ವಾಹನಗಳ ವೇಗಕ್ಕೆ ಬಲಿಯಾಗುತ್ತಿವೆ ಕಾಡುಪ್ರಾಣಿಗಳು: ಆಕ್ರೋಶ
Team Udayavani, Oct 21, 2021, 11:43 AM IST
ವಿಜಯಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕು ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ-ಬೆಂಗಳೂರು ರಸ್ತೆಯ ಶಿವನಾಪುರ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದಾಗ ಪೊಲೀಸರ ಮಾಹಿತಿ ಆಧರಿಸಿ ಅರಣ್ಯಧಿಕಾರಿಗಳು ಮೃತ ಜಿಂಕೆಯನ್ನು ವಶಕ್ಕೆ ಪಡೆದ್ದಾರೆ.
ಆಹಾರ, ನೀರು ಅರಸಿ ರಸ್ತೆದಾಟುವ ದಾವಂತದಲ್ಲಿ ವೇಗವಾಗಿ ಚಲಿಸುವ ವಾಹನಕ್ಕೆ ಸಿಲುಕಿ, ನೂರಾರು ಕಾಡು ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿದ್ದರೂ. ಯಾವುದೇ ಕ್ರಮ ಕೈಗೊಳ್ಳದಿರುವುದು ಅರಣ್ಯಾಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಳಿವಿನಂಚಿಗೆ ತಲುಪುತ್ತಿವೆ ವನ್ಯಜೀವಿಗಳು: ನಂದಗುಡಿ ವಲಯದಲ್ಲಿ 1,500ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶವಿದ್ದು, ಸಾವಿರಾರು ಎಕರೆ ಮಾವು, ತೆಂಗು, ಸೀಬೆ, ಗೋಡಂಬಿ, ನೀಲಗಿರಿ, ಹುಣಸೆ ಸೇರಿದಂತೆ ಹಲವು ಬಗೆಯ ತೋಪುಗಳು ಅರಣ್ಯ ಪ್ರದೇಶವನ್ನು ಸುತ್ತುವರಿದಿದೆ. ರಾಜ್ಯ ಹೆದ್ದಾರಿ ಪಕ್ಕದಲ್ಲಿ ಗ್ರಾಮೀಣ ರಸ್ತೆಗಳು ಹಾದು ಹೋಗುತ್ತವೆ. ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರಸ್ತೆಗಳಲ್ಲಿ ವೇಗಮಿತಿ ವಿಧಿಸುವ ಜತೆಗೆ ಚಾಲಕರ ನಿರ್ಲಕ್ಷ್ಯವೂ ಸೇರಿದೆ.
ಇದನ್ನೂ ಓದಿ:- ಟಿ20 ವಿಶ್ವಕಪ್ ನಂತರ ಏಕದಿನ ತಂಡಕ್ಕೂ ಬದಲಿಗೆ ನಾಯಕ! ಕೊಹ್ಲಿಗೆ ಕೊಕ್?
ಅಲ್ಲಲ್ಲಿ ರಸ್ತೆ ಉಬ್ಬು ಗಳನ್ನು ನಿರ್ಮಿಸಬೇಕಿದೆ. ಆದರೆ, ಇಲ್ಲಿ ವೇಗ ಮಿತಿ ನಿಯಮ ನಾಮಫಲಕಕ್ಕೆ ಮಾತ್ರ ಸೀಮಿತವಾಗಿದೆ. ಬಹುತೇಕ ವಾಹನ ಚಾಲಕರಿಗೆ ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿ ಅಥವಾ ಅರಣ್ಯ ಪ್ರದೇಶದಲ್ಲಿನ ರಸ್ತೆಗೂ ವ್ಯತ್ಯಾಸವೇ ಇಲ್ಲದಂತಾಗಿದೆ. ಪ್ರಾಣಿಗಳ ಮಾರಣ ಹೋಮಕ್ಕೆ ಕಡಿವಾಣ ಹಾಕಿ: ಅರಣ್ಯ, ಲೋಕೋಪ ಯೋಗಿ ಇಲಾಖೆ, ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಅಪರೂಪ ದ ವನ್ಯ ಮೃಗಗಳು ವೇಗವಾಗಿ ಬರುವ ವಾಹನ ಗಳಿಗೆ ಸಿಲುಕಿ ಬಲಿಯಾಗುತ್ತಿವೆ ಎಂದು ನಾಗರಿಕರ ಆರೋಪಿಸಿದ್ದಾರೆ.
