ನಗರಸಭೆ ಚುನಾವಣೆಗೆ ಮತಕೇಂದ್ರಗಳು ಸಜ್ಜು
Team Udayavani, Feb 9, 2020, 2:19 PM IST
ಹೊಸಕೋಟೆ: ನಗರಸಭೆಯ 31 ವಾರ್ಡ್‌ಗಳಿಗೆ ಫೆ.9ರಂದು ನಡೆಯಲಿರುವ ಚುನಾವಣೆಗೆ ನಗರದ ಎಲ್ಲಾ 47 ಮತಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಮತಕೇಂದ್ರಕ್ಕೂ 4 ಸಿಬ್ಬಂದಿಯೊಂದಿಗೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ.
ಮತಕೇಂದ್ರದ ಸುತ್ತಮುತ್ತಲಿನ 100 ಮೀಟರ್‌ಗಳಷ್ಟು ಸ್ಥಳವನ್ನು ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದ್ದು ಯಾವುದೇ ರೀತಿಯ ಪ್ರಚಾರ ಕೈಗೊಳ್ಳುವುದು, ಅನಧಿಕೃತ ವ್ಯಕ್ತಿಗಳ ಸಂಚಾರವನ್ನು ನಿರ್ಭಂದಿಸಲಾಗಿದೆ. ಮತದಾನವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆವಿಗೂ ನಡೆಯಲಿದ್ದು ಸಮರ್ಪಕವಾದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಚುನಾವಣೆಯು ಸುಸೂತ್ರವಾಗಿ ನಡೆಯಲು ಅನುವಾಗುವಂತೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ 2 ಸಂಚಾರಿ ತಂಡವನ್ನು ಸಹ ಜಿಲ್ಲಾಧಿಕಾರಿಗಳು ರಚಿಸಿದ್ದಾರೆ. ಸಾಮಗ್ರಿಗಳನ್ನು ಮಧ್ಯಾಹ್ನ ಪಡೆದು ಮತಕೇಂದ್ರಗಳಿಗೆ ಸಿಬ್ಬಂದಿ ತೆರಳಿದ್ದು ನಂತರ ಚುನಾವಣಾಧಿಕಾರಿಗಳು ಭೇಟಿ ನೀಡಿ ಸಿದ್ಧತೆಯ ಬಗ್ಗೆ ಪರಿಶೀಲನೆ ಸಹ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.