ನಿರ್ಭೀತಿಯಿಂದ ಮತ ಹಕ್ಕು ಚಲಾಯಿಸಿ
Team Udayavani, Dec 3, 2019, 3:05 PM IST
ಹೊಸಕೋಟೆ: ಕ್ಷೇತ್ರದಲ್ಲಿ ಡಿ.5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸ ಬೇಕೆಂದು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಹೇಳಿದರು. ಅವರು ನಗರದಲ್ಲಿ ಏರ್ಪಡಿಸಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಚುನಾವಣೆಯಲ್ಲಿ ಯಾವುದೇ ರೀತಿಯಲ್ಲೂ ಅಕ್ರಮಗಳು ನಡೆಯದೆ ಮತದಾರರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶದಿಂದ ಪಥಸಂಚಲನ ಕೈಗೊಳ್ಳಲಾಗಿದೆ. ಕೇಂದ್ರ ಸಶಸ್ತ್ರ ಮೀಸಲು ಪಡೆ, ರಾಜ್ಯ ಮೀಸಲು ಪಡೆ, ಕೇರಳ ಪೊಲೀಸ್ ಹಾಗೂ ಗೃಹ ರಕ್ಷಕ ದಳ ಒಳಗೊಂಡಂತೆ 1500 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಇದಕ್ಕಾಗಿ ಜಿಲ್ಲೆಯ ಉನ್ನತಾಧಿಕಾರಿಗಳು, ಸ್ಥಳೀಯ ಸರ್ಕಲ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ತಂಡಗಳನ್ನು ಸಹ ರಚಿಸಿದ್ದು ಡಿ.4 ಮತ್ತು 5 ರಂದು ಗ್ರಾಮಗಳಲ್ಲಿ ಕಾರ್ಯನಿರ್ವಹಿಸಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲಿದ್ದಾರೆ. ಮತಗಟ್ಟೆಗಳ ಸೂಕ್ಷತೆ ಆಧಾರದ ಮೇಲೆ ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗುವುದು. ಸಾರ್ವಜನಿಕರು ಸಹ ಯಾವುದೇ ಅನೈತಿಕ ಚಟುವಟಿಕೆಗಳಲ್ಲಿ ತೊಡಗದೆ ಚುನಾವಣೆಯು ಶಾಂತಿಯುತವಾಗಿ ನಡೆಯಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಚುನಾವಣಾಧಿಕಾರಿ ಡಾ ಎಚ್.ಎಲ್. ನಾಗರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎ.ಸಜಿತ್, ಪೊಲೀಸ್ ಉಪಅಧೀಕ್ಷಕ ಎನ್.ಬಿ.ಸಕ್ರಿ, ಸರ್ಕಲ್ ಇನ್‌ಸ್ಪೆಕ್ಟರ್ ಶಿವರಾಜ್, ಇನ್ನಿತರೆ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಿಂದಪ್ರಾರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.