ವಾಹನ ಗಳನ್ನು ನಿಧಾನಕ್ಕೆ ಚಲಿಸಿ ಎಂಬ ನಾಮ ಫಲಕ ಇಲಾಖೆ ಅಳವಡಿಸಿಲ್ಲ. ವಾಹನಗಳ ವೇಗ ಹಂಪ್ ಅಳವಡಿಸಲು ನಿಯಂತ್ರಣಕ್ಕೆ ಕಾನೂನಿನಲ್ಲಿ ಅವಕಾಶ ವಿದ್ದರೂ ಪಾಲನೆಗೆ ಮುಂದಾಗಿಲ್ಲ ಎಂಬು ದು ನಾಗರಿಕರ ಆರೋಪವಾಗಿದೆ. ಪಿಡಬ್ಲ್ಯುಡಿ ಹಾಗೂ ಪೊಲೀಸ್ ಇಲಾಖೆ ಜಂಟಿ ಯಾಗಿ ಸೂಕ್ತ ಕ್ರಮಕೈಗೊಂಡು ಕಾಡು ಪ್ರಾಣಿಗಳ ಮಾರಣ ಹೋಮಕ್ಕೆ ಕಡಿವಾಣ ಹಾಕ ಬೇಕೆಂಬುದು ಪ್ರಾಣಿ ಪ್ರಿಯರ ಆಗ್ರಹವಾಗಿದೆ.
“ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ರಸ್ತೆಗಳಲ್ಲಿ ವಾಹನಗಳು ವೇಗ ಮಿತಿಯಿಲ್ಲದೆ ಸಂಚರಿಸುತ್ತಿದ್ದು, ತಿಂಗಳಿಗೆ 10ಕ್ಕೂ ಹೆಚ್ಚು ಕಾಡು ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ. ಜಿಂಕೆ ಸತ್ತು ಬಿದ್ದಿದ್ದರೂ ಅರಣ್ಯಾಧಿಕಾರಿಗಳ ಸುಳಿವೇ ಇರಲಿಲ್ಲ.” – ಮಧುಸೂದನ್, ಸ್ಥಳೀಯ ನಿವಾಸಿ.
“ಅಪರಿಚಿತ ವಾಹನಕ್ಕೆ ಸಿಲುಕಿ ಜಿಂಕೆ ಸಾವನ್ನಪ್ಪಿದೆ. ಅಧಿಕಾರಿಗಳು ಮೃತ ಜಿಂಕೆಯನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿ, ಮುಂದಿನ ವಿಧಿ-ವಿಧಾನ ಅನುಸರಿಸಲಾಗಿದೆ. ಕಾಡುಪ್ರಾಣಿಗಳನ್ನು ಸಂರಕ್ಷಿಸಲು ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ತ್ವರಿತವಾಗಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ನಾಮಫಲಕ ಅಳವಡಿಸಿ ಮತ್ತಷ್ಟು ಬಿಗಿ ಕ್ರಮ ವಹಿಸಲಾಗುವುದು.” – ಪುಷ್ಪಲತಾ, ವಲಯ ಅರಣ್ಯಾಧಿಕಾರಿ, ಹೊಸಕೋಟ
ಬಸ್‌ಗೆ ಸಿಲುಕಿ ನವಿಲು ಸಾವು-
ವಿಜಯಪುರ: ವೇಗವಾಗಿ ಬರುತ್ತಿದ್ದ ಖಾಸಗಿ ಬಸ್‌ಗೆ ಸಿಲುಕಿ ನವಿಲು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕು ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ನಂದಗುಡಿ ಹೋಬಳಿಯಲ್ಲಿ ಮೂನಾಲ್ಕು ದಿನಗಳಲ್ಲೇ ಕಾಡು ಪ್ರಾಣಿಗಳ ಮಾರಣ ಹೋಮಕ್ಕೆ 2ನೇ ಬಲಿ ನಂದಗುಡಿ ಹೋಬಳಿ ವ್ಯಾಪ್ತಿಯ ಗಂಗಾಪುರ ಬಳಿ ದಾಟುತ್ತಿದ್ದಾಗ ಮುಳಬಾಗಿಲು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ನವಿಲು ಸಿಲುಕಿ ಸ್ಥಳದಲ್ಲೇ ಸಾವನ್ನಪಿದೆ. ಸುದ್ದಿತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದು, ಮೃತ ನವಿಲನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.