಮೀ, ಉಪಾಧ್ಯಕ್ಷೆ ಮಮತಾ, ಪಿಕಾರ್ಡ್‌ಬ್ಯಾಂಕ್ ಅಧ್ಯಕ್ಷ ಮುನಿರಾಜು, ಮತ್ತಿತರ ಅಧಿಕಾರಿಗಳು, ಊರಿನ ಜನರು ಹಾಜರಿದ್ದರು. ಜಿಲ್ಲಾಧಿಕಾರಿಗಳು ರಾತ್ರಿ ನಲ್ಲೂರು ಗ್ರಾಮದ ಸರ್ಕಾರಿ ಕಟ್ಟಡದಲ್ಲಿ ವಾಸ್ತವ್ಯ ಹೂಡಿದ್ದು, ಭಾನುವಾರ ಬೆಳಗ್ಗೆ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಎರಡನೇ ಮಾಸಿಕ ಕಾರ್ಯಕ್ರಮ ಸಮಾರೋಪ ಮಾಡಲಾಯಿತು.
ಸಣ್ಣಪುಟ್ಟ ರೈತರು ದಶಕಗಳಿಂದ ಸಾಗುವಳಿ ಚೀಟಿಗಾಗಿಪರದಾಡುತ್ತಿರುವುದನ್ನು ತಪ್ಪಿಸುವಲ್ಲಿಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕಾರ್ಯಕ್ರಮ ಸಹಕಾರಿಯಾಗಲಿದೆ. ಜೊತೆಗೆ,ವಿವಿಧ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. – ನಿಸರ್ಗ ನಾರಾಯಣಸ್ವಾಮಿ, ಶಾಸಕ
ಪಿಂಚಣಿ ಆಶ್ರಯ ಯೋಜನೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ ಮತ್ತಿತರಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕಲ್ಪಿಸಿಕೊಡುವ ಪ್ರಯತ್ನ ಇದಾಗಿದೆ. -ಅರುಳ್ ಕುಮಾರ್, ಉಪವಿಭಾಗಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.