ನೇಕಾರರ ಬೇಡಿಕೆ ಈಡೇರಿಸುವಂತೆ ಡೀಸಿಗೆ ಮನವಿ


Team Udayavani, Oct 13, 2020, 1:00 PM IST

BR-TDY-3

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಿದ್ಯುತ್‌ ಸುಧಾರಣಾ ಕಾಯ್ದೆ ಹಿಂಪಡೆಯುವಂತೆ ಹಾಗೂ ಸಂಕಷ್ಟದಲ್ಲಿನ ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೇಕಾರರ ಮಹಾ ಮಂಡಳ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಮಾತನಾಡಿದ ಕರ್ನಾಟಕ ರಾಜ್ಯನೇಕಾರರ ಮಹಾ ಮಂಡಳದ ಪದಾಧಿಕಾರಿಗಳಾದ ಬಿ.ಜಿ.ಹೇಮಂತರಾಜು, ಪಿ.ಸಿ.ವೆಂಕಟೇಶ್‌ ಹಾಗೂ ಪಿ.ಎ.ವೆಂಕಟೇಶ್‌, ರಾಜ್ಯದಲ್ಲಿ ಸುಮಾರು 1.5 ಲಕ್ಷ ವಿದ್ಯುತ್‌ ಮಗ್ಗಗಳಿದ್ದು, ಸುಮಾರು 4.5 ಲಕ್ಷ ಕುಟುಂಬಗಳ 13 ಲಕ್ಷ ಮಂದಿ ನೇಯ್ಗೆ ಉದ್ಯಮದ ಮೇಲೆಅವಲಂಬಿತರಾಗಿದ್ದಾರೆ.ಕೊರೊನಾಪರಿಣಾಮ ನೇಕಾರಿಕೆ ಇಂದು ಸಂಕಷ್ಟದಲ್ಲಿದ್ದು, ನೇಕಾರರು ನೇಯ್ದಬಟ್ಟೆಗಳು ಮಾರಾಟವಾಗದೇ ಸಾಲ ಸೋಲ ಮಾಡಿಬೀದಿ ಪಾಲಾಗುವ ಪರಿಸ್ಥಿತಿ ಬಂದಿದೆ ಎಂದರು.

ಇಂತಹ ಸಂದರ್ಭದಲ್ಲಿ ಸುಧಾರಣಾ ಕಾಯ್ದೆಯನ್ನುರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಂತೆ ಹೊಸದಾಗಿ ವಿದ್ಯುತ್‌ ಘಟಕಗಳನ್ನು ಸ್ಥಾಪನೆ ಮಾಡಿರುವ ನೇಕಾರರಿಗೆ ವಿದ್ಯುತ್‌ ರಿಯಾಯಿತಿ ನಿಲ್ಲಿಸಲಾಗಿದೆ ಆಕ್ರೋಶ ವ್ಯಕ್ತಪಡಿಸಿದರು.

16 ವರ್ಷಗಳಿಂದ ನೇಕಾರರು ಬಳಸುವ 1 ಯೂನಿಟ್‌ ವಿದ್ಯುತ್‌ಗೆ 1.25 ಶುಲ್ಕ ವಿಧಿಸಲಾಗುತ್ತಿದೆ.ಆದರೆ ವಿದ್ಯುತ್‌ ಕ್ಷೇತ್ರ ಖಾಸಗೀಕರಣಗೊಂಡರೆನೇಕಾರರಿಗೆ ವಿದ್ಯುತ್‌ ರಿಯಾಯಿತಿ ಸಿಗುವುದಿಲ್ಲ.ಇದರಿಂದ ನೇಯ್ಗೆ ಉದ್ಯಮ ನಾಶವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಶೀಘ್ರವೇ ಸೀರೆ ಖರೀದಿ ಮಾಡಲು ಮುಂದಾಗಿ ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ ಶೀಘ್ರ ಪರಿಹಾರ ನೀಡಬೇಕು. ನೇಕಾರರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕು. ನೇಕಾರರಿಗೆ ಗುರುತಿನ ಚೀಟಿ ನೀಡಬೇಕು ಎನ್ನುವ ಬೇಡಿಕೆಗಳನ್ನುಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸರ್ಕಾರ ಈ ಕೂಡಲೇ ನೇಕಾರರ ಮನವಿಸಿಗೆ ಸ್ಪಂಧಿಸಿ ಬೇಡಿಕೆಗಳನ್ನು ಈಡೇರಿಸ ಬೇಕೆಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ವಿವಿಧ ನೇಕಾರ ಸಂಘಟನೆಗಳಮುಖಂಡರು ಹಾಜರಿದ್ದರು.

 

ಛಾಯಾಗ್ರಾಹಕರಿಗೆ ಪ್ಯಾಕೇಜ್‌ ಘೋಷಿಸಲು ಒತ್ತಾಯ :

 ಹೊಸಕೋಟೆ: ರಾಜ್ಯ ಹಾಗೂ ಕೇಂದ್ರ ಸರ್ಕಾರಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಛಾಯಾಗ್ರಾಹಕರಸಂಘದ ಅಧ್ಯಕ್ಷ ಎಚ್‌.ಕೆ. ಅಮರನಾಥ್‌ ಮಾತನಾಡಿ, ಕೋವಿಡ್ ಸೋಂಕು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿದ ಲಾಕ್‌ಡೌನ್‌ನಿಂದಾಗಿ ಏಪ್ರೀಲ್‌ನಿಂದ ವಿವಾಹ ಹಾಗೂ ಇತರೆ ಕಾರ್ಯಕ್ರಮಗಳು ಸ್ಥಗಿತಗೊಂಡ ಕಾರಣ ಛಾಯಾಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆಇತರೆ ಅಸಂಘಟಿತ ಕಾರ್ಮಿಕರಿಗೆ ಮಂಜೂರು ಮಾಡಿರುವ ಸೌಲಭ್ಯಗಳನ್ನು ನೀಡುವಂತೆ ಮನವಿ ಸಲ್ಲಿಸಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಹಳಷ್ಟು ಛಾಯಾಗ್ರಾಹಕರು ಮನೆ, ಅಂಗಡಿ ಬಾಡಿಗೆ ಒಳಗೊಂಡಂತೆ ಕುಟುಂಬದ ನಿರ್ವಹಣೆಗೆ, ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗದೆಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಅ.31ರಂದು ರಾಜ್ಯಾದ್ಯಂತ ಛಾಯಾಗ್ರಾಹಕರು ಬೆಂಗಳೂರು ಚಲೋ ಹಮ್ಮಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು ತಾಲೂಕಿನ ಎಲ್ಲಾ ಛಾಯಾಗ್ರಾಹಕರು ಭಾಗವಹಿಸಲಿದ್ದಾರೆ ಎಂದರು.

ಸರ್ಕಾರದ ಯೋಜನೆಗಳನ್ನು ಛಾಯಾಗ್ರಾಹಕರಿಗೂ ವಿಸ್ತರಿಸಬೇಕು. ಛಾಯಾಗ್ರಾಹಕರ ಅಕಾಡೆಮಿ ಸ್ಥಾಪಿಸಿ ಛಾಯಾ ಭವನಕ್ಕೆ ನಿವೇಶನ ನೀಡಬೇಕು. ವ್ಯಾಪಾರದ ನೆರವಿಗೆ ಸರ್ಕಾರದ ಸಂಸ್ಥೆ ಹಾಗೂ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಲ್ಲಿ ಛಾಯಾಗ್ರಾಹಕರು ಕಾರ್ಯಕ್ರಮಗಳ ಛಾಯಚಿತ್ರ ತೆಗೆಯಲು ಅವಕಾಶ ಮಾಡಿಕೊಡಬೇಕು. ವೃತ್ತಿನಿರತ ಛಾಯಾಗ್ರಾಹಕರಿಗೆ ಪಿಂಚಣಿಯೋಜನೆ ಜಾರಿಗೊಳಿಸಿ ಕುಟುಂಬದ ಸದಸ್ಯರಿಗೆ ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಂತಹ ನೆರವು ನೀಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಎಂ.ಸಿ.ಮುನಿರಾಜು, ಕಾರ್ಯದರ್ಶಿ ಮಲ್ಲೇಶ್‌, ಖಜಾಂಚಿ ಶಿವಸ್ವರೂಪ್‌, ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.